ಕರ್ನಾಟಕ

karnataka

ಹವಾಮಾನ ವರದಿ: ರಾಜ್ಯದಲ್ಲಿ ಮತ್ತೆ ಅಬ್ಬರಿಸಲಿದೆ ಮಳೆ

By

Published : May 24, 2022, 5:40 PM IST

ರಾಜ್ಯದಲ್ಲಿ ಕರಾವಳಿ ಸೇರಿ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಹಾಸನ, ಮಂಡ್ಯ, ಚಿಕ್ಕಮಗಳೂರು, ದಾವಣಗೆರೆಯಲ್ಲಿ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಳೆ
ಮಳೆ

ಬೆಂಗಳೂರು: ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಹಲವೆಡೆ ಇಂದು ಸಂಜೆಯ ವೇಳೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಬಿಡುವು ನೀಡಿದ್ದ ವರುಣ ಮತ್ತೆ ಆರ್ಭಟಿಸುವ ಬಗ್ಗೆ ಎಚ್ಚರಿಸಲಾಗಿದೆ.

ರಾಜ್ಯದಲ್ಲಿ ಕರಾವಳಿ ಸೇರಿ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಹಾಸನ, ಮಂಡ್ಯ, ಚಿಕ್ಕಮಗಳೂರು, ದಾವಣಗೆರೆಯಲ್ಲಿ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲೂ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.

ಓದಿ:ನಾವು ಪಠ್ಯಪುಸ್ತಕವನ್ನು ಕೇಸರಿಮಯ ಮಾಡುತ್ತಿಲ್ಲ, ಕನ್ನಡಕ ಹಾಕಿ ನೋಡುತ್ತಿದ್ದೇವೆ : ಶಿಕ್ಷಣ ಸಚಿವ ಬಿ ಸಿ ನಾಗೇಶ್

ABOUT THE AUTHOR

...view details