ಕರ್ನಾಟಕ

karnataka

ಬೆಳಗಾವಿ: ನದಿತೀರದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

By

Published : Jul 12, 2022, 10:31 AM IST

ಬೆಳಗಾವಿಯಲ್ಲಿ ಭಾರಿ ಮಳೆಯಾಗುತ್ತಿದ್ದು ನದಿತೀರದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ ನೀಡಿ ಪ್ರವಾಹ ನಿರ್ವಹಣೆಯ ಸಿದ್ದತೆಗಳನ್ನು ಪರಿಶೀಲಿಸಿದರು.

dc visited to riverside areas
ಪ್ರವಾಹ ನಿರ್ವಹಣೆ ಸಿದ್ಧತೆ ಪರಿಶೀಲನೆ

ಬೆಳಗಾವಿ: ನೆರೆಯ ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯಾದ್ಯಂತ ನಾಲ್ಕೈದು ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ವೇದಗಂಗಾ ಮತ್ತು ದೂದಗಂಗಾ ನದಿತೀರದ ಪ್ರದೇಶಗಳಿಗೆ ಖುದ್ದಾಗಿ ತೆರಳಿ ಪ್ರವಾಹ ನಿರ್ವಹಣೆಯ ಸಿದ್ಧತೆಗಳನ್ನು ಪರಿಶೀಲಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಸೇರಿದಂತೆ ಸಂಬಂಧಪಟ್ಟ ವಿವಿಧ ಇಲಾಖೆಯ ಅಧಿಕಾರಿಗಳು ಡಿಸಿ ಜೊತೆಗಿದ್ದರು. ನಿಪ್ಪಾಣಿ ತಾಲ್ಲೂಕಿನ ವೇದಗಂಗಾ ನದಿಪಾತ್ರದ ಕೋಡ್ನಿ ಗ್ರಾಮಕ್ಕೆ ತೆರಳಿದ ಜಿಲ್ಲಾಧಿಕಾರಿಗಳು, ವೇದಗಂಗಾ ಮತ್ತು ಉಪನದಿಯ ನದಿಯ ಹರಿವಿನ ಪ್ರಮಾಣ ಹಾಗೂ ಅಪಾಯದ ಮಟ್ಟದ ಕುರಿತು ಮಾಹಿತಿ ಪಡೆದುಕೊಂಡರು.

ಕಳೆದ ಬಾರಿಯ ಅನುಭವ ಆಧರಿಸಿ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿಭಾಯಿಸಬೇಕು. ಯಾವುದೇ ಕಾರಣಕ್ಕೂ ಜನ ಮತ್ತು ಜಾನುವಾರುಗಳ ಪ್ರಾಣ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇದಾದ ಬಳಿಕ ಯಮಗರ್ಣಿ ಸೇತುವೆ ವೀಕ್ಷಿಸಿದ ಅವರು, ಅತೀ ಹೆಚ್ಚು ಮಳೆಯಿಂದಾಗಿ ಕಳೆದ ಕೆಲವು ವರ್ಷಗಳಲ್ಲಿ ಉದ್ಭವಿಸಿರುವ ಸಮಸ್ಯೆಗಳ ಕುರಿತು ಸ್ಥಳೀಯ ಅಧಿಕಾರಿಗಳ ಜತೆ ಚರ್ಚಿಸಿದರು. ಕಂದಾಯ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:ಕರಾವಳಿಯ ಮಳೆ ಹಾನಿ ಪ್ರದೇಶಗಳಿಂದು ಸಿಎಂ ಬೊಮ್ಮಾಯಿ ಭೇಟಿ

TAGGED:

ABOUT THE AUTHOR

...view details