ಕರ್ನಾಟಕ

karnataka

ಮೋಸದ ಎರಡನೇ ಹೆಸರು ಲಕ್ಷ್ಮಿ ಹೆಬ್ಬಾಳ್ಕರ್: ಸಂಜಯ್ ಪಾಟೀಲ್

By

Published : Feb 18, 2023, 10:47 PM IST

Updated : Feb 19, 2023, 12:05 PM IST

ಮೋಸದ ಎರಡೆನೇ ಹೆಸರು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ - ಲಕ್ಷ್ಮಿ ಹೆಬ್ಬಾಳ್ಕರ್ ರಾಜಕೀಯದಲ್ಲಿ ಇಲ್ಲದ ಸಮಯದಲ್ಲಿ ನಾನು ಕಾಮಗಾರಿ ಪ್ರಾರಂಭಿಸಿದ್ದೆ - ಮಾಜಿ ಶಾಸಕ ಸಂಜಯ್​ ಪಾಟೀಲ್

Sanjay Patil reaction on Lakshmi Hebbalkar
ಅವರು ಸೆಗಣಿ ತಿಂದಿದ್ದಾರೆ ಎಂದು ನಾನು ತಿನ್ನುವುದಿಲ್ಲ: ಸಂಜಯ್ ಪಾಟೀಲ್

ಮೋಸದ ಎರಡನೇ ಹೆಸರು ಲಕ್ಷ್ಮಿ ಹೆಬ್ಬಾಳ್ಕರ್: ಸಂಜಯ್ ಪಾಟೀಲ್

ಬೆಳಗಾವಿ: ಮೋಸದ ಎರಡೆನೇ ಹೆಸರು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಅವರು ಅಂದಿನ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಗಡದೇವರಮಠ ಅವರಿಗೆ ಮೋಸ ಮಾಡಿ ಬಿ ಫಾರಂ ತಂದು ರಮೇಶ ಜಾರಕಿಹೊಳಿ ಅವರ ಆಶೀರ್ವಾದದಿಂದ ಆಯ್ಕೆಯಾಗಿ ಈಗ ಅವರಿಗೂ ಮೋಸ ಮಾಡಿದ್ದಾರೆ. ಮೋಸದ ಎರಡನೇ ಹೆಸರು ಲಕ್ಷ್ಮಿ ಹೆಬ್ಬಾಳ್ಕರ್ ಎಂದು ಮಾಜಿ ಶಾಸಕ ಸಂಜಯ್​ ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯ ರಾಜಹಂಸಗಡದಲ್ಲಿ ನಿರ್ಮಾಣ ಹಂತದ ಶಿವಾಜಿ ಮಹಾರಾಜರ ಮೂರ್ತಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆ ತಮ್ಮ ಕನಸು ಎಂದು ಹೇಳುತ್ತಾರೆ. ಅವರು ರಾಜಕೀಯದಲ್ಲಿ ಇಲ್ಲದ ಸಮಯದಲ್ಲಿ ಈ ಯೋಜನೆಯನ್ನು ನಾನು ಮೊದಲು ಅನುದಾನ ತಂದು ಕಾಮಗಾರಿ ಪ್ರಾರಂಭಿಸಿದ್ದೆ. 2008ರಲ್ಲಿ ನಾನು ಶಾಸಕನಾಗಿ ಆಯ್ಕೆಯಾದ ಸಮಯದಲ್ಲಿ ಅಂದಿನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಸಮಯದಲ್ಲಿ ಈ ಸ್ಥಳವನ್ನು ಸ್ವಚ್ಛ ಮಾಡಿ, ಈ ಯೋಜನೆಗೆ ಪ್ರಾರಂಭಿಸಿದ್ದೆ. ಅವತ್ತಿನ ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ಅವರ ಮುಂದೆ ಯೋಜನೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸಚಿವರು ಕಿರುದಾರಿಯಲ್ಲಿ ನಡೆದುಕೊಂಡು ಬಂದು ಈ ಯೋಜನೆಗೆ ಹಣವನ್ನು ಬಿಡುಗಡೆ ಮಾಡಿದ್ದರು ಎಂದು ಹೇಳಿದರು.

ಆ ಸಮಯದಲ್ಲಿ ಈಗಿನ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಯಾವುದೇ ಪಕ್ಷದಿಂದ ಸ್ವರ್ಧೆ ಮಾಡಿರಲಿಲ್ಲ, ಬಿಜೆಪಿ ಸರ್ಕಾರ ಕೊನೆ ಆಡಳಿತ ಅವಧಿ ಕಾಲ 2013ರಲ್ಲಿ ಈ ಯೋಜನೆ ಮಂಜೂರಾತಿ ನೀಡಲಾಗಿತ್ತು. ನಂತರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಯಾವುದೇ ಕಾಮಗಾರಿ ಮುಂದುವರಿಯಲಿಲ್ಲ. ಆದರೆ ಇವತ್ತು ಲಕ್ಷ್ಮಿ ಹೆಬ್ಬಾಳ್ಕರ್ ಈ ಯೋಜನೆ ತಮ್ಮ ಕನಸು ಎಂದು ಹೇಳುತ್ತಾರೆ‌. ಯಾಕೆ ಸುಳ್ಳು ಹೇಳುತ್ತಿರಿ ಎಂದು ಮಾಜಿ ಶಾಸಕ ಸಂಜಯ್​ ಪಾಟೀಲ ಪ್ರಶ್ನೆ ಮಾಡಿದರು.

ನಮ್ಮ ಬಿಜೆಪಿ ನಾಯಕರಿಂದ ಯಾವುದೇ ವಿರೋಧವಿಲ್ಲ:ಈ ಯೋಜನೆ ಮೊದಲು ಪ್ರಾರಂಭ ಮಾಡಿರುವುದು ನಾನು, ಆದರೆ ಇವತ್ತು ಸರ್ಕಾರಿ ಕಾರ್ಯಕ್ರಮವನ್ನು ಕಾಂಗ್ರೆಸ್​ಮಯ ಕಾರ್ಯಕ್ರಮ ಮಾಡುವುದಕ್ಕೆ ಹೋಗುತ್ತಿದ್ದಾರೆ. ಮಹಾರಾಷ್ಟ್ರ, ಕರ್ನಾಟಕ ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡುತ್ತಿದ್ದಾರೆ. ಇದರಿಂದ ನಮಗೆ ಅಸಮಾಧಾನವಿದೆ. ಶಿವಾಜಿ ಮಹಾರಾಜರ ಮೂರ್ತಿ ಉದ್ಘಾಟನೆಗೆ ನಮ್ಮ ಬಿಜೆಪಿ ನಾಯಕರ ಯಾವುದೇ ವಿರೋಧವಿಲ್ಲ, ಇಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗುತ್ತಿದೆ. ಇದರಿಂದ ನಮಗೆ ಬೇಸರ ಆಗಿದೆ ಎಂದು ಹೇಳಿದರು.

ಅಭಿವೃದ್ಧಿ ಯೋಜನೆ ನಡೆಯುವಾಗ ನಾವು ವಿರೋಧ ವ್ಯಕ್ತಪಡಿಸುವುದಿಲ್ಲ. ಆದ್ರೆ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆ ವಿಚಾರದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗುತ್ತಿದೆ. ನಮ್ಮ ಕಾರ್ಯಕರ್ತರು ಈ ಯೋಜನೆಯಲ್ಲಿ ನಿಮ್ಮ ಪಾತ್ರ ಮುಖ್ಯವಾಗಿದೆ. ಆದ್ರೆ ನಿಮಗೆ ಅನ್ಯಾಯವಾಗಿದೆ ಎಂದು ಹೇಳಿದರು. ನಾನು ನಮ್ಮ ಕಾರ್ಯಕರ್ತರಿಗೆ ಹೇಳಿದೆ, ಅವರಂತೆ ನಾನು ಸುಳ್ಳು ಹೇಳುವುದಿಲ್ಲ, ಈ ಯೋಜನೆಗೆ ನಮ್ಮ ವಿರೋಧ ಪಡಿಸುವುದು ಬೇಡ ಎಂದಿದ್ದೇನೆ. ಈ ಯೋಜನೆ ಬಗ್ಗೆ ಸಂಪೂರ್ಣ ದಾಖಲಾತಿ ನಮ್ಮ ಕಡೆಯಿದೆ, ನಾನು ದಾಖಲಾತಿ ಹಿಡಿದುಕೊಂಡು ಮಾತನಾಡುತ್ತೇನೆ ಎಂದು ಮಾಜಿ ಶಾಸಕ ಸಂಜಯ್​ ಪಾಟೀಲ್​ ಹೇಳಿದ್ರು.

ಇದನ್ನೂ ಓದಿ:ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸರ್ಕಾರಿ ಶಿಷ್ಟಾಚಾರ ಉಲ್ಲಂಘಿಸುತ್ತಿದ್ದಾರೆ: ರಮೇಶ್ ಜಾರಕಿಹೊಳಿ

Last Updated :Feb 19, 2023, 12:05 PM IST

ABOUT THE AUTHOR

...view details