ಕರ್ನಾಟಕ

karnataka

ಚಿಕ್ಕಮಗಳೂರು: ಕಳೆದ 48 ಗಂಟೆಯಲ್ಲಿ 8ಕ್ಕೂ ಹೆಚ್ಚು ರಸ್ತೆ ಅಪಘಾತ

By

Published : Aug 8, 2022, 8:23 PM IST

ಬಿಟ್ಟೂಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳು ಜಾರುತ್ತಿವೆ. ರಸ್ತೆಗಳ ಮೇಲೆ ಸೂಚನಾ ಫಲಕ ಹಾಕದೇ ಇರುವುದು ಅಪಘಾತಕ್ಕೆ ಕಾರಣವಾಗುತ್ತಿದೆ.

Kn_ckm_01_Heavy_Accident_av_7202347
ಚಿಕ್ಕಮಗಳೂರಿನಲ್ಲಿ ಸರಣಿ ಅಪಘಾತಗಳು

ಚಿಕ್ಕಮಗಳೂರು:ಮೂಡಿಗೆರೆ ಹ್ಯಾಂಡ್ ಪೋಸ್ಟ್‌ನಿಂದ ಕೊಟ್ಟಿಗೆ ಹಾರದವರೆಗೆ ಕಳೆದ 48 ಗಂಟೆಯಲ್ಲಿ ಸರಣಿ ಅಪಘಾತಗಳು ಸಂಭವಿಸಿವೆ. ರಾಷ್ಟ್ರೀಯ ಹೆದ್ದಾರಿಯ ಬಣಕಲ್‌ನ ಹೇಮಾವತಿ ನದಿ ಸೇತುವೆಯ ಸಮೀಪ ಎರಡು ಕಾರುಗಳು ಚಾಲಕರ ನಿಯಂತ್ರಣ ತಪ್ಪಿ ಪಲ್ಟಿಯಾಗಿವೆ. ಅದೇ ಸ್ಥಳದಲ್ಲಿ ಸರ್ಕಾರಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಬಣಕಲ್‌ನ ನಜರತ್ ಶಾಲೆಯ ಸಮೀಪ ಮಂಗಳೂರು ಕಡೆಯಿಂದ ಮೂಡಿಗೆರೆ ಕಡೆಗೆ ಸಾಗುತ್ತಿದ್ದ ಕಾರು ಉರುಳಿದೆ.

ಚಕ್ಕಮಕ್ಕಿ ಸಮೀಪ ಕಾರು ಹಾಗೂ ಲಾರಿಯ ನಡುವೆ ಅಪಘಾತ ಸಂಭವಿಸಿದ್ದು, ಕಾರು ನಜ್ಜುಗುಜ್ಜಾಗಿದೆ. ಮಂಗಳೂರು ಕಡೆಗೆ ಸಾಗುತ್ತಿದ್ದ ಗೂಡ್ಸ್ ವಾಹನ ಹಾಗೂ ಬೆಂಗಳೂರಿನೆಡೆ ಸಂಚರಿಸುತ್ತಿದ್ದ ಕಾರಿನ ನಡುವೆ ಹೆಬ್ಬರಿಗೆ ಸಮೀಪ ಅಪಘಾತ ಸಂಭವಿಸಿ ಕೆಲವು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ. ಇದೇ ಪ್ರದೇಶದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದಿಬ್ಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಮೂಡಿಗೆರೆ ಹ್ಯಾಂಡ್ ಪೋಸ್ಟ್‌ನಿಂದ ಕೊಟ್ಟಿಗೆಹಾರದವರೆಗೆ ರಸ್ತೆ ಅಗಲೀಕರಣ ಆದ ನಂತರ ಅಪಘಾತಗಳು ಹೆಚ್ಚಾಗಿವೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಚನಾ ಫಲಕಗಳನ್ನು ಅಳವಡಿಸದೇ ಇರುವುದು ಕೂಡಾ ಅಪಘಾತಗಳಿಗೆ ಕಾರಣವಾಗುತ್ತಿದೆ. ಈ ಹಿಂದೆ ಹೆದ್ದಾರಿಯಲ್ಲಿ ಸೂಚನಾ ಫಲಕ ಅಳವಡಿಸುವಂತೆ ಕೋರಿ ಸಾರ್ವಜನಿಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ:ಬಸ್ ಮತ್ತು ಬೈಕ್​ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ABOUT THE AUTHOR

...view details