ಕರ್ನಾಟಕ

karnataka

ಸವದತ್ತಿಯ ರೇಣುಕಾದೇವಿ ದರ್ಶನ ಪಡೆದ ಸಿಎಂ ಬಸವರಾಜ ಬೊಮ್ಮಾಯಿ

By

Published : Nov 3, 2021, 9:01 PM IST

ಎಲ್ಲರ ಅಮ್ಮ ಯಲ್ಲಮ್ಮ ದೇವಿ ದರ್ಶನ ಪಡೆದು, ನಾಡಿನ ಜನರ ಒಳಿತಿಗಾಗಿ ಪ್ರಾರ್ಥಿಸಿದ್ದೇನೆ. ದೀಪಾವಳಿ ಎಲ್ಲರ ಬಾಳಲ್ಲೂ ಬೆಳಕು ಮೂಡಿಸಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

cm-basavaraja-bommai-visits-savadatti-yallamma-temple
ಯಲ್ಲಮ್ಮ ದೇವಿ ದರ್ಶನಾಶೀರ್ವಾದ ಪಡೆದ ಸಿಎಂ

ಬೆಳಗಾವಿ: ಬೆಳಕಿನ ಹಬ್ಬ ದೀಪಾವಳಿ ಅಂಗವಾಗಿ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಟುಂಬ ಸಮೇತವಾಗಿ ಭೇಟಿ ನೀಡಿದರು. ತಮ್ಮ ಕುಲದೇವತೆ ಆದಿಶಕ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದರ್ಶನಾಶೀರ್ವಾದ ಪಡೆದುಕೊಂಡರು.

ಸವದತ್ತಿಯ ರೇಣುಕಾದೇವಿ ದರ್ಶನ ಪಡೆದ ಸಿಎಂ ಬೊಮ್ಮಾಯಿ

ಎಣ್ಣೆಹೊಂಡ ಹಾಗೂ ಪರಶುರಾಮ ಮತ್ತು ಯಲ್ಲಮ್ಮ ದೇವಸ್ಥಾನ ಪ್ರಾಂಗಣದಲ್ಲಿರುವ ದೇವಸ್ಥಾನಗಳಿಗೂ ಭೇಟಿ ನೀಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲರ ಅಮ್ಮ ಯಲ್ಲಮ್ಮ ದೇವಿ ದರ್ಶನ ಪಡೆದು, ನಾಡಿನ ಜನರ ಒಳಿತಿಗಾಗಿ ಪ್ರಾರ್ಥಿಸಿದ್ದೇನೆ. ದೀಪಾವಳಿ ಎಲ್ಲರ ಬಾಳಲ್ಲೂ ಬೆಳಕು ಮೂಡಿಸಲಿ ಎಂದು ಆಶಿಸಿದರು.

ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆಗಿರುವ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಸಯ್ಯ ಹಿರೇಮಠ, ಡಿಸಿ ಎಂ.ಜಿ.ಹಿರೇಮಠ ಉಪಸ್ಥಿತರಿದ್ದರು.

ಇದನ್ನೂ ಓದಿ:ಕನ್ನಡ ಪ್ರೇಮಿ ಗ್ರಂಥಾಲಯ ನಿರ್ಮಾಣಕ್ಕೆ ಮೀನಮೇಷ: ಬೇಸರ ವ್ಯಕ್ತಪಡಿಸಿದ ಸಯ್ಯದ್ ಇಸಾಕ್

ABOUT THE AUTHOR

...view details