ಕರ್ನಾಟಕ

karnataka

ಅಟಲ್ ಬಿಹಾರಿ ವಾಜಪೇಯಿ ಪ್ರಾಣಿ ಶಾಸ್ತ್ರೀಯ ಉದ್ಯಾನವನಕ್ಕೆ ಬಂದ್ರು ಹೊಸ ಅತಿಥಿ!

By

Published : Jan 29, 2023, 1:12 PM IST

Updated : Jan 29, 2023, 1:29 PM IST

ವಿಜಯನಗರದ ಅಟಲ್ ಬಿಹಾರಿ ವಾಜಪೇಯಿ ಪ್ರಾಣಿ ಶಾಸ್ತ್ರೀಯ ಉದ್ಯಾನವನಕ್ಕೆ ಬಿಹಾರದಿಂದ ನಾಲ್ಕು ವರ್ಷದ ಹೆಣ್ಣು ಜಿರಾಫೆಯನ್ನು ತರಲಾಗಿದೆ.

A female giraffe brought from Bihar to the park
ಉದ್ಯಾನವನಕ್ಕೆ ಬಿಹಾರದಿಂದ ತಂದಿರುವ ಹೆಣ್ಣು ಜಿರಾಫೆ

ಹೊಸ ಅತಿಥಿ!

ವಿಜಯನಗರ:ಹಂಪಿ ಕನ್ನಡ ವಿ.ವಿ.ಸಮೀಪದ ಅಟಲ್ ಬಿಹಾರಿ ವಾಜಪೇಯಿ ಪ್ರಾಣಿ ಶಾಸ್ತ್ರೀಯ ಉದ್ಯಾನವನಕ್ಕೆ ಬಿಹಾರದಿಂದ ವಿಶೇಷ ಅತಿಥಿಯ ಆಗಮನವಾಗಿದೆ. ಡಾರ್ವಿನ್ ವಿಕಾಸವಾದಕ್ಕೆ ಕಣ್ಣೆದುರಿನ ಸಾಕ್ಷಿಯಾಗಿ ಪ್ರವಾಸಿಗರೆದುರು ಈ ಅತಿಥಿ ಗೋಚರಿಸಲಿದ್ದಾಳೆ. ಅಷ್ಟಕ್ಕೂ ಈ ಅತಿಥಿ ಯಾರು ಗೊತ್ತೇ? ಈಕೆ ಆಫ್ರಿಕಾದ ಜಿರಾಫೆ.

ಈ ವಿಷಯವನ್ನು ಮಲಪನಗುಡಿಯಲ್ಲಿ ಸಚಿವ ಆನಂದ್ ಸಿಂಗ್ ಮಾಧ್ಯಮದವರೊಂದಿಗೆ ಹಂಚಿಕೊಂಡರು. "ಮೃಗಾಲಯದ ಡಿ.ಸಿ.ಎಫ್ ಕಿರಣ್ ಕುಮಾರ್ ಅವರು ಬಿಹಾರದ ಪಟ್ನಾ ಮೃಗಾಲಯದಿಂದ ಜಿರಾಫೆಯನ್ನು ತರುವಲ್ಲಿ ಆರು ತಿಂಗಳಿಂದ ಪ್ರಯತ್ನಪಟ್ಟಿದ್ದಾರೆ. ಇಲ್ಲಿನ ಮೃಗಾಲಯದಲ್ಲಿ ಅದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ನಾಲ್ಕು ದಿನಗಳ ರಸ್ತೆ ಪ್ರಯಾಣದ ಮೂಲಕ ಬಿಹಾರದಿಂದ ಕರೆತರಲಾಗಿದೆ. 4 ವರ್ಷದ ಈ ಜಿರಾಫೆಗೆ ಮೈಸೂರು ಮೃಗಾಲಯದಿಂದ ಆಗಮಿಸುವ ಮತ್ತೊಂದು ಜಿರಾಫೆ ಜೋಡಿಯಾಗಲಿದೆ" ಎಂದು ಮಾಹಿತಿ ನೀಡಿದರು.

2017ರಲ್ಲಿ ಪ್ರಾರಂಭಿಸಲಾದ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯ ರಾಜ್ಯದ 3ನೇ ಹುಲಿ ಮತ್ತು ಸಿಂಹ ಸಫಾರಿ ಸ್ಥಳವಾಗಿದೆ. ಈಗಾಗಲೇ ಉದ್ಯಾನವನದಲ್ಲಿ ಹುಲಿ, ಸಿಂಹ, ಸ್ಪಾಟರ್ ಜಿಂಕೆ, ಸಾಂಬಾರ್, ಬಾರ್ಕಿಂಗ್ ಜಿಂಕೆ ಮತ್ತು ಇತರ ಪ್ರಾಣಿಗಳಿವೆ. ಮೊಸಳೆಗಳು, ಕತ್ತೆ ಕಿರುಬ, ಚಿರತೆ, ಕರಡಿ, ಆಮೆ, ನರಿ, ಮತ್ತು ಲಂಗೂರ್ ಸೇರಿದಂತೆ 80ಕ್ಕೂ ಹೆಚ್ಚಿನ ಜಾತಿಯ ಪಕ್ಷಿಗಳು ಹಲವು ಪ್ರಾಣಿಗಳಿವೆ. ಇವುಗಳ ಗುಂಪಿಗೆ ಹೊಸದಾಗಿ ಜಿರಾಫೆ ಸೇರ್ಪಡೆಯಾಗಿದೆ. ಹೊಸ ಅತಿಥಿಯ ಆಗಮನದಿಂದ ಮೃಗಾಲಯದ ಜನಪ್ರಿಯತೆ ಹೆಚ್ಚಲಿದೆ.

"ಮೃಗಾಲಯದ ಪ್ರಾಣಿಗಳ ವಿನಿಮಯ ಕಾರ್ಯಕ್ರಮದ ಅಡಿಯಲ್ಲಿ ಮೈಸೂರು ಮೃಗಾಲಯ ನೀಡಿದ ಜೀಬ್ರಾ, ಕಾಡೆಮ್ಮೆ ಮತ್ತಿತರ ಪ್ರಾಣಿಗಳ ಬದಲಾಗಿ ನಾಲ್ಕು ವರ್ಷದ ಹೆಣ್ಣು ಜಿರಾಫೆಯನ್ನು ಪಟ್ನಾ ಮೃಗಾಲಯದಿಂದ ಹಂಪಿ ಮೃಗಾಲಯಕ್ಕೆ ನೀಡಲಾಗಿದೆ. ಇದನ್ನು ತರಲು ಇಲ್ಲಿಂದ ವಿಶೇಷ ಬೋನು, ವಾಹನಗಳಲ್ಲಿ ಹೋಗಿ, ಸತತ ಒಂದು ವಾರ ಕಾಲ ನಿಧಾನವಾಗಿ ಪ್ರಯಾಣಿಸಿ ಇಂದು ಕಮಲಾಪುರದ ಮೃಗಾಲಯಕ್ಕೆ ಬರಲಾಗಿದೆ."

"ಈ ಜಿರಾಫೆಗಾಗಿ ಈಗಾಗಲೇ ವಿಶೇಷವಾದ ಆವರಣವನ್ನು ಸಿದ್ಧಪಡಿಸಲಾಗಿದ್ದು, ಇದಕ್ಕೆ ಬೇಕಾದ ಆಹಾರ ಹಾಗೂ ಆರೈಕೆಯ ವ್ಯವಸ್ಥೆಯಾಗಿದೆ. ಸುದೀರ್ಘ ಪ್ರಯಾಣದಿಂದ ಚೇತರಿಸಿಕೊಂಡ ಜಿರಾಫೆ ಲವ ಲವಿಕೆಯಿಂದಿದೆ" ಎಂದು‌ ಹಂಪಿ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಎಂ.ಎನ್.ಕಿರಣ್ ಮಾಹಿತಿ ನೀಡಿದರು. ಜಿರಾಫೆಯನ್ನು ತರುವಲ್ಲಿ ಕಾರ್ಯನಿರ್ವಹಿಸಿದ ಪಶುವೈದ್ಯಾಧಿಕಾರಿ ಸೇರಿದಂತೆ ಇತರೆ ಸಿಬ್ಬಂದಿಯನ್ನು ಸಚಿವ ಆನಂದ್ ಸಿಂಗ್ ಅಭಿನಂದಿಸಿದ್ದಾರೆ.

ಭಾರತಕ್ಕೆ ಬರಲಿವೆ 12 ಚೀತಾಗಳು: ಭಾರತದಲ್ಲಿ ಚೀತಾ ಸಂತತಿ ಮರೆಯಾಗುತ್ತಿದ್ದು, ದಕ್ಷಿಣ ಆಫಿಕ್ರಾದಿಂದ 12 ಚೀತಾಗಳನ್ನು ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಭಾರತ ಮತ್ತು ಪ್ರಿಟೋರಿಯಾ ನಡುವೆ ಇದಕ್ಕಾಗಿ ಒಪ್ಪಂದ ಆಗಿದೆ.

ಇದನ್ನೂ ಓದಿ:ಸೋಲಾರ್ ಬೇಲಿ ಮುರಿದು ತೋಟಕ್ಕೆ ನುಗ್ಗಿದ ಆನೆ: ಸಿಸಿಟಿವಿ ದೃಶ್ಯ

Last Updated :Jan 29, 2023, 1:29 PM IST

ABOUT THE AUTHOR

...view details