ಕರ್ನಾಟಕ

karnataka

ಚಾಮರಾಜನಗರ: ಇಬ್ಬರು ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

By

Published : Sep 27, 2022, 11:28 AM IST

ಇಂದು ಬೆಳಗ್ಗೆ ಚಾಮರಾಜನಗರದಲ್ಲಿ ಪಿಎಫ್​ಐ ಕಾರ್ಯಕರ್ತರ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಇಬ್ಬರು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.

kn_cnr_01
ಪಿಎಫ್​ಐ ಕಾರ್ಯಕರ್ತರ ಮನೆ ಮೇಲೆ ಪೊಲೀಸರ ದಾಳಿ

ಚಾಮರಾಜನಗರ:ನಗರದಲ್ಲಿಂದು ಬೆಳ್ಳಂಬೆಳಗ್ಗೆ ಕಾರ್ಯಾಚರಣೆಗಿಳಿದ ಪೊಲೀಸರು ಇಬ್ಬರು ಪಿಎಫ್​ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಪಿಎಫ್ಐ ಸಂಘಟನೆಯ ಜಿಲ್ಲಾಧ್ಯಕ್ಷ ಕಪಿಲ್ ಹಾಗು ಕಾರ್ಯದರ್ಶಿ ಶೋಯೆಬ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.

ಇಂದು ಬೆಳಗಿನಜಾವ ಪೊಲೀಸರು ದಾಳಿ ನಡೆಸಿದ್ದು, ಇಬ್ಬರು ಪಿಎಫ್​ಐ ಮುಖಂಡರನ್ನು ವಶಕ್ಕೆ ಪಡೆದು ಚಾಮರಾಜನಗರ ತಹಶಿಲ್ದಾರ್ ನಿವಾಸಕ್ಕೆ ಹಾಜರುಪಡಿಸಿದ್ದಾರೆ. ಎನ್ಐಎ ಕೊಟ್ಟ ಮಾಹಿತಿ ಮೇರೆಗೆ ಈ ದಾಳಿ ನಡೆಸಿದ್ದಾರೆ ಎನ್ನಲಾಗ್ತಿದೆ.

ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಇವರಿಬ್ಬರನ್ನು ಬಂಧಿಸಿದ್ದು, ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪಿಎಫ್‌ಐ ಮುಖಂಡರ ಮೇಲೆ ದಾಳಿ.. 9 ಮಂದಿ ಪೊಲೀಸ್​ ವಶಕ್ಕೆ

ABOUT THE AUTHOR

...view details