ಕರ್ನಾಟಕ

karnataka

ಬೆಳಗಾವಿ: ಮಹಾರಾಷ್ಟ್ರ ಡಿಸಿಎಂ ಫಡ್ನವೀಸ್​​ಗೆ ಕಪ್ಪು ಬಾವುಟ ಪ್ರದರ್ಶಿಸಿದ ಎಂಇಎಸ್

By

Published : May 4, 2023, 3:29 PM IST

Updated : May 4, 2023, 3:53 PM IST

ಬೆಳಗಾವಿಯಯಲ್ಲಿ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನಾವೀಸ್​ ಅವರ ವಿರುದ್ಧ ಘೋಷಣೆ ಕೋಗಿ ಎಂಇಎಸ್​ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರ ಡಿಸಿಎಂ ಫಡ್ನಾವೀಸ್​​ಗೆ ಕಪ್ಪು ಬಾವುಟ ಪ್ರದರ್ಶನ
ಮಹಾರಾಷ್ಟ್ರ ಡಿಸಿಎಂ ಫಡ್ನಾವೀಸ್​​ಗೆ ಕಪ್ಪು ಬಾವುಟ ಪ್ರದರ್ಶನ

ಮಹಾರಾಷ್ಟ್ರ ಡಿಸಿಎಂ ಫಡ್ನವೀಸ್​​ಗೆ ಕಪ್ಪು ಬಾವುಟ ಪ್ರದರ್ಶಿಸಿದ ಎಂಇಎಸ್

ಬೆಳಗಾವಿ :ಮಹಾರಾಷ್ಟ್ರ ಡಿಸಿಎಂ ದೇವೆಂದ್ರ ಫಡ್ನವೀಸ್‌ಗೆ ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ನಾಡದ್ರೋಹಿ ಎಂಇಎಸ್ ಕಾರ್ಯಕರ್ತರು ಉದ್ಧಟತನ ತೋರಿದ್ದಾರೆ. ಬೆಳಗಾವಿಯ ಟಿಳಕ್ ಚೌಕ್​ನಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಎಂಇಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ದೇವೇಂದ್ರ ಫಡ್ನವೀಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಂಇಎಸ್ ವಿರುದ್ಧದ ಪ್ರಚಾರಕ್ಕೆ ಎಂಇಎಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಫಡ್ನವೀಸ್​ಗೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಬೆಳಗಾವಿ ಉತ್ತರ ‌ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ರವಿ ಪಾಟೀಲ ಪರ ಪ್ರಚಾರಕ್ಕೆ ದೇವೇಂದ್ರ ಫಡ್ನವಿಸ್ ಬಂದಿದ್ದರು. ನಿನ್ನೆಯಷ್ಟೇ ಎಂಇಎಸ್ ಪ್ರಚಾರದ ವೇಳೆ, ಬಿಜೆಪಿ ಕಾಂಗ್ರೆಸ್ ಪರ ಪ್ರಚಾರ ಮಾಡುವ ನಾಯಕರಿಗೆ ತಕ್ಕ ಪಾಠ ಕಲಿಸುವಂತೆ ಸಂಜಯ್ ರಾವತ್ ಕರೆ ನೀಡಿದ್ದರು.

ಬಜರಂಗದಳದ ಶಕ್ತಿ ತೋರಿಸಲೇಬೇಕು:ಡಾ ರವಿ ಪಾಟೀಲ‌ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ದೇವೇಂದ್ರ ಫಡ್ನವೀಸ್, ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪಿಸಿ, ಕಾಂಗ್ರೆಸ್ ಪಕ್ಷದವರು ನಮ್ಮ ಸರ್ಕಾರ ಬಂದ್ರೆ ಬಜರಂಗದಳ ನಿಷೇಧ ಹೇರುತ್ತೀವಿ ಅಂತಾರೆ, ಬಜರಂಗದಳ ನಿಷೇಧಿಸಲು ನಿಮ್ಮಪ್ಪನ ಬಳಿ ತಾಕತ್ ಇದೆಯಾ? ಯಾವನ ಅಪ್ಪನಿಗಾದರೂ ಧೈರ್ಯ ಇದೆಯಾ? ಬಜರಂಗದಳ ನಿಷೇಧಿಸಲು ನಿಮ್ಮ ಬಳಿ ಧೈರ್ಯ ತಾಕತ್ ಇಲ್ಲ? ಬಜರಂಗದಳ ನಿಷೇಧ ಮಾಡ್ತೀವಿ ಅಂದ್ರೆ ಇದರ ಅರ್ಥ ಏನು? ಖರ್ಗೆ ಸುದ್ದಿಗೋಷ್ಠಿ ವೇಳೆ ಯಾವ ರೀತಿ ಕುಂಕುಮ ಅಳಿಸಿಕೊಂಡರು ಗೊತ್ತಲ್ಲ. ಈ ದೇಶದಲ್ಲಿ ಕುಂಕುಮ ಹಚ್ಚಿಕೊಳ್ಳಲು ನಾಚಿಕೊಳ್ಳೋರನ್ನ ಆರಿಸಿ ತರಬೇಕಾ? ಬಜರಂಗದಳ ನಿಷೇಧಕ್ಕೆ ಧೈರ್ಯ ಮಾಡೋರಿಗೆ ಬಜರಂಗದಳದ ಶಕ್ತಿ ತೋರಿಸಲೇಬೇಕು ಎಂದರು.

ನಾವೆಲ್ಲ ಬಜರಂಗಬಲಿ ಭಕ್ತರು. ಬಜರಂಗಬಲಿಗೆ ತನ್ನ ಶಕ್ತಿ ತೋರಿಸುವ ಅವಶ್ಯಕತೆ ಇರಲಿಲ್ಲ.‌ ಕಾಂಗ್ರೆಸ್‌ ಪಕ್ಷದ ನಿಯತ್ತು ಹೇಗಿದೆ ಗೊತ್ತಾ? ರಾಮಸೇತು ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆಗೆ ಬಂದಾಗ ರಾಮ ಕಾಲ್ಪನಿಕ ಅಂತಾ ಅಫಿಡವಿಟ್ ಸಲ್ಲಿಸಿದ್ರು. ರಾಮನ ಅಸ್ತಿತ್ವ ಪ್ರಶ್ನಿಸುವ ಪಕ್ಷ ಒಂದೆಡೆ, ರಾಮ ಮಂದಿರ ಸ್ಥಾಪನೆ ಮಾಡುತ್ತಿರುವ ಪಕ್ಷ ಒಂದೆಡೆ. ಬಜರಂಗಳ ಬ್ಯಾನ್ ಮಾಡಲು ತಾಕತ್ತಿದೆಯೇ?. ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದರು.

ಬಜರಂಗಿ ನಮ್ಮ ಹಿಂದೂ ಸಂಸ್ಕೃತಿಯ ಅಸ್ಮಿತೆ: ಕಾಂಗ್ರೆಸ್ ನಾಯಕರಿಗೆ ಭಜರಂಗದಳ ನಿಷೇಧ ಮಾಡಲು ಆಗಲ್ಲ. ಅಂದು ರಾಮನನ್ನು ವಿರೋಧಿಸಿದವರು ಇಂದು ಹನುಮನನ್ನು ವಿರೋಧಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣ, ಭಜರಂಗಿ ನಮ್ಮ ಹಿಂದೂ ಸಂಸ್ಕೃತಿಯ ಅಸ್ಮಿತೆ. ರಾಮನ ಅಸ್ತಿತ್ವ ಬಗ್ಗೆ ಮಾತನಾಡುವವರಿಗೆ ಮತದಾನ ವೇಳೆ ತಕ್ಕಪಾಠ ಕಲಿಸುವಂತೆ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಕರೆ ನೀಡಿದರು.

ಈ ವೇಳೆ ಸಂಸದೆ ಮಂಗಳಾ ಅಂಗಡಿ, ಬಿಜೆಪಿ ಅಭ್ಯರ್ಥಿ ಡಾ ರವಿ ಪಾಟೀಲ, ಶಾಸಕ‌ ಅನಿಲ ಬೆನಕೆ, ಮುಖಂಡರಾದ ಶಂಕರಗೌಡ ಪಾಟೀಲ, ಮುರುಗೇಂದ್ರಗೌಡ ಪಾಟೀಲ ಸೇರಿ ಮತ್ತಿತರರು ಇದ್ದರು.

ಇದನ್ನೂ ಓದಿ :ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಉದ್ಧಟತನ: ಬೈಕ್​ ರ‍್ಯಾಲಿ, ಪ್ರತಿಭಟನೆಗೆ ನಿರ್ಧಾರ

Last Updated : May 4, 2023, 3:53 PM IST

ABOUT THE AUTHOR

...view details