ಕರ್ನಾಟಕ

karnataka

ಭೂ ಅಕ್ರಮ ಖಾತೆಗಳನ್ನ ವಜಾಗೊಳಿಸಿ.. ರಾಜ್ಯ ರೈತ ಸಂಘದಿಂದ ಪ್ರತಿಭಟನೆ

By

Published : Oct 18, 2019, 9:57 AM IST

ಅಕ್ರಮ ಖಾತೆಗಳನ್ನ ಮಾಡಿಕೊಟ್ಟಿರುವ ಅಧಿಕಾರಿಗಳನ್ನ ತಕ್ಷಣ ಅಮಾನತುಗೊಳಿಸಬೇಕು ಎಂದು ಅಂಕತಟ್ಟಿ ಗ್ರಾಮಸ್ಥರು ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಮಳ್ಳೂರು ಗ್ರಾಮ ಪಂಚಾಯತ್​ ಮುಂದೆ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಭೂ ಅಕ್ರಮ ಖಾತೆಗಳನ್ನ ವಜಾಗೊಳಿಸಿ...ರೈತರಿಂದ ಪ್ರತಿಭಟನೆ

ಚಿಕ್ಕಬಳ್ಳಾಪುರ:ಅಕ್ರಮ ಖಾತೆಗಳನ್ನ ಮಾಡಿಕೊಟ್ಟಿರುವ ಅಧಿಕಾರಿಗಳನ್ನ ತಕ್ಷಣ ಅಮಾನತುಗೊಳಿಸಬೇಕು ಎಂದು ಅಂಕತಟ್ಟಿ ಗ್ರಾಮಸ್ಥರು ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಮಳ್ಳೂರು ಗ್ರಾಮ ಪಂಚಾಯತ್​ ಮುಂದೆ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಭೂ ಅಕ್ರಮ ಖಾತೆಗಳನ್ನ ವಜಾಗೊಳಿಸಿ.. ರೈತರಿಂದ ಪ್ರತಿಭಟನೆ

ಅಂಕತಟ್ಟಿ ಗ್ರಾಮದ ಮುಖಂಡ ಎಸ್.ವೆಂಕಟರೆಡ್ಡಿ ಮಾತನಾಡಿ, ಅಂಕತಟ್ಟಿ ಗ್ರಾಮದ ಸರ್ವೆ ನಂಬರ್ 7/2 ರಲ್ಲಿ 4.89 ಹೆಕ್ಟೇರ್ (12 ಎಕರೆ 30 ಗುಂಟೆ) ಭೂಮಿ ಇದೆ. ಈ ಭೂಮಿಯನ್ನು ಈವರೆಗೂ ಹೌಸ್‌ಲಿಸ್ಟ್ ಮಾಡಿಲ್ಲ. 4 ಎಕರೆ ಸರ್ಕಾರಿ ಗ್ರಾಮಠಾಣೆ ಜಾಗಕ್ಕೆ ದಾಖಲೆಗಳೇ ಇಲ್ಲ. ಈ ಜಾಗವನ್ನು ಗ್ರಾಮದ ಪ್ರಭಾವಿಗಳು 2017ರಲ್ಲಿ ಒತ್ತುವರಿ ಮಾಡಲು ಪ್ರಯತ್ನ ಮಾಡಿದ್ದರು. ಕೂಡಲೇ ಎಚ್ಚೆತ್ತ ಗ್ರಾಮಸ್ಥರು, ಗ್ರಾಮ ಪಂಚಾಯತ್‌, ತಾಲೂಕು ಪಂಚಾಯತ್‌, ಜಿಲ್ಲಾ ಪಂಚಾಯತ್‌, ಜಿಲ್ಲಾಧಿಕಾರಿ, ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳಿಗೂ ಸೇರಿ ಎಲ್ಲರಿಗೂ ದೂರು ನೀಡಿದ್ದೆವು. ಕೂಡಲೇ ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಇಲಾಖೆಯ ಮೇಲಾಧಿಕಾರಿಗಳು ಆದೇಶ ನೀಡಿದ್ದರು ಎಂದು ತಿಳಿಸಿದರು.

ಮೇಲಾಧಿಕಾರಿಗಳ ಆದೇಶದಂತೆ ಅಂತಕಟ್ಟಿ ಗ್ರಾಮಕ್ಕೆ ಬಂದಿದ್ದ ತಹಶೀಲ್ದಾರ್ ಹಾಗೂ ತಾಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿ, ಸದರಿ ಭೂಮಿಯನ್ನು ಸರ್ವೆ ಮಾಡಿ ಗಡಿ ಗುರುತಿಸಿದ್ದರು. ಸರ್ಕಾರಿ ಗ್ರಾಮಠಾಣಾ ಜಾಗವನ್ನು ಪಂಚಾಯತ್‌ ವಶಕ್ಕೆ ತೆಗೆದುಕೊಳ್ಳುವಂತೆ, ಅಕ್ರಮವಾಗಿ ಅನುಭವದಲ್ಲಿರುವವರಿಗೆ ನೋಟಿಸ್ ಜಾರಿ ಮಾಡುವಂತೆ ಆದೇಶ ಮಾಡಿದ್ದರೂ ಈವರೆಗೂ ಸದರಿ ಭೂಮಿಯನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿಲ್ಲ. ಅಧಿಕಾರಿಗಳು ಶಾಮೀಲಾಗಿ ಸದರಿ ಭೂಮಿಯನ್ನು ನಿಯಮಬಾಹಿರವಾಗಿ ದಾಖಲೆಗಳನ್ನು ಸೃಷ್ಟಿಸಿಕೊಟ್ಟಿದ್ದಾರೆ ಎಂದು ಆರೋಪಿಸಿದರು.

ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ ಎಸ್ ವೆಂಕಟರೆಡ್ಡಿ ಮಾತನಾಡಿ, ಸರ್ಕಾರಿ ಭೂಮಿಯನ್ನು ಉಳಿಸಿ, ಬಡವರಿಗೆ ನಿವೇಶಗಳನ್ನು ಹಂಚಿಕೆ ಮಾಡಬೇಕು ಎಂದು ಹೋರಾಟ ಮಾಡುತ್ತಿರುವವರ ವಿರುದ್ಧ ಪೊಲೀಸರಿಗೆ ದೂರು ನೀಡಿ, ವಿನಾಕಾರಣ ಮಾನಸಿಕ ಹಿಂಸೆ ಮಾಡಲಾಗಿದೆ. ನಿಯಮಬಾಹಿರವಾಗಿ ಮಾಡಿಕೊಟ್ಟ ಖಾತೆಗಳನ್ನು ವಜಾಗೊಳಿಸಬೇಕು. ಅಕ್ರಮ ಖಾತೆಗಳನ್ನು ಮಾಡಲಿಕ್ಕೆ ಸಹಕಾರ ನೀಡಿರುವ ಅಧಿಕಾರಿಗಳನ್ನು ಕೂಡಲೇ ಅಮಾನತ್ತುಪಡಿಸಬೇಕು. ಸದರಿ ಭೂಮಿಯನ್ನು ಪಂಚಾಯತ್‌ ವಶಕ್ಕೆ ಪಡೆದುಕೊಂಡು ಬಡವರಿಗೆ ನಿವೇಶಗಳನ್ನು ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು.

Intro:ಆಂಕರ್ :
ಸರ್ಕಾರಿ ಗ್ರಾಮ ಠಾಣಾ ಜಾಗವನ್ನು ತಾಲ್ಲೂಕು ಪಂಚಾಯಿತಿ ಅಧಿಕಾರಿಗಳ ಸಹಕಾರದಿಂದ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಪ್ರಭಾವಿಗಳಿಗೆ ಅಕ್ರಮವಾಗಿ ಖಾತೆ ಮಾಡಿಕೊಟ್ಟು, ಇ ಖಾತೆಯನ್ನೂ ಮಾಡಿಕೊಡುವ ಮೂಲಕ ಇಲಾಖೆಯ ನೀತಿ ನಿಯಮಗಳನ್ನು ಗಾಳಿಗೆ ತೂರಿ, ಬಡವರಿಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿ ಅಂಕತಟ್ಟಿ ಗ್ರಾಮಸ್ಥರು ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.Body:

ವೈ.ಓ :

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ (ಪುಟ್ಟಣ್ಣಯ್ಯ ಬಣ) ಅಧಿಕಾರಿಗಳ ವಿರುದ್ಧ ಘೋಷಣೆಗಳು ಕೂಗಿ, ಅಕ್ರಮ ಖಾತೆಗಳು ಮಾಡಿರುವ ಅಧಿಕಾರಿಗಳನ್ನು ಕೂಡಲೇ ಅಮಾನತ್ತುಪಡಿಸಬೇಕು ಎಂದು ಒತ್ತಾಯಿಸಿದರು.

ವಿಶೂವಲ್ ಪ್ಲೋ..

ಅಂಕತಟ್ಟಿ ಗ್ರಾಮದ ಮುಖಂಡ ಎಸ್.ವೆಂಕಟರೆಡ್ಡಿ ಮಾತನಾಡಿ, ಅಂಕತಟ್ಟಿ ಗ್ರಾಮದ ಸರ್ವೆ ನಂಬರ್ 7/2 ರಲ್ಲಿ 4.89 ಹೆಕ್ಟೇರ್ 12 ಎಕರೆ 30 ಭೂಮಿ ಇದೆ. ಈ ಭೂಮಿಯನ್ನು ಇದುವರೆಗೂ ಹೌಸ್‌ಲಿಸ್ಟ್ ಮಾಡಿಲ್ಲ. 4 ಎಕರೆ ಸರ್ಕಾರಿ ಗ್ರಾಮಠಾಣೆ ಜಾಗಕ್ಕೆ ದಾಖಲೆಗಳೇ ಇಲ್ಲ. ಈ ಜಾಗವನ್ನು ಗ್ರಾಮದ ಪ್ರಭಾವಿಗಳು 2017 ರಲ್ಲಿ ಒತ್ತುವರಿ ಮಾಡಲು ಪ್ರಯತ್ನ ಮಾಡಿದ್ದರು. ಕೂಡಲೇ ಎಚ್ಚೆತ್ತುಕೊಂಡ ಗ್ರಾಮಸ್ಥರು, ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಜಿಲ್ಲಾಧಿಕಾರಿ, ಪಂಚಾಯತ್ ರಾಜ್ ಇಲಾಖೆ ಸೇರಿದಂತೆ ಎಲ್ಲರಿಗೂ ದೂರುಗಳು ಕೊಟ್ಟಿದ್ದೇವು. ಕೂಡಲೇ ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಇಲಾಖೆಯ ಮೇಲಾಧಿಕಾರಿಗಳು ಆದೇಶ ನೀಡಿದ್ದರು.
ಮೇಲಾಧಿಕಾರಿಗಳ ಆದೇಶದಂತೆ ಅಂತಕಟ್ಟಿ ಗ್ರಾಮಕ್ಕೆ ಬಂದಿದ್ದ ತಹಶೀಲ್ದಾರ್, ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಸದರಿ ಭೂಮಿಯನ್ನು ಸರ್ವೆ ಮಾಡಿ ಗಡಿ ಗುರ್ತಿಸಿದ್ದರು. ಸರ್ಕಾರಿ ಗ್ರಾಮಠಾಣಾ ಜಾಗವನ್ನು ಪಂಚಾಯಿತಿ ವಶಕ್ಕೆ ತೆಗೆದುಕೊಳ್ಳುವಂತೆ, ಅಕ್ರಮವಾಗಿ ಅನುಭವದಲ್ಲಿರುವವರಿಗೆ ನೋಟಿಸ್ ಜಾರಿ ಮಾಡುವಂತೆ ಆದೇಶ ಮಾಡಿದ್ದರೂ, ಇದುವರೆಗೂ ಸದರಿ ಭೂಮಿಯನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿಲ್ಲ. ಅಧಿಕಾರಿಗಳು ಶಾಮೀಲಾಗಿ ಸದರಿ ಭೂಮಿಯನ್ನು ನಿಯಮಬಾಹಿರವಾಗಿ ದಾಖಲೆಗಳನ್ನು ಸೃಷ್ಠಿಮಾಡಿ ಕೊಟ್ಟಿದ್ದಾರೆ ಎಂದು ಆರೋಪಿಸಿದರು.

ಬೈಟ್ ೦೨ : ವೈಟ್ ಶರ್ಟ್..

ರೈತ ಸಂಘದ ಜಿಲ್ಲಾ ಪ್ರಧಾನಕಾರ್ಯದರ್ಶಿ ಜೆ.ಎಸ್.ವೆಂಕಟಸ್ವಾಮಿ ಮಾತನಾಡಿ, ಸರ್ಕಾರಿ ಭೂಮಿಯನ್ನು ಉಳಿಸಿ, ಬಡವರಿಗೆ ನಿವೇಶಗಳನ್ನು ಹಂಚಿಕೆ ಮಾಡಬೇಕು ಎಂದು ಹೋರಾಟ ಮಾಡುತ್ತಿರುವವರ ವಿರುದ್ಧವಾಗಿ ಪೊಲೀಸರಿಗೆ ದೂರು ನೀಡಿ, ವಿನಾಕಾರಣ ಮಾನಸಿಕವಾಗಿ ಹಿಂಸೆ ಮಾಡಲಾಗಿದೆ. ನಿಯಮಬಾಹಿರವಾಗಿ ಅಕ್ರಮವಾಗಿ ಮಾಡಿಕೊಟ್ಟಿರುವ ಖಾತೆಗಳನ್ನು ವಜಾಗೊಳಿಸಬೇಕು, ಅಕ್ರಮ ಖಾತೆಗಳನ್ನು ಮಾಡಲಿಕ್ಕೆ ಸಹಕಾರ ನೀಡಿರುವ ಅಧಿಕಾರಿಗಳನ್ನು ಕೂಡಲೇ ಅಮಾನತ್ತುಪಡಿಸಬೇಕು,ಸದರಿ ಭೂಮಿಯನ್ನು ಪಂಚಾಯಿತಿ ವಶಕ್ಕೆ ಪಡೆದುಕೊಂಡು ಬಡವರಿಗೆ ನಿವೇಶಗಳನ್ನು ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು.

ಬೈಟ್ 2 Conclusion:

ABOUT THE AUTHOR

...view details