ಕರ್ನಾಟಕ

karnataka

ನಾಳೆಯಿಂದ ರಾಜ್ಯದಲ್ಲಿ ಭಾರಿ ಮಳೆ: ದಕ್ಷಿಣ ಒಳನಾಡಿನ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

By ETV Bharat Karnataka Team

Published : Sep 1, 2023, 5:08 PM IST

Updated : Sep 1, 2023, 5:15 PM IST

ಸೆಪ್ಟೆಂಬರ್‌ 2ರಿಂದ 7ರವರೆಗೆ ರಾಜ್ಯದಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಾಳೆಯಿಂದ ರಾಜ್ಯದಲ್ಲಿ ಭಾರಿ ಮಳೆ
ನಾಳೆಯಿಂದ ರಾಜ್ಯದಲ್ಲಿ ಭಾರಿ ಮಳೆ

ಬೆಂಗಳೂರು: ನಾಳೆಯಿಂದ ಸೆಪ್ಟೆಂಬರ್ 7 ರವರೆಗೆ ರಾಜ್ಯದಲ್ಲಿ ಭಾರಿ ವರ್ಷಧಾರೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಖ್ಯವಾಗಿ, ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಮುಂದಿನ 48 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ.

6 ದಿನ ಭಾರಿ ಮಳೆ: ರಾಜ್ಯದಲ್ಲಿ ನೈರುತ್ಯ ಮುಂಗಾರು ಸಕ್ರಿಯಗೊಂಡಿದೆ. ಹೀಗಾಗಿ ಮುಂದಿನ 6 ದಿನಗಳ ಕಾಲ ಜೋರು ಮಳೆ ಬೀಳುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಒಳನಾಡು ಹಾಗೂ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚುಸಹಿತ ಗುಡುಗು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.

ಹಿರಿಯೂರಿನಲ್ಲಿ ಅತಿ ಹೆಚ್ಚು ಮಳೆ: ರಾಜ್ಯದಲ್ಲಿ ನಿನ್ನೆಯಿಂದ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ 12 ಸೆಂ.ಮೀ ಮಳೆಯಾಗಿದೆ. ಹಿಡಕಲ್ ಅಣೆಕಟ್ಟು (ಬೆಳಗಾವಿ ಜಿಲ್ಲೆ), ಮದ್ದೂರು (ಮಂಡ್ಯ ಜಿಲ್ಲೆ), ಕೆಎಸ್‌ಎನ್‌ಡಿಎಂಸಿ ಕ್ಯಾಂಪಸ್​ನಲ್ಲಿ (ಬೆಂಗಳೂರು ನಗರ ಜಿಲ್ಲೆ) 11, ಬೆಂಗಳೂರು ನಗರ 9, ಮಧುಗಿರಿ ಬರಗೂರು (ಎರಡೂ ತುಮಕೂರು ಜಿಲ್ಲೆ), ಬೆಂಗಳೂರು ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಮತ್ತು ರಾಮನಗರದಲ್ಲಿ 7 ಸೆಂ.ಮೀ ಮಳೆ ಬಿದ್ದಿದೆ.

ಸಂಜೆಯ ವೇಳೆ ಬೆಂಗಳೂರಿನಲ್ಲಿ ಮಳೆ:ಬೆಂಗಳೂರು ನಗರದಲ್ಲಿ ಮಧ್ಯಾಹ್ನದವರೆಗೆ ಮೋಡ ಕವಿದ ವಾತಾವರಣವಿದ್ದು, ಸಂಜೆಯ ವೇಳೆಗೆ ಗುಡುಗು, ಮಿಂಚುಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗುರುವಾರ ರಾತ್ರಿಯಿಂದ ಶುಕ್ರವಾರ ಬೆಳಗಿನ ಜಾವದವರೆಗೆ ಗುಟ್ಟಹಳ್ಳಿಯಲ್ಲಿ ಅತಿ ಹೆಚ್ಚು 9.1 ಸೆಂ.ಮೀ ಮಳೆ ಬಿದ್ದಿದೆ. ರಾಜಮಹಲ್‌ನಲ್ಲಿ 4 ಸೆಂ.ಮೀ., ವಿದ್ಯಾರಣ್ಯಪುರದಲ್ಲಿ 8.5, ಕೊಡಿಗೆಹಳ್ಳಿ 6.5, ಅಟ್ಟೂರು ನಾಗೇನಹಳ್ಳಿಯಲ್ಲಿ ತಲಾ 5.8, ಸೆಂ.ಮೀ. ಮಳೆಯಾಗಿದೆ. ಉಳಿದಂತೆ, ಚೌಡೇಶ್ವರಿ ವಾರ್ಡ್ 4.7, ಎಚ್‌ಎಎಲ್ ವಿಮಾನ ನಿಲ್ದಾಣ 4.2, ಸಂಪಂಗಿರಾಮನಗರ 4.0, ನಾಗಪುರ ಹಾಗೂ ನಂದಿನಿ ಲೇಔಟ್‌ನಲ್ಲಿ 3.5, ಮಾರತಹಳ್ಳಿ 3.3, ಗಾಳಿ ಆಂಜನೇಯ ದೇವಸ್ಥಾನ 2.5, ವರ್ತೂರು 2.3 ಹಾಗೂ ಬೆಳ್ಳಂದೂರಿನಲ್ಲಿ 2.1 ಸೆಂ.ಮೀ. ಮಳೆ ಸುರಿದಿದೆ.

ಇದನ್ನೂ ಓದಿ:ತುಂಬೆ ಡ್ಯಾಂನಲ್ಲಿ ಕುಸಿದ ನೀರಿನ ಮಟ್ಟ: ಮಳೆ ಬಾರದಿದ್ದರೆ ಮಂಗಳೂರಿಗೆ ನೀರಿನ ಸಮಸ್ಯೆ

Last Updated :Sep 1, 2023, 5:15 PM IST

ABOUT THE AUTHOR

...view details