ಕರ್ನಾಟಕ

karnataka

ಕ್ರಿಸ್ಮಸ್‌ ಪ್ರಾರ್ಥನೆಗೆಂದು ಚರ್ಚ್‌ಗೆ ತೆರಳುತ್ತಿದ್ದ ಯುವಕ ಬೈಕ್​ ಅಪಘಾತದಲ್ಲಿ ಸಾವು

By

Published : Dec 25, 2022, 1:11 PM IST

ವಿಧಾನಸೌಧ ಸಮೀಪ‌ದ ಗೋಪಾಲಗೌಡ ಜಂಕ್ಷನ್​ನಲ್ಲಿ ಇಂದು ಬೆಳಗ್ಗೆ ರಸ್ತೆ ಅಪಘಾತ ಸಂಭವಿಸಿದೆ. ರಸ್ತೆ ಬದಿಯಲ್ಲಿರುವ ಫುಟ್ ಪಾತ್ ತಡೆಗೋಡೆಗೆ ಬೈಕ್ ಡಿಕ್ಕಿಯಾದ ಪರಿಣಾಮ ಚರ್ಚ್‌ಗೆ ಪ್ರಾರ್ಥನೆ ಮಾಡಲು ತೆರಳುತ್ತಿದ್ದ ಯುವಕ ಮೃತಪಟ್ಟಿದ್ದಾನೆ.

bike accident
ಬೈಕ್​ ಅಪಘಾತ

ಬೆಂಗಳೂರು :ಕ್ರಿಸ್ಮಸ್ ಹಬ್ಬದ ಸಂಭ್ರಮದ ಹಿನ್ನೆಲೆಯಲ್ಲಿ ಸ್ನೇಹಿತನೊಂದಿಗೆ ಚರ್ಚ್‌ನಲ್ಲಿ ಪ್ರಾರ್ಥನೆ ಮಾಡಲು ಬೈಕ್​ನಲ್ಲಿ ತೆರಳುತ್ತಿದ್ದ ಯುವಕನೋರ್ವ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ವಿಧಾನಸೌಧ ಸಮೀಪ‌ ಗೋಪಾಲಗೌಡ ಜಂಕ್ಷನ್​ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಅಲೆಕ್ಸ್ (25) ಸಾವನ್ನಪ್ಪಿದ ಯುವಕ. ಆತನ ಸ್ನೇಹಿತ ಸತೀಶ್​ ಎಂಬಾತನ ಕಾಲಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಕ್ರಿಸ್ಮಸ್ ಸಡಗರದಲ್ಲಿದ್ದ ಅಲೆಕ್ಸ್ ತನ್ನ ಸ್ನೇಹಿತನ ಜೊತೆ ರಾಜಾಜಿನ ನಗರದಿಂದ ಶಿವಾಜಿನಗರದ ಸೆಂಟ್ ಪ್ಯಾಟ್ರಿಕ್ ಚರ್ಚ್‌ಗೆ ಪ್ರಾರ್ಥನೆಗೆ ತೆರಳುತ್ತಿದ್ದ. ವಿಧಾನಸೌಧ ಮಾರ್ಗದಲ್ಲಿ ತೆರಳುತ್ತಿದ್ದಾಗ ಫುಟ್‌​ಪಾತ್ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿದೆ. ಪರಿಣಾಮ ಅಲೆಕ್ಸ್ ಮುಖಕ್ಕೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅತಿ ವೇಗ ಮತ್ತು ಅಜಾಗರೂಕತೆಯ ಚಾಲನೆಯಿಂದ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details