ಕರ್ನಾಟಕ

karnataka

ಕಾಂಗ್ರೆಸ್ - ಬಿಜೆಪಿ ಅಭ್ಯರ್ಥಿ ನಡುವೆ ಬಹಿರಂಗ ಚರ್ಚೆಯಾಗಲಿ: ಗೋವಿಂದ್ ಕಾರಜೋಳ ಸವಾಲ್

By

Published : May 26, 2022, 8:24 PM IST

ರಾಜ್ಯದಲ್ಲಿ ಶಿಕ್ಷಕರ ಸಮಸ್ಯೆ ಹಾಗೂ ಶಿಕ್ಷಣ ವ್ಯವಸ್ಥೆ ಕುರಿತಂತೆ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಮತ್ತು ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪೂರ್ ನಡುವೆ ಒಂದು ಬಹಿರಂಗ ಚರ್ಚೆಯಾಗಬೇಕು. ಈ ಬಹಿರಂಗ ಚರ್ಚೆಗೆ ಉಮೇಶ ಕತ್ತಿ ನೇತೃತ್ವ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಪ್ರಕಾಶ ಹುಕ್ಕೇರಿಗೆ ಬಹಿರಂಗ ಸವಾಲೆಸದಿದ್ದಾರೆ.

let-there-be-open-discussion-between-the-congress-and-bjp-candidate-says-govind-karajola
ಕಾಂಗ್ರೆಸ್ ಅಭ್ಯರ್ಥಿ ಮತ್ತು ಬಿಜೆಪಿ ಅಭ್ಯರ್ಥಿ ನಡುವೆ ಬಹಿರಂಗ ಚರ್ಚೆಯಾಗಲಿ : ಗೋವಿಂದ್ ಕಾರಜೋಳ ಸವಾಲ್

ಬೆಳಗಾವಿ: ರಾಜ್ಯದಲ್ಲಿ ಶಿಕ್ಷಕರ ಸಮಸ್ಯೆ ಹಾಗೂ ಶಿಕ್ಷಣ ವ್ಯವಸ್ಥೆ ಕುರಿತಂತೆ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಮತ್ತು ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪೂರ್ ನಡುವೆ ಒಂದು ಬಹಿರಂಗ ಚರ್ಚೆಯಾಗಬೇಕು. ಈ ಬಹಿರಂಗ ಚರ್ಚೆಗೆ ಉಮೇಶ ಕತ್ತಿ ನೇತೃತ್ವ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಪ್ರಕಾಶ ಹುಕ್ಕೇರಿಗೆ ಬಹಿರಂಗ ಸವಾಲೆಸದಿದ್ದಾರೆ.

ಇಲ್ಲಿನ ಸದಾಶಿವ ನಗರದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಬಹಿರಂಗ ಸಮಾವೇಶದಲ್ಲಿ ಮಾತನಾಡಿ ಕಾರಜೋಳ, ಪ್ರಕಾಶ ಹುಕ್ಕೇರಿ ಹಾಗೂ ಅರುಣ ಶಹಾಪೂರ್ ನಡುವೆ ಶಿಕ್ಷಕರ ಸಮಸ್ಯೆ ಹಾಗೂ ಶಿಕ್ಷಣ ನೀತಿ ಕುರಿತಂತೆ ಒಂದು ಬೃಹತ್ ಚರ್ಚೆಯಾಗಬೇಕು. ಅದಕ್ಕೆ ಒಂದು ವೇದಿಕೆ ನಿರ್ಮಾಣ ಮಾಡಿ ಎಂದು ಸಚಿವ ಉಮೇಶ್ ಕತ್ತಿಗೆ ಹೇಳಿದರು. ನಮ್ಮ ಪದವೀಧರ ಕ್ಷೇತ್ರದ ಅಭ್ಯರ್ಥಿ ಸಜ್ಜನ ರಾಜಕಾರಣಿ.

ಈ ಭಾಗದಲ್ಲಿ ಶಿಕ್ಷಣ, ನೀರಾವರಿ ಹಾಗೂ ಇತರ ಅಭಿವೃದ್ಧಿ ಕುರಿತಂತೆ ಕಾಳಜಿ ಹೊಂದಿದವರು. ಇಂತಹ ವ್ಯಕ್ತಿಗಳು ಈ ಕ್ಷೇತ್ರದಿಂದ ಆಯ್ಕೆಯಾದರೆ ನಮ್ಮ ಘನತೆ ಹೆಚ್ಚುತ್ತದೆ. ಈ ಹಿಂದೆ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಶಿಕ್ಷಕರು ಹಾಗೂ ಪದವೀಧರರ ಕುರಿತು ಅಪಾರ ಕಾಳಜಿ ಹೊಂದಿದ್ದರು. ಹಾಗಾಗಿ ನಮ್ಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು.

ಬಿಜೆಪಿ ಹಮ್ಮಿಕೊಂಡಿದ್ದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಸಚಿವ ಉಮೇಶ್ ಕತ್ತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ

ಹುಕ್ಕೇರಿ ಎಲ್ಲಿ ಅಧಿಕಾರ ಸಿಗುತ್ತದೆಯೋ ಅಲ್ಲಿ ಚುನಾವಣೆಗೆ ನಿಲ್ಲುತ್ತಾರೆ: ಬಳಿಕ ಸಭೆಯನ್ನು ಉದ್ದೇಶಿಸಿ ಸಚಿವ ಉಮೇಶ ಕತ್ತಿ ಮಾತನಾಡಿ, ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆಗೆ ನಿಂತಿರುವ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿರವರು ಈ ಜಿಲ್ಲೆಯಲ್ಲಿ, ಸಂಸದರಾಗಿ, ವಿಧಾನಸಭೆ, ವಿಧಾನ ಪರಿಷತ್ ಎಲ್ಲಾ ಕಡೆಗಳಲ್ಲಿ ಸ್ಪರ್ಧೆ ಮಾಡಿದ್ದಾರೆ. ‌ಆದರೀಗ ಪ್ರಕಾಶ ಹುಕ್ಕೇರಿ ಶಿಕ್ಷಣ ಕ್ಷೇತ್ರಕ್ಕೆ ಸ್ಪರ್ಧಿಸಿದ್ದಾರೆ.

ಪ್ರಕಾಶ ಹುಕ್ಕೇರಿಗೆ ಶಿಕ್ಷಕರ ಬಗ್ಗೆ ಯಾವುದೇ ಕಳಕಳಿ ಇಲ್ಲ. ಶಿಕ್ಷಣ ಕ್ಷೇತ್ರದ ಗಂಧ ಗಾಳಿಯೂ ಪ್ರಕಾಶ ಹುಕ್ಕೇರಿಗೆ ಇಲ್ಲ. ಹಣ ಕೊಡ್ತೀವಿ, ಲ್ಯಾಪ್‌ಟಾಪ್ ಕೊಡ್ತೀವಿ ಎಂದು ಕಾಂಗ್ರೆಸ್ ಅಭ್ಯರ್ಥಿಗಳು ಹೇಳುತ್ತಿದ್ದಾರೆ. ಇವರಿಗಿಂತ ಅರುಣ್ ಶಾಹಾಪುರ ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಅವಕಾಶ ಕೊಡಬೇಕು ಎಂದು ಮನವಿ ಮಾಡಿದರು. ಇದೇ ವೇಳೆ, ಭಾಷಣದಲ್ಲಿ ಪ್ರಕಾಶ ಹುಕ್ಕೇರಿ ನನ್ನ ಸ್ನೇಹಿತ ಎಂದು ಉಮೇಶ ಕತ್ತಿ‌ ಹೇಳಿದರು.

ಬಳಿಕ ಮಾತನಾಡಿದ ಬಿಜೆಪಿ ಪರಿಷತ್ ಅಭ್ಯರ್ಥಿ ಹನುಮಂತ ನಿರಾಣಿ, ರಾಜ್ಯದಲ್ಲಿ ಸರಕಾರಿ ನೌಕರರ ಹಿತ ಕಾಯುವಲ್ಲಿ ಬಿಜೆಪಿ ಪಕ್ಷ ಸದಾ ಕಾರ್ಯ ನಿರ್ವಹಿಸುತ್ತಿದೆ. ಈ ನಿಟ್ಟಿನಲ್ಲಿ 70 ವರ್ಷಗಳ ಬಳಿಕ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡಿ, 7ನೇ ವೇತನ ಆಯೋಗವನ್ನು ಜಾರಿಗೆ ತರುವ ಮೂಲಕ ಸದಾ ಶಿಕ್ಷಕರ ಹಿತವನ್ನೇ ಬಯಸುತ್ತಿದೆ ಎಂದು ಹೇಳಿದರು.

ಕೋವಿಡ್ ಸಂದರ್ಭದಲ್ಲಿ ನಮ್ಮ ಸರ್ಕಾರ ನೌಕರರ ಸಂಬಳ ಕಡಿತ ಮಾಡಿಲ್ಲ. ಸ್ಕಿಲ್, ಡಿಜಿಟಲ್, ಸ್ಟಾರ್ಟ್ ಅಪ್ ಇಂಡಿಯಾದ ಮೂಲಕ ಉದ್ಯೋಗ ಸೃಷ್ಟಿ ಮಾಡಲಾಗಿದೆ. ನರೇಂದ್ರ ಮೋದಿ ಸರ್ಕಾರ ಯುವಕರಿಗೆ ಮುದ್ರಾ ಯೋಜನೆ ಜಾರಿಗೊಳಿಸಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿ ಆಗುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ನಮ್ಮಿಬ್ಬರನ್ನು ಬಹುಮತದಿಂದ ಆರಿಸಿ ತರಬೇಕೆಂದು ಬಿಜೆಪಿ ಅಭ್ಯರ್ಥಿ ಹನುಮಂತ ನಿರಾಣಿ ಮನವಿ ಮಾಡಿದರು.

ಓದಿ :ಡಿಕೆಶಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿರುವುದಕ್ಕೆ ಹೆದರುವ ಅಗತ್ಯವಿಲ್ಲ : ಡಿ ಕೆ ಸುರೇಶ್

ABOUT THE AUTHOR

...view details