ಕರ್ನಾಟಕ

karnataka

ರಮೇಶ ಜಾರಕಿಹೊಳಿ ಆಪ್ತನ ಮೇಲೆ ಹಲ್ಲೆ ಪ್ರಕರಣ: ಕೂಲಂಕಷ ತನಿಖೆ ಆಗಲಿ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

By ETV Bharat Karnataka Team

Published : Dec 4, 2023, 8:56 PM IST

Updated : Dec 4, 2023, 9:43 PM IST

ರಮೇಶ್​ ಜಾರಕಿಹೊಳಿ ಆಪ್ತನ ಮೇಲೆ ಹಲ್ಲೆ ನಡೆದಿದ್ದು, ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿ
ಬೆಳಗಾವಿ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ : ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಆಪ್ತ ಹಾಗೂ ಬಿಜೆಪಿ ಮುಖಂಡನ ಮೇಲೆ ಕೆಲವರು ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಸೋಮವಾರ ಸಂಜೆ ಜಯನಗರದ ಪೃಥ್ವಿ ಸಿಂಗ್ ಅವರ ಮನೆ ಮುಂದೆ ಐದಾರು ಜನರು ಏಕಾಏಕಿ ಬಂದು, ಹೊರಗೆ ಕರೆದೊಯ್ದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಪೃಥ್ವಿ ಸಿಂಗ್ ಅವರು ಕೆಲವರ ಜೊತೆಗೆ ಮಾತನಾಡುತ್ತಿರುವುದು ಅವರ ಮನೆ ಬಳಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗಾಯಗೊಂಡ ತಕ್ಷಣ ಪೃಥ್ವಿ ಸಿಂಗ್ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂಎಲ್​ಸಿ ಚನ್ನರಾಜ ಹಟ್ಟಿಹೋಳಿ ಹಾಗೂ ಬೆಂಬಲಿಗರೇ ಈ ಘಟನೆಗೆ ಕಾರಣ ಎಂದು ಹಲ್ಲೆಗೊಳಗಾದ ಪೃಥ್ವಿ ಸಿಂಗ್ ಹಾಗೂ ಅವರ ಮಗ ಜಸ್ವೀರ್ ಸಿಂಗ್ ಆರೋಪ ಮಾಡಿದ್ದಾರೆ.

ತನಿಖೆ ಆಗಲಿ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ : ಹಲ್ಲೆ ಆರೋಪ ರಾಜಕೀಯ ಪ್ರೇರಿತವೋ, ಷಡ್ಯಂತ್ರವೋ ಅಂತ ಕೂಲಂಕಷವಾಗಿ ತನಿಖೆ ಆಗಲಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬಿಜೆಪಿ ಮುಖಂಡನ ಮೇಲೆ ಚಾಕು ಇರಿತ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಅವರು, ಏನಾಗಿದೆ ಅಂತ ನನಗೆ ಗೊತ್ತಿಲ್ಲ. ಈಗಷ್ಟೇ ಎಸ್​ಪಿ ಅವರು ನನ್ನ ಗಮನಕ್ಕೆ ತಂದರು. ನಾನು ತಕ್ಷಣ ನನ್ನ ತಮ್ಮನಿಗೆ ಫೋನ್ ಮಾಡಿದೆ. ಹಾಗೇನಾದರೂ ಇದ್ದರೆ ಅವರು ಪೊಲೀಸ್ ದೂರು ಕೊಡಲಿ ಎಂದರು.

ನಾನು ಆ ಹುಡುಗನ ಹೆಸರನ್ನು‌ ಹೇಳಲು ಇಷ್ಟಪಡಲ್ಲ. ಆತ ಬೋಗಸ್, ಇದರ ಹಿಂದೆ ಯಾರಿದ್ದಾರೆ ಅಂತನೂ ಗೊತ್ತಾಗಬೇಕು. ಆತನ (ಪೃಥ್ವಿ ಸಿಂಗ್) ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡವರಿದ್ದಾರೆ. ಈಗ ನಮ್ಮ ಮೇಲೆ ಆರೋಪ ಬಂದಿದೆ. ಆ ತರ ಇದ್ದರೆ ದೂರು ಕೊಡಲಿ, 24 ಗಂಟೆ ಒಳಗೆ ಪೊಲೀಸರು ವರದಿ ಕೊಡಲಿ ಎಂದು ಸಚಿವರು ಹೇಳಿದರು. ಸೂಕ್ತ ತನಿಖೆ ಮಾಡಿ ಅಂತ ನಾನು ಎಸ್‌ಪಿಯವರಿಗೆ ಹೇಳಿದ್ದೇನೆ. ತನಿಖೆ ಆಗಲಿ, ಸತ್ಯಾಸತ್ಯತೆ ಗೊತ್ತಾಗಲಿ. ಇದು ರಾಜಕೀಯ ಪ್ರೇರಿತ ಆರೋಪ. ನಾವು ಶಾಂತಿಪ್ರಿಯರು ಎಂದು ತಿಳಿಸಿದರು.

ಎಪಿಎಂಸಿ ಪೊಲೀಸ್ ಠಾಣೆಗೆ ದೂರು: ಆಸ್ಪತ್ರೆಗೆ ಮಾಜಿ ಶಾಸಕರಾದ ಸಂಜಯ ಪಾಟೀಲ, ಅನಿಲ ಬೆನಕೆ, ಮಾಜಿ ಎಂಎಲ್ಸಿ ಮಹಾಂತೇಶ ಕವಟಗಿಮಠ, ಎಂ.ಬಿ ಜೀರಲಿ ಸೇರಿ ಮತ್ತಿತರರು ಭೇಟಿ ನೀಡಿ ಪೃಥ್ವಿ ಸಿಂಗ್ ಆರೋಗ್ಯ ವಿಚಾರಿಸಿದರು. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇದನ್ನೂ ಓದಿ :ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿ ಮುಸ್ಲಿಂ ಅಂಧ ವೃದ್ಧನ ಮೇಲೆ ಹಲ್ಲೆ: ದೂರು ದಾಖಲು

Last Updated : Dec 4, 2023, 9:43 PM IST

ABOUT THE AUTHOR

...view details