ಕರ್ನಾಟಕ

karnataka

ಆಡಳಿತ ಯಂತ್ರಕ್ಕೆ ಚುರುಕು: ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಸೇರಿ 17 ಐಎಎಸ್ ಅಧಿಕಾರಿಗಳ ವರ್ಗಾವಣೆ

By

Published : May 5, 2022, 6:28 PM IST

Updated : May 6, 2022, 7:24 AM IST

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿ ತುಷಾರ್ ಗಿರಿನಾಥ್ ಅವರನ್ನು ನೇಮಕ ಮಾಡಲಾಗಿದೆ.

tushar-girinath-appointed-as-bbmp-commissioner-gaurav-gupta-transferred
ಬಿಬಿಎಂಪಿ ಆಯುಕ್ತರಾಗಿ ತುಷಾರ್ ಗಿರಿನಾಥ್ ನೇಮಕ

ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಆರಂಭಿಸಿದ್ದಾರೆ. ಈ ಬೆನ್ನಲ್ಲೇ ಬಿಬಿಎಂಪಿ ಮುಖ್ಯ ಆಯುಕ್ತರಾಗಿದ್ದ ಗೌರವ್ ಗುಪ್ತ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸ್ಥಾನದಲ್ಲಿದ್ದ ತುಷಾರ್ ಗಿರಿನಾಥ್ ಸೇರಿದಂತೆ 17 ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಚುನಾವಣೆ, ರಾಜಕೀಯ ನಮಗೆ ಬಿಡಿ ನೀವು ಆಡಳಿತ ನೋಡಿಕೊಳ್ಳಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಭೇಟಿ ಸಂದರ್ಭದಲ್ಲಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ವೇಗ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳಿಂದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದು, ಇದೀಗ 17 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ.

ಗೌರವ್ ಗುಪ್ತ ಅವರನ್ನು ಬಿಬಿಎಂಪಿ ಮುಖ್ಯ ಆಯುಕ್ತ ಹುದ್ದೆಯಿಂದ ವರ್ಗಾವಣೆ ಮಾಡಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ವರ್ಗಾವಣೆ ಮಾಡಿದೆ. ತುಷಾರ್ ಗಿರಿನಾಥ್ ಅವರನ್ನು ಬಿಬಿಎಂಪಿಯ ಮುಖ್ಯ ಆಯುಕ್ತರಾಗಿ ನೇಮಕ ಮಾಡಲಾಗಿದೆ. ಪ್ರಸ್ತುತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿರುವ ಟಿ.ಕೆ.ಅನಿಲ್ ಕುಮಾರ್ ಅವರಿಗೆ ಹೆಚ್ಚುವರಿಯಾಗಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿ ವಹಿಸಲಾಗಿದೆ.

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಸೇರಿ 17 ಐಎಎಸ್ ಅಧಿಕಾರಿಗಳ ವರ್ಗಾವಣೆ

ಪಿ.ಪೊನ್ನುರಾಜ್ ಅವರನ್ನು ಮುಖ್ಯಮಂತ್ರಿಗಳ ಕಾರ್ಯದರ್ಶಿ ಹುದ್ದೆಯಿಂದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್-ಇ-ಗೌರ‌್ನೆನ್ಸ್) ಕಾರ್ಯದರ್ಶಿ ಹುದ್ದೆಗೆ ವರ್ಗಾಯಿಸಲಾಗಿದೆ. ಪೊನ್ನುರಾಜ್ ಅವರಿಗೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ(ಕೆಪಿಸಿಎಲ್) ವ್ಯವಸ್ಥಾಪಕ ನಿರ್ದೇಶಕ ಹುದ್ದೆಯನ್ನು ಹೆಚ್ಚುವರಿಯಾಗಿ ವಹಿಸಲಾಗಿದೆ.

ಉಳಿದಂತೆ ಕಾರ್ಮಿಕ ಇಲಾಖೆ ಕಾರ್ಯದರ್ಶಿಯಾಗಿ ಮನೋಜ್ ಜೈನ್, ಖುಷ್ಬೂ ಜಿ ಚೌದರಿ ಅವರನ್ನು ನವದೆಹಲಿಯ ಕರ್ನಾಟಕ ಭವನದ ಉಪ ಸ್ಥಾನಿಕ ಆಯುಕ್ತರಾಗಿ, ಡಾ.ಕೆ.ರಾಜೇಂದ್ರ ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ, ಎಂ.ಜಿ.ಹಿರೇಮಠ್ ಅವರನ್ನು ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆಆರ್‌ಐಡಿಎಲ್) ವ್ಯವಸ್ಥಾಪಕ ನಿರ್ದೇಶಕರಾಗಿ, ನಿತೇಶ್ ಪಾಟಿಲ್ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ, ಗುರುದತ್ತ ಹೆಗಡೆ ಅವರನ್ನು ಧಾರವಾಡ ಜಿಲ್ಲಾಧಿಕಾರಿಯಾಗಿ, ಡಾ.ವೈ.ನವೀನ್ ಭಟ್ ಅವರನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ದೇಶಕರಾಗಿ (ಪರ್ಸನಲ್), ಟಿ.ಭೂಬಾಲನ್ ಅವರನ್ನು ಬಾಗಲಕೋಟೆ ಜಿಲ್ಲಾಧಿಕಾರಿ ಹುದ್ದೆಗೆ, ಡಾ.ದಿಲೇಶ್ ಸಸಿ ಅವರನ್ನು ಎಲೆಕ್ಟ್ರಾನಿಕ್ ಡಿಲೆವರಿ ಸಿಟಿಝನ್ ಸರ್ವಿಸ್(ಎಡಿಸಿಎಸ್) ಡಿಪಿಎಆರ್(ಇ-ಗೌರ‌್ನೆನ್ಸ್) ನಿರ್ದೇಶಕರಾಗಿ, ಎಸ್. ಭರತ್ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ(ಎನ್‌ಡ್ಲ್ಯುಕೆಆರ್‌ಟಿಸಿ) ವ್ಯವಸ್ಥಾಪಕ ನಿರ್ದೇಶಕರಾಗಿ, ಎಂ.ಶಿಲ್ಪ ಅವರನ್ನು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಜಂಟಿ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ, ಎಚ್.ಪ್ರಸನ್ನ ಅವರನ್ನು ಉಡುಪಿ ಜಿಲ್ಲಾ ಪಂಚಾಯತ್ ಸಿಇಒ ಆಗಿ, ಡಾ.ಗಿರಿಶ್ ದಿಲಿಪ್ ಬಡೋಲೆ ಅವರನ್ನು ಕಲಬುರಗಿ ಜಿಲ್ಲಾ ಪಂಚಾಯತ್ ಸಿಇಒ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ:ಪಿಎಸ್ಐ ಸಮವಸ್ತ್ರ ಧರಿಸಿದ್ದ ಕಾನ್​​ಸ್ಟೇಬಲ್‌ ಸಸ್ಪೆಂಡ್

Last Updated :May 6, 2022, 7:24 AM IST

ABOUT THE AUTHOR

...view details