ಕರ್ನಾಟಕ

karnataka

ಸಮಾಜದ ಶಾಂತಿ ಕದಡುವ, ಕೋಮುಗಲಭೆ ಸೃಷ್ಟಿಸುವ ಸಂಘಟನೆ ನಿಷೇಧ ಮಾಡಿದರೆ ತಪ್ಪೇನು?: ಸಿದ್ದರಾಮಯ್ಯ

By

Published : May 3, 2023, 10:14 PM IST

ಬಜರಂಗದಳ ನಿಷೇಧಿಸುವ ವಿಚಾರ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧಿಸುವ ಘೋಷಣೆಯನ್ನ ಪ್ರತಿಪಕ್ಷ ನಾಯಕ, ವರುಣಾ ಕ್ಷೇತ್ರದ ಅಭ್ಯರ್ಥಿಯೂ ಆಗಿರುವ ಸಿದ್ದರಾಮಯ್ಯ ಅವರು ಸಮರ್ಥಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರ ಪ್ರಸ್ತಾಪಿಸಿರುವ ಅವರು, ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಮತ್ತು ಕೋಮು ಗಲಭೆಗಳಲ್ಲಿ ಭಾಗಿಯಾಗುವ ಸಂಘಟನೆಗಳ‌ ವಿರುದ್ಧ ನಿಷೇಧವೂ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದೇವೆ. ಇದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ.

ಜನರಿಗೆ ಬೇಕಿರುವುದು ಆಹಾರ, ಉದ್ಯೋಗ, ನೆಮ್ಮದಿಯಿಂದ ಬದುಕುವ ವಾತಾವರಣ. ಇದನ್ನು ಒದಗಿಸಬೇಕಿರುವುದು ಜನರಿಂದ ಆಯ್ಕೆಯಾದ ಸರ್ಕಾರದ ಕರ್ತವ್ಯ. ಕೋಮುಗಲಭೆ ಸೃಷ್ಟಿಸುವವರ ಮೇಲೆ ಕಠಿಣ ಕ್ರಮ ತೆಗೆದುಕೊಂಡರೆ ಸಮಾಜ ಘಾತುಕರಿಗೆ ನೋವಾಗಬೇಕು, ಬಿಜೆಪಿಗೆ ಯಾಕೆ ಆಗುತ್ತಿದೆ? ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

ಇದನ್ನೂ ಓದಿ :ಕರ್ನಾಟಕ ಚುನಾವಣೆ 2023: 2018ಕ್ಕೆ ಹೋಲಿಸಿದರೆ ಅಪರಾಧ ಹಿನ್ನೆಲೆ ಹೊಂದಿದ ಅಭ್ಯರ್ಥಿಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳ.. ADR ವರದಿ

ಕಾಂಗ್ರೆಸ್ ಪಕ್ಷ ಮಂಗಳವಾರ ಬಿಡುಗಡೆ ಮಾಡಿದ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳ ಹಾಗೂ ಪಿಎಫ್​ಐ ಸಂಘಟನೆಗಳನ್ನು ನಿಷೇಧಿಸುವುದಾಗಿ ಹೇಳಿತ್ತು. ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಈ ಕಾರ್ಯ ಮಾಡುವುದಾಗಿ ತಿಳಿಸಿತ್ತು. ಇದಕ್ಕೆ ಬಜರಂಗದಳ, ಹಿಂದೂ ಪರ ಸಂಘಟನೆಗಳು ಹಾಗೂ ಬಿಜೆಪಿ ಪಕ್ಷ ತೀವ್ರ ವಿರೋಧ ವ್ಯಕ್ತಪಡಿಸಿವೆ.

ರಾಜ್ಯಾದ್ಯಂತ ಇದಕ್ಕೆ ತೀವ್ರ ಪ್ರತಿರೋಧ ವ್ಯಕ್ತವಾದ ಹಿನ್ನೆಲೆ ಕಾಂಗ್ರೆಸ್ ಪಕ್ಷ ತನ್ನ ನಿರ್ಧಾರವನ್ನು ಹಿಂಪಡೆಯಬಹುದು ಎಂದು ಹೇಳಲಾಗಿತ್ತು. ಆದರೆ ನಿನ್ನೆ ಇಡೀ ಪಕ್ಷದ ರಾಷ್ಟ್ರೀಯ ನಾಯಕರು ತಮ್ಮ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಒಂದಿಷ್ಟು ಸಮರ್ಥನೆ ಮಾಡಿಕೊಂಡಿದ್ದರು. ಆದರೆ ಇಂದು ಈ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸಹ ಮಾತನಾಡಿದ್ದು, ಯಾವುದೇ ಕಾರಣಕ್ಕೂ ತಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ. ಇದೇ ದಾಟಿಯಲ್ಲಿ ಟ್ವಿಟ್​ ಮಾಡಿರುವ ಸಿದ್ದರಾಮಯ್ಯ ಅವರು ಸಹ ಪಕ್ಷದ ನಿರ್ಧಾರಕ್ಕೆ ಬದ್ಧವಾಗಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ :ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮ ಗೌಡ, ತುಳಸಿ ಗೌಡರಿಂದ ಆಶೀರ್ವಾದ ಪಡೆದ ಪ್ರಧಾನಿ ಮೋದಿ

ಯಾವುದೇ ಕಾರಣಕ್ಕೂ ನಾವು ಹನುಮಂತನ ವಿರುದ್ಧ ಮಾತನಾಡಿಲ್ಲ. ಬಜರಂಗದಳಕ್ಕೂ ಹನುಮಂತನಿಗೆ ಯಾವುದೇ ಸಂಬಂಧ ಇಲ್ಲ. ರಾಜ್ಯದ ಶಾಂತಿ ಕದಡುವ ಯತ್ನ ಮಾಡುತ್ತಿರುವ ಬಜರಂಗದಳದಂತಹ ಸಂಘಟನೆಗಳ ನಿಷೇಧಕ್ಕೆ ಮುಂದಾಗುತ್ತೇವೆ ಎಂದು ಹೇಳಿದ್ದೇವೆ. ಎಷ್ಟೇ ವಿರೋಧ ವ್ಯಕ್ತವಾದರೂ ನಾವು ನಮ್ಮ ಮಾತಿಗೆ ಬದ್ಧವಾಗಿರುತ್ತೇವೆ ಮತ್ತು ರಾಜ್ಯದ ಶಾಂತಿ ಕದಡದಂತೆ ಕಾಪಾಡುವ ಯತ್ನ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ :ದಲಿತ ನಾಯಕ ಖರ್ಗೆ ಸಾವು ಬಯಸಿದ ನಿಮ್ಮ ಶಾಸಕನ ವಿರುದ್ಧ ಕ್ರಮವಿಲ್ಲವೇ?: ಮೋದಿಗೆ ಸುರ್ಜೇವಾಲಾ ಪ್ರಶ್ನೆ

ABOUT THE AUTHOR

...view details