ಕರ್ನಾಟಕ

karnataka

ವಾಯುವ್ಯ ಕ್ಷೇತ್ರಕ್ಕೆ ಹುಕ್ಕೇರಿಗೆ ಟಿಕೆಟ್; ಕಾಂಗ್ರೆಸ್‌ಗೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ ಆಪ್ತ

By

Published : May 31, 2022, 9:34 AM IST

ವಿಧಾನ ಪರಿಷತ್ ಚುನಾವಣೆಯಲ್ಲಿ ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಪ್ರಕಾಶ್ ಹುಕ್ಕೇರಿಗೆ ಟಿಕೆಟ್ ನೀಡಿದ್ದಕ್ಕೆ ಬೇಸರಗೊಂಡ ಎನ್.ಬಿ.ಬನ್ನೂರ ಇದೀಗ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

nb-bannura-resigned-to-congress
ವಾಯವ್ಯ ಕ್ಷೇತ್ರಕ್ಕೆ ಹುಕ್ಕೇರಿಗೆ ಟಿಕೆಟ್; ಕಾಂಗ್ರೆಸ್ಸಿಗೆ ರಾಜೀನಾಮೆ ಸಲ್ಲಿಸಿದ ಸಿದ್ದು ಶಿಷ್ಯ

ಬೆಳಗಾವಿ: ಜೂನ್ 13ರಂದು ನಡೆಯಲಿರುವ ವಾಯುವ್ಯ ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆಯಲ್ಲಿ ಪ್ರಕಾಶ್ ಹುಕ್ಕೇರಿಗೆ ಟಿಕೆಟ್ ನೀಡಿದ್ದಕ್ಕೆ ಅಸಮಾಧಾನಗೊಂಡಿರುವ ಎನ್.ಬಿ.ಬನ್ನೂರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ರವಾನಿಸಿದ್ದಾರೆ. ಈ ಹಿಂದೆ ಎರಡು ಬಾರಿ ಕಾಂಗ್ರೆಸ್ ಪಕ್ಷದಿಂದ ಎನ್.ಬಿ.ಬನ್ನೂರ ಪರಾಭವಗೊಂಡಿದ್ದರು. ಕಳೆದ ಬಾರಿ ಕಡಿಮೆ ಮತಗಳ ಅಂತರದಿಂದ ಸೋತಿದ್ದು ಈ ಬಾರಿಯೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: 'ಶಿಕ್ಷಕರ ಕ್ಷೇತ್ರಕ್ಕೆ ನನ್ನನ್ನು ಅಭ್ಯರ್ಥಿ ಮಾಡಲು ಡಿಕೆಶಿ ಮತ್ತು ಸಿದ್ದರಾಮಯ್ಯ ಹೈಕಮಾಂಡ್‌ಗೆ ಸೂಚಿಸಿದ್ದರು. ಹೀಗಾಗಿ ನನಗೆ ಟಿಕೆಟ್ ಸಿಗುತ್ತದೆ ಎಂದು ಚುನಾವಣೆ ಘೋಷಣೆಗೂ ಮುನ್ನ ಪಕ್ಷ ಸಂಘಟನೆ ಮಾಡಿದ್ದೆ. ನಾನು ಗೆಲುವಿನ ಹಾದಿಯಲ್ಲಿ ಇದ್ದಾಗ ಪ್ರಕಾಶ್ ಹುಕ್ಕೇರಿಗೆ ಪಕ್ಷ ಟಿಕೆಟ್ ಘೋಷಣೆ ಮಾಡಿದೆ. ಹೀಗಾಗಿ ವಾಯುವ್ಯ ಶಿಕ್ಷಕರ ಒತ್ತಾಸೆಯ ಮೇರೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಸಿದ್ದರಾಮಯ್ಯನವರೇ ನನ್ನ ಪಕ್ಷೇತರನಾಗಿ ಸ್ಪರ್ಧಿಸಲು ಸೂಚಿಸಿದ್ದಾರೆಂದು ಕೆಲವು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ. ಇದು ಸತ್ಯವಲ್ಲ, ನನಗೆ ಸಿದ್ದರಾಮಯ್ಯರ ಮೇಲೆ ಅಪಾರ ಗೌರವ ಇದೆ. ಸಿದ್ದರಾಮಯ್ಯರಿಗೆ ಕಳಂಕ ಬರಬಾರದೆಂದು ರಾಜೀನಾಮೆ ನೀಡುತ್ತಿದ್ದೇನೆ' ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಕೋವಿಡ್: ಅನಾಥ ಮಕ್ಕಳ ಶಿಕ್ಷಣದ ಜವಾಬ್ದಾರಿ ವಹಿಸಿಕೊಂಡ ಜಿಲ್ಲಾಡಳಿತ

ABOUT THE AUTHOR

...view details