ಕರ್ನಾಟಕ

karnataka

ಕೋಡಿಹಳ್ಳಿ ಚಂದ್ರಶೇಖರ್​ ಕಾಂಗ್ರೆಸ್​ ಏಜೆಂಟ್​ರಂತೆ ವರ್ತಿಸುತ್ತಿದ್ದಾರೆ: ಸಂಸದ ಮುನಿಸ್ವಾಮಿ

By

Published : Apr 18, 2021, 7:13 AM IST

ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್​ ಕಾಂಗ್ರೆಸ್​ ಏಜೆಂಟರಂತೆ ಕೆಲಸ ಮಾಡ್ತಿದ್ದಾರೆ ಎಂದು ಸಂಸದ ಮುನಿಸ್ವಾಮಿ ಆರೋಪಿಸಿದ್ದಾರೆ. ರಾಜ್ಯ ಸರ್ಕಾರ ಸಾರಿಗೆ ನೌಕರರ ಪರವಾಗಿದ್ದು, ಅವರು ಮುಷ್ಕರ ಕೈಬಿಟ್ಟು ಸರ್ಕಾರದೊಂದಿಗೆ ಕೈಜೋಡಿಸಲಿ ಎಂದು ಕರೆ ನೀಡಿದರು.

MP muniswamy
ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಮುನಿಸ್ವಾಮಿ

ಚಿಕ್ಕಬಳ್ಳಾಪುರ:ರಾಜ್ಯದಲ್ಲಿ ಸಾರಿಗೆ ನೌಕರರು ಮುಷ್ಕರ ಕೈಗೊಂಡಿದ್ದಾರೆ. ಈಗಾಗಲೇ ಸರ್ಕಾರ ಕೆಲ ಬೇಡಿಕೆಗಳನ್ನು ಈಡೇರಿಸಿದೆ. ಕೊರೊನಾ ಸಮಯದಲ್ಲಿ ಸಾರಿಗೆ ನೌಕರರು ಸರ್ಕಾರದ ಜೊತೆ ಕೈ ಜೋಡಿಸಬೇಕು ಕೋಲಾರ ಸಂಸದ ಮುನಿಸ್ವಾಮಿ ಕರೆ ನೀಡಿದರು.

ಚಿಂತಾಮಣಿ ನಗರದಲ್ಲಿ ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆ ನಡೆಸಿ ಬಳಿಕ ಮಾತನಾಡಿದ ಅವರು,ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷಕೋಡಿಹಳ್ಳಿ ಚಂದ್ರಶೇಖರ್ ಕಾಂಗ್ರೆಸ್ ಏಜೆಂಟ್‌ರಂತೆ ವರ್ತಿಸುತ್ತಿದ್ದಾರೆ ವಾಗ್ದಾಳಿ ನಡೆಸಿದರು.

6 ಕೋಟಿ 44 ಲಕ್ಷ ರೂ. ಮೊತ್ತದ ಅಭಿವೃದ್ಧಿ ಕಾರ್ಯಗಳ‌ ಗುದ್ದಲಿ ಪೂಜೆ ನಡೆಯುತ್ತಿದೆ. ಎಲ್ಲರೂ ಕೊರೊನಾ ತಡೆಗಟ್ಟಲು ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಶಾಸಕರು ಹಾಗೂ ನಾವು ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಲಿದ್ದೇವೆ ಎಂದರು.

ಕೊರೊನಾ ಸೋಂಕು ನಿಯಂತ್ರಣದ ಅರಿವು ಮೂಡಿಸುವುದರಲ್ಲಿ ಮಾಧ್ಯಮಗಳ ಪಾತ್ರ ಬಹುಮುಖ್ಯವಾಗಿದೆ ಎಂದು ಇದೇ ಸಂದರ್ಭದಲ್ಲಿ ಸಂಸದ ಮುನಿಸ್ವಾಮಿ ಹೇಳಿದರು.

ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಮುನಿಸ್ವಾಮಿ ಪ್ರತಿಕ್ರಿಯೆ

ಸಂಸದರು ಬರುವುದಕ್ಕೂ ಮೊದಲೇ ಹಲವು ಕಾರ್ಯಕ್ರಮಗಳ‌ ಗುದ್ದಲಿ ಪೂಜೆಯನ್ನು ಶಾಸಕ ಎಂ ಕೃಷ್ಣಾರೆಡ್ಡಿ ನೆರವೇರಿಸದರು. ಇದರಿಂದ ಸಂಸದರ ಹಾಗೂ ಶಾಸಕರ ಬೆಂಬಲಿಗರ ನಡುವೆ ಮಾತಿನ ಚಕಮಕಿಯೂ ನಡೆಯಿತು. ಬಳಿಕ ಇಬ್ಬರೂ ಸೇರಿ ಗುದ್ದಲಿ ಪೂಜೆ ನಡೆಸಿದರು.

ABOUT THE AUTHOR

...view details