ಕರ್ನಾಟಕ

karnataka

ಉಚಿತ ಪ್ರಯಾಣ ಶೋಭಾಗೂ ಫ್ರೀ ಎಂದು ದುರಹಂಕಾರದ ಮಾತನ್ನು ಕಾಂಗ್ರೆಸ್​ ಹೇಳಿದೆ: ಶೋಭಾ ಕರಂದ್ಲಾಜೆ

By

Published : Jun 10, 2023, 11:09 PM IST

ಉಚಿತವಾಗಿ ಬಸ್ ಪ್ರಯಾಣವನ್ನು ಎಲ್ಲ ಹೆಣ್ಣು ಮಕ್ಕಳಿಗೆ ನೀಡಿರುವು ಖುಷಿಯಾಗಿದೆ, ಒಳ್ಳೆಯದಾಗಲಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

Etv Bharatshobha-karandlaje-reaction-on-free-bus-scheme-for-womens
ಉಚಿತ ಪ್ರಯಾಣ ಶೋಭನಿಗೂ ಫ್ರೀ ಎಂದು ದುರಹಾಂಕಾರದ ಮಾತನ್ನು ಕಾಂಗ್ರೆಸ್​ ಹೇಳಿದೆ: ಸಚಿವೆ ಶೋಭಾ ಕರಂದ್ಲಾಜೆ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ಉಚಿತವಾಗಿ ಬಸ್ ಪ್ರಯಾಣವನ್ನು ಎಲ್ಲ ಹೆಣ್ಣು ಮಕ್ಕಳಿಗೆ ನೀಡಿರುವು ಖುಷಿಯಾಗಿದೆ, ಒಳ್ಳೆಯದಾಗಲಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.​ ಚಿಕ್ಕಮಗಳೂರು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಪ್ರಯಾಣ, ಶಕ್ತಿ ಯೋಜನೆಯನ್ನು ಘೋಷಿಸಿತ್ತು. ಆಗ ಶೋಭಾ ಕರಂದ್ಲಾಜೆ ನಿಮಗೂ ಪ್ರಯಾಣ ಫ್ರೀ ಎಂದು ಟ್ವೀಟ್ ಮಾಡಿ ಕಾಂಗ್ರೆಸ್​ ಕಾಲೆಳೆದಿತ್ತು. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಕಾಂಗ್ರೆಸ್​ ದುರಹಾಂಕಾರವನ್ನು ಇದು ತೋರಿಸುತ್ತದೆ ಎಂದರು.

ನಂತರ ಮಾತನಾಡಿ ಉಚಿತವಾಗಿ ಬಸ್ ಪ್ರಯಾಣದಿಂದ ನಮ್ಮ ಹೆಣ್ಣು ಮಕ್ಕಳು ಪ್ರವಾಸ ಮಾಡಬಹುದು ಮತ್ತು ರಾಜ್ಯಾದ್ಯಂತ ಓಡಾಡಬಹುದು. ಅದರೆ ಉಚಿತ ಪ್ರಯಾಣ ಶೋಭಾಗೂ ಫ್ರೀ ಎಂದು ದುರಹಂಕಾರದ ಮಾತನ್ನು ಕಾಂಗ್ರೆಸ್​ ಹೇಳುತ್ತೆ, ಇದಕ್ಕೆ ಜನರೇ ಉತ್ತರವನ್ನು ಕೋಡ್ತಾರೆ. ಈಗ ನಾನೇನು ಹೇಳಲ್ಲ, ಮಾತನಾಡುವ ಸಮಯ ಬಂದೇ ಬರುತ್ತದೆ ಎಂದರು.

ಇನ್ನು ಪಠ್ಯ ಪುಸ್ತಕದಲ್ಲಿ ನಮ್ಮ ಮಕ್ಕಳು ಏನು ಕಲಿಯಬೇಕೆಂದು ನಾವೇ ನಿರ್ಧಾರ ಮಾಡಬೇಕು. ಅವರ ಬೆಳವಣಿಗೆ ಪ್ರಗತಿ, ಅಭ್ಯುದಯಕ್ಕೆ ಚರಿತ್ರೆ ತಿಳಿದುಕೊಳ್ಳಬೇಕು. ನಮ್ಮ ದೇಶವನ್ನು ತಿಳಿದುಕೊಳ್ಳಲು ಏನು ಕಲಿಸಬೇಕು ಅದೇ ಆಧಾರದಲ್ಲಿ ಕಲಿಸಬೇಕು. ಪಠ್ಯ ಪುಸ್ತಕ ಅನ್ನೋದು ಪಾರ್ಟಿ, ಜಾತಿ, ಧರ್ಮದ ವಿಚಾರವಲ್ಲ, ನಾವು ಸಂವಿಧಾನ್ಮಕವಾಗಿ ಏನನ್ನ ಒಪ್ಪಿ ಕೊಂಡಿದ್ದೇವೋ, ಅದನ್ನೇ ಕಲಿಯುವಂತಹ ಅವಕಾಶ ಸಿಗಬೇಕು ಎಂದು ಹೇಳಿದರು.

ಒಂದು ಸರ್ಕಾರ ಬಂದಾಗ ಒಂದು ಪಠ್ಯ, ಇನ್ನೊಂದು ಸರ್ಕಾರ ಬಂದಾಗ ಮತ್ತೊಂದು ಪಠ್ಯ ಸರಿಯಲ್ಲ. ನಮ್ಮ ದೇಶ ಭಕ್ತರ, ನಮ್ಮ ಸ್ವಾತಂತ್ರ‍್ಯ ಹೋರಾಟಗಾರರ, ನಮ್ಮ ಸಂಸ್ಕೃತಿಯ ಬಗ್ಗೆ ಕಲಿಸುವ ಅನಿವಾರ್ಯತೆ ಇದೆ. ಈ ದೃಷ್ಟಿಯಿಂದ ರಾಜ್ಯ ಸರ್ಕಾರ ಯೋಚನೆ ಮಾಡಲಿ ಕಾಂಗ್ರೆಸ್ ಪಠ್ಯ, ಬಿಜೆಪಿಯ ಪಠ್ಯ ಅನ್ನೋದಕ್ಕಿಂತ ಹೆಚ್ಚು ನಮ್ಮ ಮಕ್ಕಳು ಏನನ್ನ ಕಲಿಯಬೇಕು ಮುಂದಿನ ಪೀಳಿಗೆ ಎಲ್ಲಿಗೆ ಹೋಗಬೇಕು, ಏನಾಗಬೇಕು ಎಂಬುದರ ಆಧಾರದ ಮೇಲೆ ಪಠ್ಯ ಕೊಡುವುದು ಒಳ್ಳೆಯದು ಎಂದರು.

ಇದನ್ನೂ ಓದಿ:CM Siddaramaiah: ಗುಣಮಟ್ಟದ ಬೀಜ, ಅಗತ್ಯ ರಸಗೊಬ್ಬರದ ಕೊರತೆ ಆಗದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಿ: ಸಿಎಂ ಖಡಕ್​ ಸೂಚನೆ

ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಭಾನುವಾರ ಚಾಲನೆ: ಇನ್ನು ಭಾನುವಾರ ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಐದು ಗ್ಯಾರಂಟಿಗಳಲ್ಲೊಂದಾದ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ ಸಿಗಲಿದೆ.‌ ವಿಧಾನಸೌಧದ ಮುಂಭಾಗ ಭಾನುವಾರ ಬೆಳಗ್ಗೆ 12 ಗಂಟೆಗೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅದ್ಧೂರಿಯಾಗಿ ಚಾಲನೆ ನೀಡಲಿದ್ದಾರೆ. ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಶಕ್ತಿ ಯೋಜನೆಗೆ ಭಾನುವಾರ (ಜೂ. 11) ಚಾಲನೆ ಸಿಗಲಿದೆ.

ಐದು ಗ್ಯಾರಂಟಿಗಳ ಪೈಕಿ ಮೊದಲನೆಯದಾಗಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಆ ಮೂಲಕ ನಾಳೆ ಮಧ್ಯಾಹ್ನದಿಂದ ರಾಜ್ಯದ ಮಹಿಳೆಯರು ಕೆಎಸ್ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ವಿಧಾನಸೌಧ ಮುಂಭಾಗದ ಗ್ರಾಂಡ್ ಸ್ಟೆಪ್ ಮುಂದೆ ಶಕ್ತಿ ಯೋಜನೆಗೆ ಅದ್ಧೂರಿಯಾಗಿ ಚಾಲನೆ ಸಿಗಲಿದೆ.

ABOUT THE AUTHOR

...view details