ಕರ್ನಾಟಕ

karnataka

ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್​ ಸವಾರ ಸಾವು

By

Published : Sep 30, 2019, 10:07 AM IST

ಚಿಂತಾಮಣಿ ತಾಲೂಕಿನ ಕುರುಟಹಳ್ಳಿ ಬಳಿ ಕಳೆದ ಎರಡು ದಿನಗಳ ಹಿಂದೆ ಅಪಘಾತಕ್ಕೊಳಗಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಕುರುಟಹಳ್ಳಿ ಬಳಿ ಕಳೆದ ಎರಡು ದಿನಗಳ ಹಿಂದೆ ಅಪಘಾತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಎರಡು ದಿನಗಳ ಹಿಂದೆ ಅಪಘಾತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಸಾವು

ಎರಡು ದಿನಗಳ ಹಿಂದೆ ಕೋಲಾರದಿಂದ ಚಿಂತಾಮಣಿಗೆ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್, ದ್ವಿಚಕ್ರ ವಾಹನದಲ್ಲಿದ್ದ ಟಿಪ್ಪು ನಗರದ ನಿವಾಸಿ ಅಬ್ದುಲ್ ಜಬ್ಬಾರ್ (63) ಎಂಬುವರಿಗೆ ಡಿಕ್ಕಿ ಹೊಡೆದಿತ್ತು. ಇದರಿಂದ ಜಬ್ಬಾರ್​​ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಕೋಲಾರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಜಬ್ಬಾರ್​ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ABOUT THE AUTHOR

...view details