ಕರ್ನಾಟಕ

karnataka

ಬೆಳಗಾವಿ ದಂಡು ಮಂಡಳಿ ಮೇಲೆ ಸಿಬಿಐ ದಾಳಿ

By ETV Bharat Karnataka Team

Published : Nov 18, 2023, 1:55 PM IST

Updated : Nov 18, 2023, 2:46 PM IST

ರಾಜ್ಯದ ಏಕೈಕ ದಂಡು ಮಂಡಳಿ ಕಚೇರಿ ಮೇಲೆ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪದಡಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

cbi attack Contonment board
ಬೆಳಗಾವಿ ದಂಡು ಮಂಡಳಿ ಮೇಲೆ ಸಿಬಿಐ ದಾಳಿ

ಬೆಳಗಾವಿ:ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬೆಳಗಾವಿಯ ದಂಡು ಮಂಡಳಿ ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿರುವ ಘಟನೆ ನಡೆದಿದೆ.

ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿರುವ ದಂಡು ಮಂಡಳಿ ಕಚೇರಿ ಮೇಲೆ ದಾಳಿ ಮಾಡಿದ ಸಿಬಿಐ ಅಧಿಕಾರಿಗಳು ದಂಡು ಮಂಡಳಿಯ ಕೆಲವು ಅಧಿಕಾರಿಗಳನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರು, ದೆಹಲಿ ಸಿಬಿಐ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದು, ದಂಡು ಮಂಡಳಿಯ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಅಭ್ಯರ್ಥಿಯೊಬ್ಬರು ನೀಡಿದ ದೂರಿನ ಅನ್ವಯ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕೇಂದ್ರದ ರಕ್ಷಣಾ ಇಲಾಖೆಯ ವ್ಯಾಪ್ತಿಗೆ ಒಳಪಡುವ ಇದು ರಾಜ್ಯದ ಏಕೈಕ ದಂಡು ಮಂಡಳಿ ಕಚೇರಿ ಆಗಿದೆ. 2021ರಲ್ಲಿ ಕ್ಲರ್ಕ್, ಸ್ಟೆನೋಗ್ರಾಫರ್ ಸೇರಿ 19 ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಎಲ್ಲಾ ವಿಚಾರಗಳ ಬಗ್ಗೆ ಸಿಬಿಐ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

ದೂರುದಾರ ಕ್ಲೇಟನ್ ಕೊಯ್ಲಿಲೊ ಪ್ರತಿಕ್ರಿಯೆ ನೀಡಿದ್ದು, ದಂಡು ಮಂಡಳಿಯಲ್ಲಿ ಕಳೆದ 10 ವರ್ಷಗಳಿಂದ ವಿವಿಧ ಹುದ್ದೆಗಳಲ್ಲಿ ಅಕ್ರಮವಾಗಿ ನೇಮಕ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಹಲವು ಬಾರಿ ದೂರು ನೀಡಿದ್ದರೂ ಪ್ರಯೋಜನ ಆಗಿರಲಿಲ್ಲ. ಅಲ್ಲದೇ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿರಲ್ಲ. ಇಲ್ಲಿರುವ ಸಿಬ್ಬಂದಿಗಳು ಹಣ ಇಲ್ಲದೆ ಯಾವುದೇ ಕೆಲಸ ಮಾಡುವುದಿಲ್ಲ. ದಂಡು ಮಂಡಳಿಯಲ್ಲಿ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಿದ ಕಟ್ಟಡದಲ್ಲಿಯೂ ಅಕ್ರಮ ಎಸಗಿದ್ದಾರೆ. ನಾನು ಸಾಮಾಜಿಕ ಜಾಲತಾಣವಾದ ಎಕ್ಸ್ (ಟ್ವಿಟರ್​ನಲ್ಲಿ) ದೂರಿದ್ದೆ. ಈಗ ಸಿಬಿಐ ದಾಳಿ ಮಾಡಿದ್ದಾರೆ. ದಂಡುಮಂಡಳಿಯ ಎಲ್ಲ ಅವ್ಯವಹಾರ ಸಂಪೂರ್ಣ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ನೇಮಕಾತಿ ಪರೀಕ್ಷಾ ಅಕ್ರಮ ತಡೆಗೆ ಪ್ರತ್ಯೇಕ ಕಾಯ್ದೆ ರಚಿಸಲು ನಿರ್ಧರಿಸಿದ ಸರ್ಕಾರ

Last Updated :Nov 18, 2023, 2:46 PM IST

ABOUT THE AUTHOR

...view details