ಕರ್ನಾಟಕ

karnataka

ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು

By

Published : Jan 18, 2021, 4:14 PM IST

ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

accident
ಅಪಘಾತ

ಚಿಕ್ಕಮಗಳೂರು:ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ನಗರದ ಪೊಲೀಸ್ ಠಾಣೆ ಮುಂಭಾಗದಲ್ಲಿ ಅಪಘಾತ ನಡೆದಿದ್ದು, ಘಟನೆಯಲ್ಲಿ ಬೆಟ್ಟದಹಳ್ಳಿ ಗ್ರಾಮದ ಕಾಲೇಜು ವಿದ್ಯಾರ್ಥಿಗಳಾದ ಅಭಿಷೇಕ್ ಹಾಗೂ ದೀಪು ಗಂಭೀರ ಗಾಯಗೊಂಡಿದ್ದಾರೆ. ಅಮೃತಾಪುರದ ಈರಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕೂಡಲೇ ಸ್ಥಳೀಯರು ಹಾಗೂ ತರೀಕೆರೆ ಪೊಲೀಸರು ಗಂಭೀರ ಗಾಯಗೊಂಡವರನ್ನು ತರೀಕೆರೆ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಿದ್ದು, ತರೀಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details