ಕರ್ನಾಟಕ

karnataka

ಚಾಮರಾಜನಗರ ದುರಂತ.. ಮೃತ ಕುಟುಂಬಸ್ಥರಿಗೆ ತಲಾ ₹2 ಲಕ್ಷ ಪರಿಹಾರ ಮಂಜೂರು

By

Published : May 22, 2021, 10:35 PM IST

ಮೃತ 24 ವ್ಯಕ್ತಿಗಳ ಕುಟುಂಬಗಳ ಅವಲಂಬಿತ ಸದಸ್ಯರಿಗೆ ತಲಾ 2 ಲಕ್ಷ ರೂ. ಪರಿಹಾರವಾಗಿ ಪಾವತಿಸಲು ಹಣ ಮುಂಜೂರು ಮಾಡಲಾಗಿದೆ..

Compensation for deceased family members
ಮೃತ ಕುಟುಂಬಸ್ಥರಿಗೆ ಪರಿಹಾರ ಮೊತ್ತ ಮಂಜೂರು

ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟ 24 ವ್ಯಕ್ತಿಗಳ ಕುಟುಂಬಸ್ಥರಿಗೆ ತಲಾ ಎರಡು ಲಕ್ಷದಂತೆ 48 ಲಕ್ಷ ರೂ. ಬಿಡುಗಡೆ ಮಾಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಚಾಮರಾಜನಗರ ಜಿಲ್ಲಾಧಿಕಾರಿಗಳಿಗೆ 48 ಲಕ್ಷ ರೂ. ಬಿಡುಗಡೆ ಮಾಡಲು ಮಂಜೂರಾತಿ ನೀಡಿ ಆದೇಶಿಸಲಾಗಿದೆ. ಹೈಕೋರ್ಟ್​ನಲ್ಲಿ ಸರ್ಕಾರ ಚಾಮರಾಜನಗರದಲ್ಲಿನ ಘಟನೆಯಲ್ಲಿ ಮೃತರ‌ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಭರವಸೆ ನೀಡಿ ನಿರ್ದೇಶನ ನೀಡಿತ್ತು.

ಮೃತ 24 ವ್ಯಕ್ತಿಗಳ ಕುಟುಂಬಗಳ ಅವಲಂಬಿತ ಸದಸ್ಯರಿಗೆ ತಲಾ 2 ಲಕ್ಷ ರೂ. ಪರಿಹಾರವಾಗಿ ಪಾವತಿಸಲು ಹಣ ಮುಂಜೂರು ಮಾಡಲಾಗಿದೆ. ಈ ಉದ್ದೇಶಕ್ಕಾಗಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಹಣ ಮಂಜೂರು ಮಾಡಲು ಸರ್ಕಾರ ನಿರ್ಧರಿಸಿದೆ.

ಓದಿ:ಬೆಂಗಳೂರಲ್ಲಿ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವು

ABOUT THE AUTHOR

...view details