ಕರ್ನಾಟಕ

karnataka

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಘಟನಾ ಸ್ಥಳಕ್ಕೆ ಗೃಹ ಸಚಿವ, ಡಿಜಿಪಿ ಭೇಟಿ

By

Published : Nov 23, 2022, 12:19 PM IST

ಮಂಗಳೂರಿನ ಗರೋಡಿಯಲ್ಲಿ ನಡೆದ ಆಟೋರಿಕ್ಷಾ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಡಿಜಿಪಿ ಪ್ರವೀಣ್ ಸೂದ್ ಘಟನಾ ಸ್ಥಳಕ್ಕಿಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

bomb blast
ಬಾಂಬ್ ಸ್ಫೋಟ ಘಟನಾ ಸ್ಥಳಕ್ಕೆ ಗೃಹ ಸಚಿವ, ಡಿಜಿಪಿ ಭೇಟಿ

ಮಂಗಳೂರು: ನಗರದ ಗರೋಡಿ ಎಂಬಲ್ಲಿ ಆಟೋರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಡಿಜಿಪಿ ಪ್ರವೀಣ್ ಸೂದ್ ಘಟನಾ ಸ್ಥಳಕ್ಕೆ ಇಂದು ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ನವೆಂಬರ್ 19 ರಂದು ಪಡೀಲ್ ಕಡೆಯಿಂದ ಪಂಪ್​ವೆಲ್​ಗೆ ಬರುತ್ತಿದ್ದ ಆಟೋರಿಕ್ಷಾದಲ್ಲಿ ಆರೋಪಿ ಶಾರೀಕ್ ಕೊಂಡೊಯ್ಯುತ್ತಿದ್ದ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಗೃಹ ಸಚಿವರು ಮತ್ತು ಡಿಜಿಪಿ ಭೇಟಿ ನೀಡಿ, ಹಾನಿಗೊಳಗಾದ ರಿಕ್ಷಾವನ್ನು ವೀಕ್ಷಿಸಿದರು. ಈ ವೇಳೆ ಮಂಗಳೂರು ಕಮಿಷನರ್ ಶಶಿಕುಮಾರ್, ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್, ಶಾಸಕ ಭರತ್ ಶೆಟ್ಟಿ ಜೊತೆಗಿದ್ದರು.

ಬಾಂಬ್ ಸ್ಫೋಟ ಘಟನಾ ಸ್ಥಳಕ್ಕೆ ಗೃಹ ಸಚಿವ, ಡಿಜಿಪಿ ಭೇಟಿ

ಇದನ್ನೂ ಓದಿ:ಮಂಗಳೂರು ಆಟೋರಿಕ್ಷಾ ಬ್ಲಾಸ್ಟ್​ ಪ್ರಕರಣ.. ಸ್ಫೋಟದ ವಿಡಿಯೋ ವೈರಲ್​

ಬಾಂಬ್ ಸ್ಫೋಟ ಸ್ಥಳ ವೀಕ್ಷಿಸಿದ ಬಳಿಕ ಘಟನೆಯಲ್ಲಿ ಗಾಯಗೊಂಡಿರುವ ಚಾಲಕ ಪುರುಷೋತ್ತಮ ಮತ್ತು ಆರೋಪಿ ಶಾರೀಕ್ ಚಿಕಿತ್ಸೆ ಪಡೆಯುತ್ತಿರುವ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಗೆ ತೆರಳಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು. ಜೊತೆಗೆ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ‌ಕಮಿಷನರ್ ಕಚೇರಿಯಲ್ಲಿ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ:ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಆರೋಪಿ ಶಾರೀಕ್​ ವಾಸವಿದ್ದ ಮನೆಯಲ್ಲಿ ಸಿಕ್ಕ ಸ್ಫೋಟಕ ವಸ್ತುಗಳು

ABOUT THE AUTHOR

...view details