ಕರ್ನಾಟಕ

karnataka

ಗ್ಯಾರಂಟಿ ಯೋಜನೆಗಳನ್ನು ಘೋಷಿಸುವಾಗ ತಲೆಯಲ್ಲಿ ಮೆದುಳು ಇರಲಿಲ್ವಾ, ಸಗಣಿ ತುಂಬಿತ್ತಾ?: ಶೋಭಾ ಕರಂದ್ಲಾಜೆ

By

Published : Jun 21, 2023, 3:19 PM IST

Updated : Jun 21, 2023, 3:40 PM IST

ತಾನು ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲು ಸಾಧ್ಯವಾಗದ ಕಾರಣಕ್ಕೆ ಕೇಂದ್ರದ ಕಡೆ ಕಾಂಗ್ರೆಸ್​ ಸರ್ಕಾರ ಬೊಟ್ಟು ಮಾಡಿ ತೋರಿಸುತ್ತಿದೆ ಎಂದು ಸಚಿವ ಶೋಭಾ ಕರಂದ್ಲಾಜೆ ಟೀಕಿಸಿದರು.

Union Minister Shobha kandlaje
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ವಾಗ್ದಾಳಿ

ಚಿಕ್ಕಮಗಳೂರು:ರಾಜ್ಯದ ಜನರಿಗೆ ಉಚಿತ ಅಕ್ಕಿ ಕೊಡಲು ಆಗದಿದ್ರೆ ಅಧಿಕಾರದಿಂದ ತೊಲಗಿ. ಯೋಜನೆಗಳನ್ನು ಘೋಷಿಸುವಾಗ ತಲೆಯಲ್ಲಿ ಮೆದುಳು ಇರಲಿಲ್ವಾ, ಸಗಣಿ ತುಂಬಿತ್ತಾ? ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಚಿಕ್ಕಮಗಳೂರು ನಗರದಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕೇಂದ್ರದ ಅಕ್ಕಿ ಸೇರಿ ರಾಜ್ಯದ ಜನರಿಗೆ ಒಟ್ಟು 15 ಕೆಜಿ ಅಕ್ಕಿ ಕೊಡಿ, ಚುನಾವಣೆ ಗೆಲ್ಲಲು ಕಾಂಗ್ರೆಸ್‌ನವರು ಸುಳ್ಳು ಭರವಸೆ ಕೊಟ್ಟು ಆಸೆ ತೋರಿಸಿದ್ದಾರೆ. ಸಿದ್ದರಾಮಯ್ಯನವರೇ ಬೇಜವಾಬ್ದಾರಿ ಹೇಳಿಕೆ ವಾಪಸ್ ತೆಗೆದುಕೊಳ್ಳಿ ಎಂದು ವಾಗ್ದಾಳಿ ನಡೆಸಿದರು.

ಚುನಾವಣೆ ಗೆಲ್ಲಲು ಸುಳ್ಳು ಗ್ಯಾರಂಟಿ ಘೋಷಣೆ ಮಾಡಿದ್ರಿ. ಮಹಿಳೆಯರು ಬಸ್‌ ಪಾಸ್ ಪಡೆಯಲು ಸರ್ಟಿಫಿಕೇಟ್ ಕೇಳುತ್ತಿದ್ದಾರೆ. ನಾನು ಮಹಿಳೆ ಅನ್ನೋದಕ್ಕೆ ನನಗೆ ಸರ್ಟಿಫಿಕೇಟ್ ಬೇಕಿಲ್ಲ. ಅಕ್ಕಿ, ದುಡ್ಡು, ವಿದ್ಯುತ್ ಎಲ್ಲದಕ್ಕೂ ಮೋದಿ ಕಡೆ ತೋರಿಸುತ್ತಿದ್ದೀರಿ. ಹಾಗಾದರೆ ನೀವು ಗ್ಯಾರಂಟಿ ಕಾರ್ಡ್ ಯಾಕೆ ವಿತರಣೆ ಮಾಡಿದ್ದೀರಿ?. ಬೇರೆ ರಾಜ್ಯಗಳು ಹಾಗು ನಮ್ಮ ರಾಜ್ಯದ ರೈತರಿಂದ ಅಕ್ಕಿ ಖರೀದಿಸಿ ರಾಜ್ಯದ ಜನರಿಗೆ ಕೊಡಿ ಎಂದರು.

ಈಗ ನಿಮ್ಮಲ್ಲಿರುವ ಹುಳುಕುಗಳಿಗೆ ಮೋದಿ ಕಡೆ ಬೆರಳು ಮಾಡಿ ತೋರಿಸುತ್ತಿದ್ದೀರಿ. ಒಂದು ಜವಾಬ್ದಾರಿಯುತ ರಾಜಕೀಯ ಪಕ್ಷವಾಗಿ, 12 ಬಜೆಟ್​ಗಳನ್ನು ಮಂಡನೆ ಮಾಡಿದಂತಹ ಒಬ್ಬ ಮುಖ್ಯಮಂತ್ರಿಯಾಗಿದ್ದೀರಿ. ದೇಶದ ಹಲವಾರು ರಾಜ್ಯಗಳಲ್ಲಿ ಸರ್ಕಾರ ನಡೆಸುತ್ತಿರುವಂತಹ ಪಕ್ಷ ನಿಮ್ಮದು. ಅದೆಲ್ಲಕ್ಕಿಂತಲೂ ಕೇಂದ್ರದಲ್ಲೇ ದಶಕಗಳ ಕಾಲ ಆಡಳಿತ ನಡೆಸಿದ ಪಕ್ಷವಾಗಿದ್ದೀರಿ. ಇದೀಗ ಯಾವುದೇ ಮುಂದಾಲೋಚನೆ ಇಲ್ಲದೇ ಚುನಾವಣಾ ಪ್ರಚಾರದ ವೇಳೆ ಗೆಲ್ಲಲೇಬೇಕು ಎನ್ನುವ ಆಸೆಯಿಂದ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೀರಿ.

ಆದರೆ ಅಧಿಕಾರಕ್ಕೆ ಬಂದ ನಂತರ ಎಲ್ಲವನ್ನೂ ಚಿಂತಿಸಿದರೆ ಆ ಯೋಜನೆಗಳನ್ನು ಪೂರೈಸುವುದು ಎಷ್ಟು ಕಷ್ಟ ಎಂಬುದು ತಿಳಿಯುತ್ತಿದೆ. ನಿಮ್ಮಿಂದ ಆಗದ್ದಕ್ಕೆ ಎಲ್ಲದಕ್ಕೂ ಕೇಂದ್ರದ ಕಡೆ, ಮೋದಿ ಕಡೆ ಬೆರಳು ಮಾಡಿ ತೋರಿಸುತ್ತಿದ್ದೀರಿ. ನಿಮ್ಮ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದಾಗಲೇ ನಾವು, ಇವಕ್ಕೆಲ್ಲ ಹಣ ಎಲ್ಲಿಂದ ತರುತ್ತೀರಾ ಎಂದು ಕೇಳಿದ್ದೆವು. ಆದರೆ ಚುನಾವಣೆಯಲ್ಲಿ ಜನರ ಮತ ತೆಗೆದುಕೊಂಡಿದ್ದೀರಿ. ಆದರೀಗ ಅಕ್ಕಿ, ದುಡ್ಡು, ವಿದ್ಯುತ್ ಎಲ್ಲದಕ್ಕೂ ಮೋದಿ ಕಡೆ ಬೆರಳು ಮಾಡಿ ತೋರಿಸುತ್ತಿದ್ದೀರಿ. ಯಾರಿಗೆ ಮೋಸ ಮಾಡಲು, ಯಾರ ಮೂಗಿಗೆ ತುಪ್ಪ ಸವರಲು ಯೋಜನೆಗಳನ್ನು ಹಂಚಿದ್ದೀರಾ, ಬೇರೆ ರಾಜ್ಯ ಹಾಗೂ ನಮ್ಮ ರಾಜ್ಯದ ರೈತರ ಅಕ್ಕಿ ಖರೀದಿಸಿ ಕೊಡಿ ಎಂದು ಸಚಿವೆ ಶೋಭಾ ಕರಂದ್ಲಾಜೆ ಕಿಡಿ ಕಾರಿದರು.

ಇದನ್ನೂ ಓದಿ:Guarantee scheme: ಗ್ಯಾರಂಟಿ ವಿಚಾರದಲ್ಲಿ ದಿನಾ ಒಂದು ಕಂಡೀಷನ್ ಹಾಕಿ ಜನರಿಗೆ ಮೋಸ: ಕಾಂಗ್ರೆಸ್ ವಿರುದ್ಧ ಜೋಶಿ ಕಿಡಿ

Last Updated :Jun 21, 2023, 3:40 PM IST

ABOUT THE AUTHOR

...view details