ಕರ್ನಾಟಕ

karnataka

ನೀತಿ ಆಯೋಗದ ಸುಸ್ಥಿರ ಅಭಿವೃದ್ಧಿ ಗುರಿ ಸೂಚ್ಯಂಕದಲ್ಲಿ ರಾಜ್ಯದ ಅಂಕ ಗಣನೀಯ ಸುಧಾರಣೆ : ಸಿಎಂ ಬಿಎಸ್‌ವೈ

By

Published : Jun 29, 2021, 7:51 PM IST

ಯೋಜನೆಯಲ್ಲಿ ಯಾವುದೇ ಅಕ್ರಮ ನಡೆದ್ರೂ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು. ಭದ್ರಾ ಮೇಲ್ಡಂಡೆ, ಎತ್ತಿನ ಹೊಳೆ ಯೋಜನೆಗೆ ಹೆಚ್ಚಿನ ಆದ್ಯತೆ ನೀಡಿ ಆದಷ್ಟು ಬೇಗ ಕೆಲಸ ಮುಗಿಸಿ ರೈತರಿಗೆ ನೀರು ಒದಗಿಸಲು ಕ್ರಮವಹಿಸುತ್ತೇವೆ ಎಂದ್ರು. ಇದಕ್ಕೆ  ಹೆಚ್ಚಿನ ಹಣದ ಅವಶ್ಯಕತೆ ಇದ್ದು, ಸಾಲ ಮಾಡಿಯಾದ್ರೂ ಯೋಜನೆ ಪೂರ್ಣಗೊಳಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ..

sustainable
ಸಿಎಂ ಯಡಿಯೂರಪ್ಪ

ಯಲಹಂಕ :ನೀತಿ ಆಯೋಗದ ಸುಸ್ಥಿರ ಅಭಿವೃದ್ಧಿ ಗುರಿ ಸೂಚ್ಯಂಕದಲ್ಲಿ ರಾಜ್ಯದ ಅಂಕ ಹಾಗೂ ಸ್ಥಾನದಲ್ಲಿ ಗಣನೀಯ ಸುಧಾರಣೆಯಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ರು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ನೀತಿ ಅಯೋಗದ ಸಲಹೆಗಾರರ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ವಿಶ್ವಸಂಸ್ಥೆ ನಿಗದಿಪಡಿಸಿರುವ ಸುಸ್ಥಿರ ಅಭಿವೃದ್ಧಿ ಗುರಿ 2030ರ ಸಾಧನೆಗಾಗಿ ನೀತಿ ಆಯೋಗದ ಎಸ್​ಡಿಜಿ(SDG) ಸಲಹೆಗಾರರಾದ ಸನ್ಯುಕ್ತ ಸಮದ್ದಾರ್​ರೊಂದಿಗೆ ರಾಜ್ಯದ ಸಾಧನೆ ಬಗ್ಗೆ ಚರ್ಚೆ ನಡೆಸಿದ್ರು.

ಯಲಹಂಕ ರೈಲ್ವೆ ನಿಲ್ದಾಣದಲ್ಲಿ ಕಿಸಾನ್ ರೈಲಿಗೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿ ನಂತರ ಮಾಧ್ಯಮದೊಂದಿಗೆ ಮಾತನಾಡಿದ್ರು. ಮುಂದಿನ ದಿನಗಳಲ್ಲಿ ರಾಜ್ಯವನ್ನು ಮೊದಲನೇ ಸ್ಥಾನಕ್ಕೆ ತರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿಸಿದ್ರು. ಗರ್ಭಿಣಿಯರು, ಮಕ್ಕಳು, ಅಪೌಷ್ಠಿಕತೆ, ಲಿಂಗ ಅಸಮಾನತೆ, ವಸತಿ, ಶಿಕ್ಷಣ ಸೇರಿದಂತೆ ಮತ್ತಷ್ಟು ಗಮನ ಹರಿಸುವಂತೆ ಸಭೆಯಲ್ಲಿ ಸಲಹೆ ನೀಡಲಾಗಿದೆ ಎಂದ್ರು.

ರಾಜ್ಯದ ಅಭಿವೃದ್ಧಿ ಸೂಚ್ಯಂಕದ ಕುರಿತಂತೆ ಸಿಎಂ ಯಡಿಯೂರಪ್ಪ ಮಾಹಿತಿ..

ಮತ್ತೊಂದು ಸಭೆಯಲ್ಲಿ ಎತ್ತಿನ ಹೊಳೆ ಮತ್ತು ಭದ್ರ ಮೇಲ್ದಂಡೆ ಯೋಜನೆ ಪ್ರಗತಿ ಪರಿಶೀಲನೆ ಮಾಡಲಾಗಿದೆ. ಎತ್ತಿನಹೊಳೆ ಮೊದಲ ಹಂತದ ಯೋಜನೆಯಲ್ಲಿ ಜುಲೈ ಅಂತ್ಯದಲ್ಲಿ ವೇದಾವತಿಗೆ ನೀರು ಹರಿಸಲು ಸೂಚನೆ ನೀಡಿದ್ದೇನೆ. ಭದ್ರಾ ಮೇಲ್ದಂಡೆ ಯೋಜನೆಯನ್ನ ರಾಷ್ಟ್ರೀಯ ಯೋಜನೆ ಮಾಡುವ ಪ್ರಯತ್ನ ಅಂತಿಮ ಹಂತದಲ್ಲಿದೆ. ಕೇಂದ್ರ ಸಚಿವ ಸಂಪುಟ ಅನುಮೋದನೆ ಸಿಗಬೇಕಿದೆ, ಈ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದ್ರು.

ಯೋಜನೆಯಲ್ಲಿ ಯಾವುದೇ ಅಕ್ರಮ ನಡೆದ್ರೂ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು. ಭದ್ರಾ ಮೇಲ್ಡಂಡೆ, ಎತ್ತಿನ ಹೊಳೆ ಯೋಜನೆಗೆ ಹೆಚ್ಚಿನ ಆದ್ಯತೆ ನೀಡಿ ಆದಷ್ಟು ಬೇಗ ಕೆಲಸ ಮುಗಿಸಿ ರೈತರಿಗೆ ನೀರು ಒದಗಿಸಲು ಕ್ರಮವಹಿಸುತ್ತೇವೆ ಎಂದ್ರು. ಇದಕ್ಕೆ ಹೆಚ್ಚಿನ ಹಣದ ಅವಶ್ಯಕತೆ ಇದ್ದು, ಸಾಲ ಮಾಡಿಯಾದ್ರೂ ಯೋಜನೆ ಪೂರ್ಣಗೊಳಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು.

ಮಾಲ್ ಅಸೋಸಿಯೇಷನ್ ಭೇಟಿ ವಿಚಾರ‌ವಾಗಿ ಪ್ರತಿಕ್ರಿಯೆ ನೀಡಿದ ಸಿಎಂ ಯಡಿಯೂರಪ್ಪ, ಅವರ ನಿಯೋಗ ನಮ್ಮನ್ನು ಭೇಟಿ ಮಾಡಿದ್ದರು. ಕೆಲವು ಷರತ್ತು ಹಾಕಿ ಅನುಮತಿ ನೀಡುವ ಕುರಿತು ಚರ್ಚೆ ಮಾಡುತ್ತೇವೆ. ಸಂಪುಟ ಸಚಿವರ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದರು. ರಮೇಶ್‌ ಜಾರಕಿಹೊಳಿ ದೆಹಲಿ ಭೇಟಿಯ ಬಗ್ಗೆ ಪ್ರತಿಕ್ರಿಯೆ ನೀಡದೆ ನಿರ್ಗಮಿಸಿದ್ರು.

ABOUT THE AUTHOR

...view details