ಕರ್ನಾಟಕ

karnataka

ಅ.2 -3 ರಂದು ವಿಜಯನಗರ ಉತ್ಸವ ಆಚರಣೆ.. ಮರುಕಳುಸಲಿದೆ ವೈಭವ ಎಂದ್ರು ಆನಂದ್​ ಸಿಂಗ್​​​

By

Published : Sep 25, 2021, 7:36 PM IST

Minister Anand singh

ಅ.2 ಮತ್ತು 3 ರಂದು ಅದ್ಧೂರಿಯಾಗಿ ನಡೆಯಲಿರುವ ವಿಜಯನಗರ ಜಿಲ್ಲಾ ಉತ್ಸವ ಕಾರ್ಯಕ್ರಮದ ಕುರಿತಂತೆ ಇಂದು ವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಖಾತೆ ಸಚಿವ ಆನಂದ್ ಸಿಂಗ್​​​ಅಧಿಕಾರಿಗಳ ಜೊತೆ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದರು.

ಹೊಸಪೇಟೆ (ವಿಜಯನಗರ): ಅ.2 ಮತ್ತು 3 ರಂದು ಅದ್ಧೂರಿಯಾಗಿ ವಿಜಯನಗರ ಜಿಲ್ಲಾ ಉತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಪ್ರವಾಸೋದ್ಯಮ, ಪರಿಸರ ಖಾತೆ ಸಚಿವ ಆನಂದ್ ಸಿಂಗ್ ಹೇಳಿದರು.

ವಿಜಯನಗರ ಉತ್ಸವ ದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆ

ನಗರದಲ್ಲಿ ಆಯೋಜಿಸಿದ್ದ ವಿಜಯನಗರ ಉತ್ಸವ ದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಸಚಿವರು, ಗಾಂಧಿ ಜಯಂತಿಯ ದಿನದಂದು ವಿಜಯನಗರ ಜಿಲ್ಲೆ ಅಧಿಕೃತವಾಗಿ ಉದ್ಘಾಟನೆಯಾಗಲಿದೆ‌. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಎಲ್ಲ ಮಠಾಧೀಶರು, ಶ್ರೀಗಳು, ಸಚಿವರು, ಶಾಸಕರು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದರು.

ಹಬ್ಬದಂತೆ ಆಚರಣೆ:

ಜಿಲ್ಲೆಯ ಜನರ ಬಹುದಿನಗಳ ಬೇಡಿಕೆ ಈಡೇರಿದ್ದು, ಈ ದಿನದ ಸವಿ ನೆನಪಿಗಾಗಿ ಜಿಲ್ಲೆಯ ಎಲ್ಲ ಮನೆಗಳಲ್ಲಿ ರಂಗೋಲಿ, ತಳಿರು ತೋರಣಗಳಿಂದ ಸಿಂಗರಿಸಿ ಹಬ್ಬದಂತೆ ಆಚರಿಸಲಾಗುವುದು. ಎರಡು ದಿನಗಳ ಕಾಲ ನಗರದ ಎಲ್ಲ ಮಳಿಗೆಗಳು ದೀಪಗಳಿಂದ ಕಂಗೊಳಿಸಲಿವೆ. ಮುಂದಿನ‌ ಜನವರಿ ತಿಂಗಳ ಹೊತ್ತಿಗೆ ಜಿಲ್ಲೆಯಲ್ಲಿ ಸರ್ಕಾರಿ ಕಚೇರಿಗಳು ಪ್ರಾರಂಭಿಸಲು ಚಿಂತನೆ ನಡೆದಿದೆ. ‌ಈಗಾಗಲೇ ಎಲ್ಲ ಇಲಾಖೆಗಳ ಕಚೇರಿಗಳ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ಆದಷ್ಟು ಬೇಗ ಪೂರ್ಣಗೊಳ್ಳಲಿವೆ. ಇದಕ್ಕಾಗಿ ಈಗಾಗಲೇ 6 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ವಿಜಯ ರಥ ಮೆರವಣಿಗೆ:

ನಗರದ ವಡಕರಾಯನ ದೇವಸ್ಥಾನದಿಂದ ಜಿಲ್ಲಾ ಕ್ರೀಡಾಂಗಣದವರೆಗೆ ವಿಜಯ ರಥ ಮೆರವಣಿಗೆ ಮಾಡಲಾಗುತ್ತದೆ. ಸಂಜೆ ನಡೆಯುವ ಸಾಂಸ್ಕೃತಿಕ ಮೆರವಣಿಗೆಯಲ್ಲಿ ಸುಮಾರು 80 ತಂಡಗಳು ಪಾಲ್ಗೊಳ್ಳಲಿದ್ದು, ಕೋವಿಡ್ ನಿಯಮಗಳನ್ನು ಪಾಲಿಸಲಾಗುತ್ತದೆ. ಇದೇ ಸಮಯದಲ್ಲಿ ಜಿಲ್ಲೆಯ ಪುಸ್ತಕ ಬಿಡುಗಡೆ ಮಾಡಲಾಗುವುದು ಎಂದರು.

ಸಭೆಯಲ್ಲಿ ವಿಶೇಷಾಧಿಕಾರಿ ಅನಿರುದ್ಧ್ ಶ್ರವಣ್, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಸಂಸದ ದೇವೆಂದ್ರಪ್ಪ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್.ಲಾವಣ್ಯ ಸೇರಿದಂತೆ ಇತರೆ ಅಧಿಕಾರಿಗಳು ಭಾಗಿಯಾಗಿದ್ದರು.

ಇದನ್ನೂ ಓದಿ: ಈ ಹಿಂದೆಯೂ ವಿಧಾನಸಭೆಯಲ್ಲಿ ಲೋಕಸಭೆ ಸ್ಪೀಕರ್ ಭಾಷಣ ; ದಾಖಲೆ ಸಹಿತ ಕಾಂಗ್ರೆಸ್‌ಗೆ ಕಾಗೇರಿ ತಿರುಗೇಟು

ABOUT THE AUTHOR

...view details