ಕರ್ನಾಟಕ

karnataka

ಗ್ರಾಪಂ ಚುನಾವಣೆ: ಸಿದ್ದಿಮಠದಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳ ಅವಿರೋಧ ಆಯ್ಕೆ!

By

Published : Dec 12, 2020, 8:28 PM IST

ಕಾಂಗ್ರೆಸ್​ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದ ಕಾರಣ ಸಿದ್ದಿಮಠ ಗ್ರಾಮದ ಜೆಡಿಎಸ್ ಬೆಂಬಲಿತ​​ ಅಭ್ಯರ್ಥಿಗಳು ಗ್ರಾಮ ಪಂಚಾಯಿತಿ ಚುನಾವಣೆಗೂ ಮುನ್ನವೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

JDS candidates are unanimous elected
ಅವಿರೋಧ ಆಯ್ಕೆಯಾದ ಜೆಡಿಎಸ್ ಅಭ್ಯರ್ಥಿಗಳು

ಚಿಂತಾಮಣಿ: ತಾಲೂಕಿನ ದೊಡ್ಡಗಂಜೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ದಿಮಠ ಗ್ರಾಮದ ಸದಸ್ಯರಾಗಿ ನಾಮಪತ್ರ ಸಲ್ಲಿಸಿದ್ದ ಮುಜೀಬ್ ಉನ್ನಿಸ್ಸಾ ಶೇಖ್ ದಾವೂದ್ ಪಾಷಾ ಮತ್ತು ಅಫ್ಸರ್ ಪಾಷಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜೆಡಿಎಸ್​ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಅಭ್ಯರ್ಥಿಗಳಿಗೆ ಹೂವಿನ ಹಾರ ಹಾಕಿ ಅಭಿನಂದನೆ ಸಲ್ಲಿಸಿದರು.

ಗ್ರಾಮ ಪಂಚಾಯಿತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಿನ್ನೆ ಕೊನೆ ದಿನವಾಗಿತ್ತು. ಸಿದ್ದಿಮಠ ಕ್ಷೇತ್ರದಿಂದ ಜೆಡಿಎಸ್ ಬೆಂಬಲಿತ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್​ ಸೇರಿದಂತೆ ಬೇರೆ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದ ಕಾರಣ ಜೆಡಿಎಸ್ ಬೆಂಬಲಿತ​​ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜೆಡಿಎಸ್​ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ

ಚುನಾವಣೆಗೂ ಮುನ್ನವೇ ನಮ್ಮ ಪಕ್ಷಕ್ಕೆ ಜಯ ಸಂದಿರುವುದು ಸಾಕಷ್ಟು ಸಂತಸ ತಂದಿದೆ. ಮೊದಲನೇ ಫಲಿತಾಂಶ ನಮ್ಮ ಪಕ್ಷಕ್ಕೆ ಬಂದಿದೆ ಎಂದ ಶಾಸಕರು, ಗೆದ್ದ ಸದಸ್ಯರಿಗೆ ಅಭಿನಂದನೆ ಸಲ್ಲಿಸಿ ಗ್ರಾಮದ ಅಭಿವೃದ್ಧಿಗೆ ಶ್ರಮಿಸುವಂತೆ ಶುಭ ಕೋರಿದರು.

ABOUT THE AUTHOR

...view details