ಕರ್ನಾಟಕ

karnataka

ಮಹಾರಾಷ್ಟ್ರದ ಗಡಿಯಲ್ಲಿರುವ ಕುಗನೊಳ್ಳಿ ಚೆಕ್ ಪೋಸ್ಟ್​ಗೆ ಡಿಸಿ ಹಿರೇಮಠ ಭೇಟಿ ಪರಿಶೀಲನೆ

By

Published : Jun 26, 2021, 6:57 PM IST

ರಾಜ್ಯಕ್ಕೆ ಆಗಮಿಸುವ ಸ್ಥಳೀಯ ಪ್ರಯಾಣಿಕರ ಕೋವಿಡ್ ತಪಾಸಣೆಗೆ ಅನುಕೂಲವಾಗುವಂತೆ ಚೆಕ್‌ಪೋಸ್ಟ್ ಬಳಿಯೇ ಕೋವಿಡ್ ತಪಾಸಣಾ ಕೇಂದ್ರವನ್ನು ಸ್ಥಾಪಿಸಿ, ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಹೇಳಿದರು. ಸಂಭವನೀಯ 3ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗುತ್ತಿದೆ..

ಕುಗನೊಳ್ಳಿ ಚೆಕ್ ಪೋಸ್ಟ್
Kuganolli Check Post

ಚಿಕ್ಕೋಡಿ :ಕೋವಿಡ್ 3ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿರುವ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಅವರು ರಾಜ್ಯದ ಗಡಿಭಾಗದಲ್ಲಿರುವ ಕೊಗನೊಳ್ಳಿ ರಾಷ್ಟ್ರೀಯ ಹೆದ್ದಾರಿ ಚೆಕ್ ಪೋಸ್ಟ್​​ಗೆ ಇಂದು ಭೇಟಿ ನೀಡಿ, ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಶೀಲಿಸಿದರು.

ನೆರೆಯ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರು ಆರ್‌ಟಿಪಿಸಿಆರ್‌ ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ವರದಿಯನ್ನು ಹೊಂದಿರುವವರಿಗೆ ಮಾತ್ರ ಪ್ರಯಾಣಿಸಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಒಂದು ವೇಳೆ ಕರ್ನಾಟಕ ರಾಜ್ಯದ ನಿವಾಸಿಗಳು ಮಹಾರಾಷ್ಟ್ರದಿಂದ ಆಗಮಿಸಿದರೆ ಗಡಿಯಲ್ಲಿರುವ ಚೆಕ್ ಪೋಸ್ಟ್​​ಗಳಲ್ಲಿಯೇ ಅವರ ಮಾದರಿಯನ್ನು ಸಂಗ್ರಹಿಸಿ ಆರ್‌ಟಿಪಿಸಿಆರ್‌ ಪರೀಕ್ಷೆಗೆ ಕಳುಹಿಸಬೇಕು. ವರದಿ ಬಂದ ತಕ್ಷಣವೇ ಸಂಬಂಧಿಸಿದ ವ್ಯಕ್ತಿಗಳಿಗೆ ಮಾಹಿತಿ ನೀಡಬೇಕು. ನಂತರ ಅವರ ವರದಿಯನ್ನು ಅವರ ವಿಳಾಸಕ್ಕೆ ಕಳುಹಿಸಿಕೊಡಬೇಕು ಎಂದು ಚೆಕ್‌ಪೋಸ್ಟ್​ನಲ್ಲಿನ ಕರ್ತವ್ಯ ನಿರತ ಆರೋಗ್ಯ ಇಲಾಖೆಯ ತಂಡಗಳಿಗೆ ನಿರ್ದೇಶನ ನೀಡಿದರು.

ಇದನ್ನೂ ಓದಿ:ಕಾಲು ಬಾಯಿ ಜ್ವರಕ್ಕೆ 5 ಹಸುಗಳು ಬಲಿ: ಆತಂಕದಲ್ಲಿ ಹೈನುಗಾರಿಕೆ ಉದ್ಯಮ

ರಾಜ್ಯಕ್ಕೆ ಆಗಮಿಸುವ ಸ್ಥಳೀಯ ಪ್ರಯಾಣಿಕರ ಕೋವಿಡ್ ತಪಾಸಣೆಗೆ ಅನುಕೂಲವಾಗುವಂತೆ ಚೆಕ್‌ಪೋಸ್ಟ್ ಬಳಿಯೇ ಕೋವಿಡ್ ತಪಾಸಣಾ ಕೇಂದ್ರವನ್ನು ಸ್ಥಾಪಿಸಿ, ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಹೇಳಿದರು. ಸಂಭವನೀಯ 3ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗುತ್ತಿದೆ.

ಹಾಗಾಗಿ, ಗಡಿಭಾಗದ ಚೆಕ್ ಪೋಸ್ಟ್​​ಗಳಲ್ಲಿ ಹೆಚ್ಚಿನ ನಿಗಾವಹಿಸಬೇಕು. ಸರ್ಕಾರದ ಮಾರ್ಗಸೂಚಿ ಪ್ರಕಾರ ಅಂತಾರಾಜ್ಯ ಪ್ರಯಾಣಿಕರಿಂದ ಸಮರ್ಪಕ ಮಾಹಿತಿ ಪಡೆಯಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ABOUT THE AUTHOR

...view details