ಕರ್ನಾಟಕ

karnataka

ಚಾಮರಾಜನಗರ ಆಮ್ಲಜನಕ ದುರಂತ: ಸಂತ್ರಸ್ತ ಕುಟುಂಬಕ್ಕೆ ಸರ್ಕಾರಿ ನೌಕರಿ ಭರವಸೆ ಕೊಟ್ಟ ರಾಹುಲ್​ ಗಾಂಧಿ

By

Published : Sep 30, 2022, 7:30 PM IST

Updated : Oct 1, 2022, 6:39 AM IST

rahul-gandhi-promised-govt-jobs-to-victims-family

ಚಾಮರಾಜನಗರ ಆಮ್ಲಜನಕ ದುರಂತದ ಸಂತ್ರಸ್ತರ ಕುಟುಂಬಕ್ಕೆ ಸರ್ಕಾರಿ ನೌಕರಿ ಕೊಡಬೇಕು ಎಂಬ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ರಾಹುಲ್ ಗಾಂಧಿ ತಮ್ಮ ಸರ್ಕಾರ ಬಂದ ಕೂಡಲೇ ಸಂತ್ರಸ್ತ ಕುಟುಂಬಗಳಿಗೆ ನೌಕರಿ ಕೊಡಿಸುವ ಬಗ್ಗೆ ಭರವಸೆ ನೀಡಿದ್ದಾರೆ.

ಚಾಮರಾಜನಗರ: ಭಾರತ್ ಜೋಡೋ ಯಾತ್ರೆಯ ನಡುವೆ ರಾಹುಲ್ ಗಾಂಧಿ ಗುಂಡ್ಲುಪೇಟೆ ಹೊರವಲಯದ ವೀರನಪುರ ಕ್ರಾಸಿನಲ್ಲಿ ಸೋಲಿಗರು ಮತ್ತು ಆಮ್ಲಜನಕ ದುರಂತ ಸಂತ್ರಸ್ತ ಕುಟುಂಬದ ಜೊತೆಗೆ ಸಂವಾದ ನಡೆಸಿದರು.

ಬಿಳಿಗಿರಿರಂಗನ ಬೆಟ್ಟದ ಮುತ್ತುಗದ್ದೆಪೋಡಿನ ವ್ಯಕ್ತಿಯೊಬ್ಬರು ರಾಹುಲ್​ ಗಾಂಧಿಗೆ ಶುದ್ಧ ಜೇನನ್ನು ನೀಡಿದರು. ಬಳಿಕ ಸಂವಾದದಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಿರು ಅರಣ್ಯ ಉತ್ಪನ್ನ ಸಂಗ್ರಹಕ್ಕೆ ಅವಕಾಶ, ಮಲೆಮಹದೇಶ್ವರ ವನ್ಯಜೀವಿಧಾಮವನ್ನು ಹುಲಿ ಸಂರಕ್ಷಿತ ಪ್ರದೇಶ ಮಾಡಬಾರದು ಎಂದು ಸೋಲಿಗರು ಒತ್ತಾಯಿಸಿದರು ಇದಕ್ಕೆ ರಾಹುಲ್​ ಗಾಂಧಿ ಸಕಾರಾತ್ಮಕವಾಗಿ ಸ್ಪಂದಿಸಿದರು.

ಆಮ್ಲಜನಕ ದುರಂತದ ಸಂತ್ರಸ್ತರು ಅಂದು ನಡೆದ ಕರುಣಾಜನಕ ಕಥೆಗಳನ್ನು ತೆರೆದಿಟ್ಟರು, ಕೊರೊನಾದಿಂದಲೇ ಸತ್ತಿಲ್ಲ ಎಂದು ಸರ್ಕಾರ ಹೇಳುತ್ತಿದೆ ಇದು ಮೊದಲು ಸರಿಯಾಗಬೇಕು. ಮೃತಪಟ್ಟವರ ಕುಟುಂಬಕ್ಕೆ ಸರ್ಕಾರಿ ನೌಕರಿ ಕೊಡಬೇಕು ಎಂಬ ಸಂತ್ರಸ್ತರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ರಾಹುಲ್ ಗಾಂಧಿ ತಮ್ಮ ಸರ್ಕಾರ ಬಂದ ಕೂಡಲೇ ಮೊದಲ ಕೆಲಸ ಸಂತ್ರಸ್ತ ಕುಟುಂಬಗಳಿಗೆ ನೌಕರಿ ಕೊಡಿಸುವುದಾಗಿದೆ ಎಂದಿದ್ದಾರೆ.

ಸಂತ್ರಸ್ಥ ಕುಟುಂಬಕ್ಕೆ ಸರ್ಕಾರಿ ನೌಕರಿ ಭರವಸೆ ಕೊಟ್ಟ ರಾಹುಲ್​ ಗಾಂಧಿ

ಇದನ್ನೂ ಓದಿ :ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಖರ್ಗೆ ನಾಮಪತ್ರ ಸಲ್ಲಿಕೆ ಹೆಮ್ಮೆಯ ವಿಚಾರ: ಪುತ್ರ ಪ್ರಿಯಾಂಕ್

Last Updated :Oct 1, 2022, 6:39 AM IST

ABOUT THE AUTHOR

...view details