ಕರ್ನಾಟಕ

karnataka

ರಾಮ ಮಂದಿರ ಭೂಮಿ ಪೂಜೆ: ಬೀದರ್​ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

By

Published : Aug 4, 2020, 9:49 PM IST

ಕಲಂ 144 ಅನ್ವಯ ಜಿಲ್ಲೆಯಾದ್ಯಂತ ಆಗಸ್ಟ್ 4 ರ ಮಧ್ಯರಾತ್ರಿಯಿಂದ 5 ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

DC
ಜಿಲ್ಲಾಧಿಕಾರಿ ರಾಮಚಂದ್ರನ್ ಆರ್

ಬೀದರ್: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಹಮ್ಮಿಕೊಂಡ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಾದ್ಯಂತ ನಿಷೇದಾಜ್ಞೆ

ಕಲಂ 144 ಅನ್ವಯ ಜಿಲ್ಲೆಯಾದ್ಯಂತ ಆಗಸ್ಟ್ 4 ರ ಮಧ್ಯರಾತ್ರಿಯಿಂದ 5 ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮ, ಸಭೆ ಸಮಾರಂಭಗಳು ಮಾಡುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಅಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕಕ್ಕಿಂತ ಹೆಚ್ಚು ಜನರ ಓಡಾಟ ನಿರ್ಬಂಧಿಸಲಾಗಿದ್ದು ಮಾರಕಾಸ್ತ್ರ, ಆಯುಧ ಸೇರಿದಂತೆ ಪಟಾಕಿ ಮಾರಾಟಕ್ಕೂ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ABOUT THE AUTHOR

...view details