ಕರ್ನಾಟಕ

karnataka

ಮದ್ಯ ಮಾರಾಟಕ್ಕೆ ಅವಕಾಶ ಬೇಡ: ಸಚಿವ ರಮೇಶ್ ಜಾರಕಿಹೊಳಿ

By

Published : Apr 13, 2020, 7:16 PM IST

ಬೆಳಗಾವಿಯಲ್ಲಿ ಏಪ್ರಿಲ್​ 30ರವರೆಗೂ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು ಎಂದು ಸಚಿವ ರಮೇಶ್​ ಜಾರಕಿಹೊಳಿ ಹೇಳಿದ್ದಾರೆ.

minister ramesh jarkiholi reaction about restart wine stores
ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ:ಏಪ್ರಿಲ್ 30ರವರೆಗೆ ಲಾಕ್‌ಡೌನ್ ಇರುವ ಕಾರಣ ಎಂಎಸ್ಐಎಲ್ ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು ಎಂದು ಜಲಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ಅವರಿಗೆ ಮನವರಿಕೆ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು ಎಂದರು.

ದೆಹಲಿಯ ತಬ್ಲಿಘಿ ಧಾರ್ಮಿಕ ಸಭೆಗೆ ಹೋಗಿ ಬಂದಿರುವವರು ತಮ್ಮ ಸಂಬಂಧಿಕರನ್ನು ಭೇಟಿ ಮಾಡಲು ಹೋಗುವುದು ರೂಢಿ. ಆದ್ದರಿಂದ ಅಂತಹವರನ್ನು ಪತ್ತೆ ಹಚ್ಚುವ ಕೆಲಸ ತುರ್ತಾಗಿ ನಡೆಸಬೇಕು. ಇಲ್ಲದಿದ್ದರೆ ಸೋಂಕು ಇನ್ನಷ್ಟು ಹರಡುತ್ತದೆ. ಯಾವುದೇ ಕಾರಣಕ್ಕೂ ಇಂತಹ ಸ್ಥಿತಿ ಉದ್ಭವಿಸಬಾರದು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸೋಂಕಿತರ ಜತೆ ಪ್ರಾಥಮಿಕ ಸಂಪರ್ಕ ಹೊಂದಿರುವ ವ್ಯಕ್ತಿಗಳನ್ನು ಹೋಟೆಲ್ ಅಥವಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಇರಿಸುವ ಬಗ್ಗೆ ಯಾವುದೇ ಗೊಂದಲಕ್ಕೆ ಅವಕಾಶ ನೀಡದೇ ಒಟ್ಟಾರೆ ಸಮಾಜದ ಹಿತದೃಷ್ಟಿಯಿಂದ ಎಲ್ಲಾ ಜನಪ್ರತಿನಿಧಿಗಳು ಜತೆಗೂಡಿ ಕೆಲಸ ಮಾಡಬೇಕಿದೆ. ಇದಕ್ಕೆ ಸಂಬಂಧಿಸಿದಂತೆ ಯಾರೂ ಮಧ್ಯಪ್ರವೇಶಿಸದೇ ಜಿಲ್ಲಾಧಿಕಾರಿಗಳು ಮುಕ್ತವಾಗಿ ಕ್ರಮ ಕೈಗೊಳ್ಳಲು ಅವಕಾಶ ನೀಡೋಣ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ABOUT THE AUTHOR

...view details