ಕರ್ನಾಟಕ

karnataka

ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನಿಗದಿ ಮಾಡಲು ಉನ್ನತ ಮಟ್ಟದ ಸಭೆ: ಸಚಿವೆ ಕರಂದ್ಲಾಜೆ

By

Published : Sep 4, 2021, 4:03 AM IST

sobha Karandlaje

ರೈತರ ಆದಾಯ ಹೆಚ್ಚಳಕ್ಕಾಗಿ ಉದ್ದಿಮೆದಾರರು-ತಜ್ಞರ ಸಭೆ ನಡೆಸಲಾಗುವುದು ಎಂದು ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಬೀದರ್​​:ದೇಶದಲ್ಲಿ ಕೃಷಿ ಉತ್ಪನ್ನಗಳ ಮಾರುಕಟ್ಟೆ ಮತ್ತು ರಫ್ತು ಕುರಿತಂತೆ ಚರ್ಚಿಸಲು ಇದೇ ಸೆ. 22 ರಂದು ಬೆಂಗಳೂರಿನ ವಿಕಾಸಸೌಧದಲ್ಲಿ ಉನ್ನತ ಮಟ್ಟದ ಸಭೆ ಕರೆಯಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಬೀದರ್ ತಾಲೂಕಿನ ಅಣದೂರು ಗ್ರಾಮದಲ್ಲಿ ಉದ್ದು ಮತ್ತು ಹೆಸರು ಖರೀದಿ ಕೇಂದ್ರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬೀದರ್​ನಲ್ಲಿ ಮಾತನಾಡಿದ ಸಚಿವೆ ಶೋಭಾ ಕರಂದ್ಲಾಜೆ

ಮಹಾಮಾರಿ ಕೋವಿಡ್ ಮಧ್ಯೆ ಕೂಡ ದೇಶದಲ್ಲಿ ಕೃಷಿ ಉತ್ಪನ್ನಗಳಲ್ಲಿ ಹೆಚ್ಚಳ ಕಂಡು ಬಂದಿದೆ. ಹೀಗಾಗಿ ಮಾರುಕಟ್ಟೆ ವ್ಯವಸ್ಥೆ ಸುಧಾರಿಸಲು ದೇಶದ ಉತ್ಪನ್ನಗಳು ವಿದೇಶಕ್ಕೆ ರಫ್ತು ಮಾಡುವ ಕುರಿತು ದಕ್ಷಿಣ ಭಾರತದ ಉದ್ದಿಮೆದಾರರು, ಪರಿಣಿತರು ಹಾಗೂ ಅಧಿಕಾರಿಗಳ ಸಭೆ ಕರೆಯಲಾಗಿದೆ. ಕೇಂದ್ರದ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ತೊಗರಿ ಬೆಲೆ ಹೆಚ್ಚಳ ಕುರಿತು ಪ್ರಯತ್ನಿಸಲಾಗುವುದು. ಪ್ರತಿ ಕ್ವಿಂಟಾಲ್​ ತೊಗರಿಗೆ 8,500 ರೂ. ದರ ನಿಗದಿ ಮಾಡುವಂತೆ ರೈತ ಮುಖಂಡರು ಮನವಿ ಮಾಡಿಕೊಂಡಿದ್ದಾರೆ. ರೈತರ ಮನವಿಯನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದರು.

ಕೃಷಿ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಲಕ್ಷ ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದ್ದಾರೆ. ದೇಶದಲ್ಲಿ ಶೇ.70ರಷ್ಟು ಖ್ಯಾದ್ಯ ತೈಲಗಳನ್ನ ಆಮದು ಮಾಡಿಕೊಳ್ಳಲಾಗುತ್ತಿದ್ದು, ಹೀಗಾಗಿ ಎಣ್ಣೆ ಕಾಳು ಕೃಷಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ರೈತರಿಗೆ ಉಚಿತ ಕಿಟ್​, ಬೀಜ ವಿತರಣೆ ಮಾಡಲು ಚಿಂತನೆ ನಡೆದಿದೆ ಎಂದರು.

ಇದನ್ನೂ ಓದಿರಿ: ಅಫ್ಘಾನಿಸ್ತಾನದ 'ಪಂಜ್​ಶೀರ್'​ ಮೇಲೂ ಹಿಡಿತ ಸಾಧಿಸಿದ ತಾಲಿಬಾನ್​?

ಈ ವೇಳೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್​, ಶಾಸಕ ಬಂಡೆಪ್ಪ ಕಾಶಂಪೂರ್​​ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ABOUT THE AUTHOR

...view details