ಕರ್ನಾಟಕ

karnataka

ನೀರಿನ ನಲ್ಲಿ ವಿಚಾರಕ್ಕೆ ಗ್ರಾಪಂ ಸದಸ್ಯನ ಮೇಲೆ ಹಲ್ಲೆ: ಬೆಂಬಲಿಗರಿಂದ ಪೊಲೀಸ್​ ಠಾಣೆಗೆ ಮುತ್ತಿಗೆ ಯತ್ನ

By

Published : Jul 8, 2022, 1:45 PM IST

ನೀರಿನ ನಲ್ಲಿ ಅಳವಡಿಸುವ ವಿಚಾರಕ್ಕೆ ಗಲಾಟೆಯಾಗಿದ್ದು, ಗ್ರಾಮ ಪಂಚಾಯತ್​ ಸದಸ್ಯ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

assault-on-gp-member-over-water-supply-work-in-chikkajajuru
ನೀರಿನ ನಲ್ಲಿ ವಿಚಾರಕ್ಕೆ ಗ್ರಾಪಂ ಸದಸ್ಯನ ಮೇಲೆ ಹಲ್ಲೆ: ಬೆಂಬಲಿಗರಿಂದ ಪೊಲೀಸ್​ ಠಾಣೆಗೆ ಮುತ್ತಿಗೆ ಯತ್ನ

ಚಿತ್ರದುರ್ಗ:ನೀರಿನ ನಲ್ಲಿ ಅಳವಡಿಸುವ ವಿಚಾರಕ್ಕೆ ಗಲಾಟೆ ನಡೆದು, ಗ್ರಾಮ ಪಂಚಾಯತ್​ ಸದಸ್ಯನ ಮೇಲೆ‌ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರಿನಲ್ಲಿ ನಡೆದಿದೆ. ಗ್ರಾ.ಪಂ ಸದಸ್ಯ ಸಿದ್ದೇಶ್ ಮೇಲೆ ಹೊಳಲ್ಕೆರೆ ಬಿಜೆಪಿ ಶಾಸಕ ಎಂ.ಚಂದ್ರಪ್ಪ ಆಪ್ತ ಮೋಹನ್ ಎಂಬಾತನಿಂದ ಹಲ್ಲೆ ಆರೋಪ ಕೇಳಿಬಂದಿದ್ದು, ಬಂಧನಕ್ಕೆ ಆಗ್ರಹಿಸಿ ಗ್ರಾ.ಪಂ ಸದಸ್ಯನ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು ಚಿಕ್ಕಜಾಜೂರು ಠಾಣೆ ಆವರಣದಲ್ಲಿ ಪ್ರತಿಭಟಿಸಿದರು.

ಚಿಕ್ಕಜಾಜೂರು ಗ್ರಾಮದಲ್ಲಿ ನೀರಿನ ನಲ್ಲಿ ಅಳವಡಿಸಲಾಗುತ್ತಿದ್ದು, ಈ ವಿಚಾರಕ್ಕೆ ಗ್ರಾಮ ಪಂಚಾಯತ್ ಸದಸ್ಯ ಸಿದ್ದೇಶ್ ಹಾಗೂ ಆರೋಪಿ ಮೋಹನ್ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮೋಹನ್ ಇಟ್ಟಿಗೆಯಿಂದ ಸಿದ್ದೇಶ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.


ಗಾಯಗೊಂಡ ಸಿದ್ದೇಶ್​​ಗೆ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬೆನ್ನಲ್ಲೇ ಗ್ರಾ.ಪಂ ಸದಸ್ಯನ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಆಗಮಿಸಿ ಚಿಕ್ಕಜಾಜೂರು ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರಲ್ಲದೆ, ಪ್ರತಿಭಟನೆಯಿಂದ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.

ಇದನ್ನೂ ಓದಿ:ಕೊಪ್ಪಳದಲ್ಲಿ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು: ಚಾಲಕ ಸಾವು, ಮೂವರು ಪಾರು

ABOUT THE AUTHOR

...view details