ಕರ್ನಾಟಕ

karnataka

ಎಸ್​ಸಿ, ಎಸ್​ಟಿ ಮೀಸಲಾತಿ ಕುರಿತು ಎಲ್ಲರೊಂದಿಗೆ ಚರ್ಚಿಸಿಯೇ ವಿಧೇಯಕ ಮಂಡಿಸಿದ್ದೇವೆ: ಮಾಧುಸ್ವಾಮಿ

By

Published : Dec 20, 2022, 1:15 PM IST

ನಿಮ್ಮ ಸಲಹೆ ತೆಗೆದುಕೊಂಡು ನಾವು ಈ ರೀತಿಯಾಗಿ ಮಾಡಿದ್ದೇವೆ. ಈಗ ನಮ್ಮನ್ನು ಟೀಕಿಸುವುದು ಸರಿಯಲ್ಲ ಎಂದು ಕಾಂಗ್ರೆಸ್, ಜೆಡಿಎಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

Minister Madhu Swamy
ಸಚಿವ ಮಾಧುಸ್ವಾಮಿ

ಸಚಿವ ಮಾಧುಸ್ವಾಮಿ

ಬೆಳಗಾವಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿಯ ಬಗ್ಗೆ ಸರ್ವಪಕ್ಷ ಸಭೆ ಕರೆದು ಎಲ್ಲರೊಂದಿಗೆ ಚರ್ಚಿಸಿಯೇ ವಿಧೇಯಕ ಮಂಡಿಸಿದ್ದೇವೆ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಸಿ ಎಸ್ಟಿ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್​ ಪಕ್ಷದವರು ರಾಜಕೀಯ ಸ್ಟಂಟ್ ಶುರು ಮಾಡಿಕೊಂಡಿದ್ದಾರೆ. ಈ ಬಗ್ಗೆ ಎಲ್ಲರ ಜೊತೆಯಲ್ಲಿಯೂ ಚರ್ಚೆ ಮಾಡಿದ್ದೆವು. ಅಲ್ಲದೇ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದವರು ಚರ್ಚೆಯಲ್ಲಿ ಉಪಸ್ಥಿತರಿದ್ದರು. ಹೀಗಿದ್ದ ಮೇಲೂ ಈ ರೀತಿಯಲ್ಲಿ ಟೀಕಿಸುವುದು ಸರಿಯಲ್ಲ. ಇದು ನಿಮಗೆ ಶೋಭೆ ತರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

ಅಲ್ಲದೇ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿಯವರೇ ನೀವು ಚರ್ಚೆಯಲ್ಲಿ ಭಾಗಿಯಾಗಿರಲಿಲ್ವ? ನೀವು ಏನು ಮಾಡುತ್ತೀರೋ ಮಾಡಿ, ನಾವಿದ್ದೇವೆಂದು ಹೇಳಿದವರು ಯಾರು? ನಿಮ್ಮ ಸಲಹೆ ತೆಗೆದುಕೊಂಡು ನಾವು ಈ ರೀತಿಯಾಗಿ ಮಾಡಿದ್ದೇವೆ. ಈಗ ನಮ್ಮನ್ನು ಟೀಕಿಸುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ:ಮುರುಡೇಶ್ವರದಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ: ಚುನಾವಣಾ ರಣಕಹಳೆಗೆ ಸಿದ್ಧತೆ

ABOUT THE AUTHOR

...view details