ಕರ್ನಾಟಕ

karnataka

ಬಾಗೇಪಲ್ಲಿ: ಮಾನಸಿಕ ಅಸ್ವಸ್ಥ ಮಗನನ್ನು ಕೊಂದು ತಾಯಿ ಆತ್ಮಹತ್ಯೆ!

By

Published : Aug 19, 2020, 4:30 AM IST

ಮಗ ಮಾನಸಿಕ ಅಸ್ವಸ್ಥ ಎಂದು ಆತನನ್ನು ಕೊಂದು, ಬಳಿಕ ತಾನೂ ಸಾವಿಗೆ ಶರಣಾಗಿರುವ ಘಟನೆ ಬಾಗೇಪಲ್ಲಿ ತಾಲೂಕು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ಬಾಗೇಪಲ್ಲಿ
ಬಾಗೇಪಲ್ಲಿ

ಬಾಗೇಪಲ್ಲಿ: ಸಂಪಿನಲ್ಲಿ ಮಗನ ಮುಳುಗಿಸಿ ಕೊಂದ ತಾಯಿ ಕೂಡ ಬಳಿಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಕೊತ್ತಪಲ್ಲಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಶೋಭಾ ತನ್ನ 7 ವರ್ಷದ ಮಗ ವಿಶಾಲ್​​ನನ್ನು ಕೊಂದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯ ಮುಂಭಾಗದಲ್ಲಿ ಸಂಪಿನಲ್ಲಿ ಮಗನನ್ನು ಮುಳುಗಿಸಿ ಕೊಲೆ ಮಾಡಿದ್ದಾಳೆ. ನಂತರ ಮನೆಗೆ ಹೋಗಿ ಮೇಲಿನ ರೂಮಿನಲ್ಲಿ ಶೋಭಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ಮಗ ವಿಶಾಲ್ ಮಾನಸಿಕ ಅಸ್ವಸ್ಥನಾಗಿದ್ದು, ನಡೆದಾಡಲು ಆಗುತ್ತಿರಲಿಲ್ಲ. ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗಲಿಲ್ಲ ಎಂದು ಮನನೊಂದು ಈ ಕೃತ್ಯ ನಡೆಸಿದ್ದಾಳೆ ಎನ್ನಲಾಗಿದೆ.

ಮನೆಗೆ ಪತಿ ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಬಾಗೇಪಲ್ಲಿ ಪಟ್ಟಣದ ಪೊಲೀಸರು ಬಂದು ಪರಿಶೀಲನೆ ನಡೆಸಿ, ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಕುರಿತು ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ABOUT THE AUTHOR

...view details