ಕರ್ನಾಟಕ

karnataka

ಕಾರುಗಳ ನಡುವೆ ಡಿಕ್ಕಿ ಪ್ರಕರಣ; ಮೃತರ ಸಂಖ್ಯೆ ಮೂರಕ್ಕೇರಿಕೆ

By

Published : Jan 10, 2021, 12:19 PM IST

ಚಿಕ್ಕಮಗಳೂರಿನ ರಂಗೇನಹಳ್ಳಿಯಲ್ಲಿ ನಿನ್ನೆ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದರು. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಇಂದು ಇಬ್ಬರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Chikmagalur accident
ಚಿಕ್ಕಮಗಳೂರು

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ರಂಗೇನಹಳ್ಳಿಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಚಿಕ್ಕಮಗಳೂರಿನಲ್ಲಿ ಕಾರುಗಳ ನಡುವೆ ಡಿಕ್ಕಿ

ಜಿಲ್ಲೆಯ ತರೀಕೆರೆ ತಾಲೂಕಿನ ರಂಗೇನಹಳ್ಳಿಯಲ್ಲಿ ನಿನ್ನೆ ಈ ಅಪಘಾತ ನಡೆದಿತ್ತು. ನಿನ್ನೆ ಮಧ್ಯಾಹ್ನ ಸ್ಥಳದಲ್ಲಿಯೇ ನಾಗೇಂದ್ರ (28) ಎಂಬುವರು ಮೃತಪಟ್ಟಿದ್ದರು. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸುಜಿತಾ (30), ಅನಿಲ (35) ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಂಪತಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ:ಕಬ್ಬಿನ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ; ಮಹಿಳೆ ಸಾವು.. ಮೂವರಿಗೆ ಗಂಭೀರ ಗಾಯ

ತರೀಕೆರೆ ತಾಲೂಕಿನ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ABOUT THE AUTHOR

...view details