ಕರ್ನಾಟಕ

karnataka

ಕಾಫಿನಾಡಲ್ಲಿ ರಸ್ತೆ ಸಮಸ್ಯೆ.. ಜೋಳಿಗೆಯಲ್ಲಿ ಕೂರಿಸಿ ವೃದ್ಧೆಯನ್ನು ಆಸ್ಪತ್ರೆಗೆ ಸಾಗಿಸಿದ ಜನ

By

Published : Sep 19, 2022, 1:39 PM IST

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗಂಟೆಮಕ್ಕಿ ಪ್ರದೇಶದಿಂದ ವೃದ್ಧೆಯೊಬ್ಬರನ್ನು, ಸ್ಥಳೀಯರು ಜೋಳಿಗೆಯಲ್ಲಿ ಹೊತ್ತುಕೊಂಡು ಬಂದು ಆಸ್ಪತ್ರೆಗೆ ಸೇರಿಸಿದ್ದಾರೆ.

Locals carried the old woman to the hospital
ವೃದ್ಧೆಯನ್ನು ಜೋಳಿಗೆಯಲ್ಲಿ ಕೂರಿಸಿ ಆಸ್ಪತ್ರೆಗೆ ಸಾಗಿಸಿದ ಜನ

ಚಿಕ್ಕಮಗಳೂರು: ಮನೆಗೆ ರಸ್ತೆ ಸಂಪರ್ಕವಿಲ್ಲದ ಕಾರಣ ವೃದ್ಧೆಯೊಬ್ಬರನ್ನು ಸಂಬಂಧಿಕರು ಮತ್ತು ಸ್ಥಳೀಯರು ಜೋಳಿಗೆಯಲ್ಲಿ ಹೊತ್ತೊಯ್ದ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಅನಾರೋಗ್ಯ ಪೀಡಿತ ವೃದ್ಧೆಯನ್ನು ಆಸ್ಪತ್ರೆಗೆ ಸೇರಿಸಲು ಸಂಬಂಧಿಕರು ಈ ರೀತಿ ಮಾಡಿದ್ದಾರೆ.

ಜಿಲ್ಲೆಯ ಕಳಸ ತಾಲೂಕಿನ ಗಂಟೆಮಕ್ಕಿ ಗ್ರಾಮದ 85 ವರ್ಷದ ವೆಂಕಮ್ಮ ಅವರ ಮನೆಗೆ ರಸ್ತೆ ಸಂಪರ್ಕದ ಸೌಲಭ್ಯವಿಲ್ಲ. ಹೀಗಾಗಿ ಅವರನ್ನು ಆಸ್ಪತ್ರೆಗೆ ಸೇರಿಸಲು ಮನೆಯಿಂದ ಜಮೀನಿನ ಕಾಲು ದಾರಿಯಲ್ಲಿ ಜೋಳಿಗೆಯಲ್ಲಿ ಹೊತ್ತುಕೊಂಡು ಆಸ್ಪತ್ರೆಗೆ ಹೋಗಲಾಗಿದೆ.

ವೃದ್ಧೆಯನ್ನು ಜೋಳಿಗೆಯಲ್ಲಿ ಕೂರಿಸಿ ಆಸ್ಪತ್ರೆಗೆ ಸಾಗಿಸಿದ ಜನ

2021ರಲ್ಲಿಯೇ ರಸ್ತೆ ಇಲ್ಲ, ಮಾಡಿಸಿಕೊಡಿ ಎಂದು ಅವರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರು. ಸಚಿವ ಆರ್ ಆಶೋಕ್, ಜಿಲ್ಲಾಧಿಕಾರಿಗೂ ಪದೇ ಪದೆ ಮನವಿ ಮಾಡಿದ್ದರು. ಆದರೆ ಇದುವರೆಗೂ ಯಾವುದೇ ರಸ್ತೆ ನಿರ್ಮಾಣವಾಗಿಲ್ಲ. ಇಲ್ಲಿನ ಪರಿಸ್ಥಿತಿ ಸರಿಪಡಿಸುವಂತೆ ಹಲವು ಬಾರಿ ಮನವಿ ಮಾಡಿದರೂ, ಜಿಲ್ಲಾಡಳಿತ ಮಾತ್ರ ಸ್ಪಂದಿಸಿಲ್ಲವಂತೆ. ಹೀಗಾಗಿ ಜಿಲ್ಲಾಡಳಿತದ ವಿರುದ್ಧ ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ:ರಸ್ತೆ ನಿರ್ಮಾಣದ ಭರವಸೆ ಹುಸಿ; ಅಸ್ವಸ್ಥ ಮಹಿಳೆ ಹೊತ್ತು 13 ಕಿಮೀ ಸಾಗಿದ ಗ್ರಾಮಸ್ಥರು..!

ABOUT THE AUTHOR

...view details