ಕರ್ನಾಟಕ

karnataka

ವಿಧಾನಸಭೆ ಚುನಾವಣೆಯಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವೆ: ಸಚಿವ ಬಿ.ಶ್ರೀರಾಮುಲು

By

Published : Mar 15, 2023, 4:53 PM IST

Updated : Mar 15, 2023, 7:03 PM IST

ಅಧಿಕಾರ ಸಿಗುವ ಮುನ್ನವೇ ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟ ಆರಂಭವಾಗಿದ್ದು, ಸಿದ್ದರಾಮಯ್ಯ ಮತ್ತು ಡಿಕೆಶಿ ಕಚ್ಚಾಟದ ಮಧ್ಯೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರೋದು ನಿಶ್ಚಿತ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು.

contesting-from-bellary-rural-constituency-in-elections-minister-b-sreeramulu
ವಿಧಾನಸಭೆ ಚುನಾವಣೆಯಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವೆ: ಸಚಿವ ಬಿ.ಶ್ರೀರಾಮುಲು

ವಿಧಾನಸಭೆ ಚುನಾವಣೆಯಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವೆ: ಸಚಿವ ಬಿ.ಶ್ರೀರಾಮುಲು

ಬಳ್ಳಾರಿ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವೆ ಎಂದು ಸಚಿವ ಬಿ. ಶ್ರೀರಾಮುಲು ಎಂದು ತಿಳಿಸಿದ್ದಾರೆ. ಬಳ್ಳಾರಿ ನಗರದ ಸ್ವಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಹಲವಾರು ವರ್ಷಗಳಿಂದ ಗ್ರಾಮೀಣ ಕ್ಷೇತ್ರದಲ್ಲಿ ಸೇವೆ ಮಾಡಿರುವೆ. ಈಗ ಮತ್ತೊಮ್ಮೆ ಅಲ್ಲಿಂದಲೇ ಸ್ಪರ್ಧೆ ಮಾಡುವೆ. ಈ ಬಗ್ಗೆ ಹೈಕಮಾಂಡ್‌ಗೂ ತಿಳಿಸಿದ್ದು, ಬಹುತೇಕ ಎಲ್ಲರ ಅಪೇಕ್ಷೆ ಮೇರೆಗೆ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವೆ ಎಂದು ಹೇಳಿದರು.

ಅಧಿಕಾರ ಸಿಗುವ ಮುನ್ನವೇ ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟ ಆರಂಭವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕಚ್ಚಾಟದ ಮಧ್ಯೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರೋದು ನಿಶ್ಚಿತ. ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಡಿಕೆಶಿ ನಡುವೆ ಜಗಳ ನಡೆಯುತ್ತಿದೆ. ಇಬ್ಬರು ನಾಯಕರು ತಿರುಕನ ಕನಸು, ಹಗಲು ಕನಸು ಕಾಣುತ್ತಿದ್ದಾರೆ. ಉತ್ತರ ಕರ್ನಾಟಕ ಕಲ್ಯಾಣ, ಕರ್ನಾಟಕದಲ್ಲಿ ಕಾಂಗ್ರೆಸ್ ಬಗ್ಗೆ ಜನರು ಜಾಗೃತರಾಗಿದ್ದಾರೆ. ಕಾಂಗ್ರೆಸ್​ ಪ್ರಬಲವಾಗಿರುವ ಕ್ಷೇತ್ರಗಳಲ್ಲಿ ಗೆಲ್ಲಬೇಕು ಎಂದು ಸಂಕಲ್ಪ ಮಾಡಿದ್ದೇವೆ ಎಂದು ಹೇಳಿದರು.

ಮತ್ತೊಮ್ಮೆ ಉಪ ಮುಖ್ಯಮಂತ್ರಿ ಅಗೋ ಕನಸನ್ನು ಬಿಚ್ಚಿಟ್ಟ ಶ್ರೀರಾಮುಲು:ಕಳೆದ ಬಾರಿ ಉತ್ತರ ಕರ್ನಾಟಕದಲ್ಲಿ ನಮಗೆ ಸಂಖ್ಯೆ ಕಡಿಮೆಯಾಗಿತ್ತು. ಇದರಿಂದಾಗಿ ಸರ್ಕಾರ ರಚನೆ ಮಾಡಲು ಕಷ್ಟವಾಗಿತ್ತು. ಆದರೆ, ಈ ಬಾರಿ ನೂರಕ್ಕೆ ನೂರರಷ್ಟು ಬಹುಮತ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಾಗ ಒಳ್ಳೆಯ ಅವಕಾಶ ನನಗೆ ಸಿಕ್ಕೇ ಸಿಗುತ್ತದೆ ಎಂದು ಹೇಳಿದ ಶ್ರೀರಾಮುಲು ಅವರು ಮತ್ತೊಮ್ಮೆ ಉಪ ಮುಖ್ಯಮಂತ್ರಿ ಅಗೋ ಕನಸನ್ನು ಬಿಚ್ಚಿಟ್ಟರು.

ಸಾರಿಗೆ ಸಿಬ್ಬಂದಿ ಮುಷ್ಕರ ಮಾಡೋದಿಲ್ಲ:ಸಾರಿಗೆ ಸಿಬ್ಬಂದಿ ಮುಷ್ಕರದ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವ ಶ್ರೀರಾಮುಲು ಅವರು, ಸಾರಿಗೆ ಸಿಬ್ಬಂದಿ ಜೊತೆಗೆ ಮಾತನಾಡಿದ್ದೇನೆ. ಯಾವುದೇ ಕಾರಣಕ್ಕೂ ಅವರು ಮುಷ್ಕರ ಮಾಡುವುದಿಲ್ಲ ಎಂದು ಹೇಳಿದರು. ವೇತನ ಪರಿಷ್ಕರಣೆ ವಿಚಾರದಲ್ಲಿ ಸಾರಿಗೆ ಸಿಬ್ಬಂದಿಗಳನ್ನು ಕರೆದು ಮಾತನಾಡಿದ್ದೇನೆ. ಹಣಕಾಸಿನ ಇತಿಮಿತಿಯಲ್ಲಿ ಒಂದಷ್ಟು ಮಾಡ್ತೇನೆ ಎಂದಿದ್ದೆ. ಅದಕ್ಕೆ ಅವರು ಒಪ್ಪಲಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಜೊತೆಗೆ ಮಾತನಾಡಿದ್ದೇನೆ. ಗುರುವಾರ ಅಂತಿಮವಾದ ನಿರ್ಧಾರ ಕೈಗೊಳ್ಳುತ್ತೇವೆ. ಫೆಡರೇಶನ್ ಅವರ ಜೊತೆ ಮಾತನಾಡಲು ಎಂ. ಡಿ ಅನ್ಬುಕುಮಾರ್​ ಅವರಿಗೆ ಸಾರಿಗೆ ಸಿಬ್ಬಂದಿಗಳ ಮನವೊಲಿಸಲು ಸೂಚನೆ ನೀಡಿದ್ದೇವೆ. ವೇತನ ಪರಿಷ್ಕರಣೆ ಮಾಡೋದು ನಿಜ ಎಂದು ಹೇಳಿದರು.

ಜನಾರ್ದನ ರೆಡ್ಡಿಗೆ ಟಾಂಗ್:ಬಿಜೆಪಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಯಾತ್ರೆಯ ಭಾಗವಾಗಿ ಕೊಪ್ಪಳದ ಮಹಾತ್ಮ ಗಾಂಧಿ ವೃತ್ತದಲ್ಲಿ ಮಂಗಳವಾರ ನಡೆದ ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕ ಬಹಿರಂಗ ಸಭೆ ಉದ್ದೇಶಿಸಿ ಅವರು ಮಾತನಾಡಿ "ಆಂಜನೇಯ ಜನಿಸಿದ ನೆಲದಲ್ಲಿ ಧರ್ಮ ಉಳಿಯಬೇಕು. ಸತ್ಯ ಆಳ್ವಿಕೆ ಮಾಡಬೇಕಾದರೆ ಪ್ರಾಮಾಣಿಕ ವ್ಯಕ್ತಿಗಳಿಗೆ ಅದರಲ್ಲೂ ಬಿಜೆಪಿಗೆ ಮತ್ತೊಮ್ಮೆ ಅವಕಾಶ ನೀಡಬೇಕು" ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಪರೋಕ್ಷವಾಗಿ ಆಪ್ತ ಸ್ನೇಹಿತ ಜನಾರ್ದನ ರೆಡ್ಡಿಗೆ ಟಾಂಗ್ ಕೊಟ್ಟರು.

ಇದನ್ನೂ ಓದಿ:ಕಾಂಗ್ರೆಸ್ ಪಕ್ಷದ ಪರಿಸ್ಥಿತಿ ವಿಕ್ರಮ ಮತ್ತು ಬೇತಾಳ ಕಥೆಯಂತಾಗಿದೆ: ಸಚಿವ ಶ್ರೀರಾಮುಲು

Last Updated : Mar 15, 2023, 7:03 PM IST

ABOUT THE AUTHOR

...view details