ಕರ್ನಾಟಕ

karnataka

ಸಾಮಾನ್ಯ ಕಾರ್ಯಕರ್ತನೂ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷನಾಗಲು ಸಾಧ್ಯ.. ನಳೀನ್​ ಕುಮಾರ್​ ಕಟೀಲ್​

By

Published : Oct 12, 2019, 11:21 PM IST

ಸಾಮಾನ್ಯ ಕಾರ್ಯಕರ್ತನೂ ರಾಜ್ಯಾಧ್ಯಕ್ಷನಾಗುವ ಅವಕಾಶ ಇರುವುದು ಬಿಜೆಪಿಯಲ್ಲಿ ಮಾತ್ರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ಹೇಳಿದರು.

bjp-will-next-assembly-election-win-the-150-seats

ಸುಳ್ಯ: ಸಾಮಾನ್ಯ ಕಾರ್ಯಕರ್ತನೂ ರಾಜ್ಯಾಧ್ಯಕ್ಷನಾಗುವ ಅವಕಾಶ ಇರುವುದು ಬಿಜೆಪಿಯಲ್ಲಿ ಮಾತ್ರ. ರಾಜ್ಯಾಧ್ಯಕ್ಷ ಎಂಬುದು ಇಲ್ಲಿ ಹುದ್ದೆಯಲ್ಲ, ಮಹತ್ತರವಾದ ಜವಾಬ್ದಾರಿ. ಯಾವುದೇ ಕಾರಣಕ್ಕೂ ಪಕ್ಷದ ಕಾರ್ಯಕರ್ತರ ನಂಬಿಕೆಗೆ ದ್ರೋಹ ಬಗೆಯುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ಹೇಳಿದರು.

ಸುಳ್ಯ ಬಿಜೆಪಿ ಕಚೇರಿಗೆ ಆಗಮಿಸಿದ ಅವರು ಕಾರ್ಯಕರ್ತರ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಲೋಕಸಭೆಯಲ್ಲಿ 64 ಪಕ್ಷಗಳ ಪ್ರತಿನಿಧಿಗಳಿದ್ದಾರೆ. ಇದರಲ್ಲಿ 63 ಪಕ್ಷಗಳೂ ವಂಶ ಪಾರಂಪರ್ಯ ಮತ್ತು ಜಾತಿಯ ಆಧಾರದಲ್ಲಿ ಆಯ್ಕೆ ನಡೆಸುತ್ತಿದ್ರೇ, ಬಿಜೆಪಿ ಮಾತ್ರ ಪ್ರಜಾಪ್ರಭುತ್ವದ ಆಧಾರದಲ್ಲಿ ಆಯ್ಕೆ ಮಾಡುತ್ತದೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್..​

ಮುಂದಿನ ಮೂರು ವರ್ಷ ಬಿಜೆಪಿ ಸರ್ಕಾರವೇ ರಾಜ್ಯದಲ್ಲಿ ಆಡಳಿತ ನಡೆಸಲಿದೆ. ಮುಂಬರುವ ಉಪ ಚುನಾವಣೆಯಲ್ಲಿ ಬಿಜೆಪಿ ಹದಿನೈದು ಸ್ಥಾನಗಳನ್ನೂ ಗೆಲ್ಲಲಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನೂರೈವತ್ತಕ್ಕೂ ಅಧಿಕ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ಹಿರಿಯರ ಮಾರ್ಗದರ್ಶನ ಮತ್ತು ಕಾರ್ಯಕರ್ತರ ಬೆಂಬಲದೊಂದಿಗೆ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವುದಾಗಿ ಅವರು ಹೇಳಿದರು.

ABOUT THE AUTHOR

...view details