ಕರ್ನಾಟಕ

karnataka

ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳು ಅರೆಸ್ಟ್

By

Published : Aug 2, 2022, 12:20 PM IST

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಈ ವರೆಗೆ ಒಟ್ಟು ನಾಲ್ಕು ಜನರನ್ನು ಬಂಧಿಸಲಾಗಿದೆ.

bjp-worker-praveen-nettar-murder-case-two-accused-arrested
ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳು ಅರೆಸ್ಟ್

ಸುಳ್ಯ (ದಕ್ಷಿಣಕನ್ನಡ): ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ‌. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಬೆಳ್ಳಾರೆ ಮತ್ತು ಪಲ್ಲಮಜಲು ನಿವಾಸಿಗಳಾದ ಸದ್ದಾಂ(32), ಹ್ಯಾರಿಸ್ (42) ಎಂಬವರನ್ನು ಬಂಧಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 27ರಂದು ಶಫೀಕ್ ಹಾಗೂ ಝಾಕಿರ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ಬಳಿಕ ತನಿಖೆಯನ್ನು ಮುಂದುವರೆಸಿದ್ದ ಪೊಲೀಸರು ಹೆಚ್ಚಿನ ಸಾಕ್ಷ್ಯಾಧಾರಗಳ ಆಧಾರಗಳ ಮೇರೆಗೆ ಸದ್ದಾಂ ಮತ್ತು ಹ್ಯಾರಿಸ್ ಅವರನ್ನು ಬಂಧಿಸಿದ್ದಾರೆ. ಇನ್ನೂ ಕೆಲವರು ಈ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಪೊಲೀಸ್ ತನಿಖೆಯಿಂದ ಬಯಲಾಗಿದ್ದು, ಅವರ ಬಂಧನಕ್ಕೂ ಬಲೆ ಬೀಸಲಾಗಿದೆ.

ಇದುವರೆಗೆ ನಡೆಸಲಾದ ತನಿಖೆಯ ಆಧಾರದ ಮೇಲೆ, ತನಿಖಾ ತಂಡವು ಈ ಪ್ರಕರಣದಲ್ಲಿ ಶಂಕಿತ ಸಂಚುಕೋರರು ಮತ್ತು ಹಲ್ಲೆಕೋರರನ್ನು ಗುರುತಿಸಿದೆ. ಮುಖ್ಯ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ಓದಿ :ಕಾರಿನಲ್ಲಿ ಬೆನ್ನಟ್ಟಿ ರಸ್ತೆ ಮಧ್ಯೆ ವಕೀಲರ ಭೀಕರ ಕೊಲೆ

TAGGED:

ABOUT THE AUTHOR

...view details