ಕರ್ನಾಟಕ

karnataka

weather report: ಆ.9 ರವರೆಗೆ ಕರಾವಳಿಯಲ್ಲಿ ವ್ಯಾಪಕ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

By

Published : Aug 5, 2021, 9:36 PM IST

ರಾಜ್ಯದ ಕರಾವಳಿ ಭಾಗದಲ್ಲಿ ಆ.6 ರಿಂದ 9ರವರೆಗೆ ಗುಡುಗು ಸಹಿತ ಮಳೆ ಮುಂದುವರಿಯಲಿದ್ದು, ಆ.7 ಮತ್ತು 8ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಮುಂದಿನ ಎರಡು ದಿನ ಮಳೆಯಾಗುವ ಹೆಚ್ಚಿನ ನಿರೀಕ್ಷೆಯಿದೆ.

widespread-rain-along-the-coastal-area-until-9th
ಹವಾಮಾನ ವರದಿ

ಬೆಂಗಳೂರು: ಕರಾವಳಿ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಆ.6 ರಿಂದ 9ರವರೆಗೆ ಗುಡುಗು ಸಹಿತ ವ್ಯಾಪಕ ಮಳೆ ಮುಂದುವರಿಯಲಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಹಲವು ಭಾಗಗಳಲ್ಲಿ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ.

ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಆ.7 ಮತ್ತು 8ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಮುಂದಿನ ಎರಡು ದಿನ ಮಳೆಯಾಗುವ ಹೆಚ್ಚಿನ ನಿರೀಕ್ಷೆಯಿದೆ. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುರುವಾರ ನೈರುತ್ಯ ಮುಂಗಾರು ಸಾಮಾನ್ಯವಾಗಿದ್ದು, ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಜಿಲ್ಲೆಗಳ ಬಹುತೇಕ ಎಲ್ಲ ಸ್ಥಳಗಳಲ್ಲಿ ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗಿದೆ.

ಹಲವೆಡೆ ಭಾರಿ ಮಳೆ:ಶಿವಮೊಗ್ಗದ ಆಗುಂಬೆಯಲ್ಲಿ 11 ಸೆಂ.ಮೀ., ಉಡುಪಿಯ ಕೊಲ್ಲೂರು, ಕೊಡಗಿನ ಸಂತಹಳ್ಳಿಯಲ್ಲಿ ತಲಾ 6ಸೆಂ.ಮೀ., ಉತ್ತರ ಕನ್ನಡದ ಸಿದ್ದಾಪುರ, ಸುಬ್ರಹ್ಮಣ್ಯದಲ್ಲಿ ತಲಾ 5 ಸೆಂ.ಮೀ., ಕದ್ರಾ, ಉಡುಪಿಯ ಸಿದ್ದಾಪುರ, ಮೂಡಬಿದ್ರೆ, ಶಿವಮೊಗ್ಗದ ಅಗ್ರಹಾರ ಕೊಣನಂದೂರು, ತಾಳಗುಪ್ಪದಲ್ಲಿ ತಲಾ 4 ಸೆಂ.ಮೀ., ಉತ್ತರ ಕನ್ನಡದ ಜನ್ಮನೆ, ಮಂಚಿಕೆರೆ, ಯಲ್ಲಾಪುರ, ಕೋಟ, ಧರ್ಮಸ್ಥಳ, ಮಂಗಳೂರು, ಶಿವಮೊಗ್ಗದ ತೀರ್ಥಹಳ್ಳಿ ಮತ್ತು ಮಂಡಗದ್ದೆ, ಮಡಿಕೇರಿ, ಭಾಗಮಂಡಲ, ಶೃಂಗೇರಿಯಲ್ಲಿ ತಲಾ 3 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ABOUT THE AUTHOR

...view details