ಕರ್ನಾಟಕ

karnataka

ಕಾಫಿನಾಡಿನಲ್ಲಿ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಹೆಚ್​ಡಿಕೆ

By

Published : Dec 16, 2020, 6:48 PM IST

ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸಮೀಪದ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಿದ್ದ ಕುಮಾರಸ್ವಾಮಿ, ಕೆಲವೇ ಮುಖಂಡರ ಜೊತೆ ಸೇರಿ ಕೇಕ್ ಕಟ್ ಮಾಡುವ ಮೂಲಕ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡರು.

ಮುಖಂಡರ ಜೊತೆ ಸೇರಿ ಕೇಕ್ ಕಟ್ ಮಾಡಿದ ಕುಮಾರಸ್ವಾಮಿ
ಮುಖಂಡರ ಜೊತೆ ಸೇರಿ ಕೇಕ್ ಕಟ್ ಮಾಡಿದ ಕುಮಾರಸ್ವಾಮಿ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಹುಟ್ಟುಹಬ್ಬವನ್ನು ಜೆಡಿಎಸ್ ಮುಖಂಡರ ಜೊತೆ ಆಚರಿಸಿಕೊಂಡರು.

ಮುಖಂಡರ ಜೊತೆ ಸೇರಿ ಕೇಕ್ ಕಟ್ ಮಾಡಿದ ಕುಮಾರಸ್ವಾಮಿ

ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸಮೀಪದ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಿದ್ದ ಕುಮಾರಸ್ವಾಮಿ, ಕೆಲವೇ ಮುಖಂಡರ ಜೊತೆ ಕೇಕ್ ಕಟ್ ಮಾಡುವ ಮೂಲಕ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡರು.

ನಿನ್ನೆ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರಿಗೆ ಯಾವುದೇ ಮಾಹಿತಿ ನೀಡದೆ ಚಿಕ್ಕಮಗಳೂರಿಗೆ ಆಗಮಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಕೆಲವೇ ಕೆಲವು ಮುಖಂಡರ ಜೊತೆ ಹಾಗೂ ಜೆಡಿಎಸ್ ಮುಖಂಡ ಸೀರಾಜ್ ಮತ್ತು ಸ್ನೇಹಿತರ ಸಮ್ಮುಖದಲ್ಲಿ ಕೇಕ್ ಕಟ್ ಮಾಡಿ ಅವರಿಗೆ ತಿನ್ನಿಸುವ ಮೂಲಕ ಜನ್ಮದಿನ ಆಚರಿಸಿಕೊಂಡರು.

ಮಾಜಿ ಸಚಿವ ಸಾ.ರಾ.ಮಹೇಶ್ ಹಾಗೂ ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಅವರೊಂದಿಗೆ ಹೆಚ್​ಡಿಕೆ ರೆಸಾರ್ಟ್​ನಲ್ಲಿ ತಂಗಿದ್ದರು. ಹುಟ್ಟುಹಬ್ಬ ಆಚರಣೆ ನಂತರ ಪುನಃ ಚಿಕ್ಕಮಗಳೂರಿನಿಂದ ವಾಪಸ್ ತೆರಳಿದ್ದಾರೆ.

ABOUT THE AUTHOR

...view details