ಕರ್ನಾಟಕ

karnataka

ಜಲೀಲ್ ಹತ್ಯೆ ಪ್ರಕರಣ: ಪ್ರತ್ಯಕ್ಷದರ್ಶಿಗಳ ಮಾಹಿತಿ ಪಡೆದು ಪೊಲೀಸರಿಂದ ಕ್ರಮ ಎಂದ ಸಿಎಂ

By

Published : Dec 25, 2022, 8:33 PM IST

ಜಲೀಲ್​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಮಾತನಾಡಿದ್ದಾರೆ- ಪ್ರತ್ಯಕ್ಷದರ್ಶಿಗಳ ಹೇಳಿಕೆ ಪಡೆದು ಪೊಲೀಸರಿಂದ ವಿಚಾರಣೆ -ವಿಚಾರಣೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ ಎಂದ ಸಿಎಂ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮಂಗಳೂರು:ಸುರತ್ಕಲ್​ನಲ್ಲಿ ನಡೆದ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯಕ್ಷದರ್ಶಿಗಳ ಮಾಹಿತಿ ಪಡೆದು ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪ್ರತ್ಯಕ್ಷದರ್ಶಿಗಳ ಹೇಳಿಕೆ ಪಡೆದು ವಿಚಾರಣೆ: ಮಂಗಳೂರಿನಲ್ಲಿ ಮಾತನಾಡಿದ ಅವರು, ಜಲೀಲ್ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಪೋಸ್ಟ್ ಮಾರ್ಟಂ ನಡೆದು ಅಂತ್ಯಕ್ರಿಯೆ ಶಾಂತಯುತವಾಗಿ ನಡೆಯುತ್ತಿದೆ. ತನಿಖೆ ಪ್ರಗತಿಯಲ್ಲಿದೆ. ಘಟನೆಗೆ ಸಂಬಂಧಿಸಿದಂತೆ ಪ್ರತ್ಯಕ್ಷದರ್ಶಿಗಳ ಹೇಳಿಕೆ ಪಡೆದು ಪೊಲೀಸರು ವಿಚಾರಣೆ ನಡೆಸಲಿದ್ದಾರೆ. ವಿಚಾರಣೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ ಎಂದರು.

ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಜನತೆ ಉಹಾಪೋಹಗಳಿಗೆ ಕಿವಿಗೊಡಬಾರದು. ಶಾಂತಿಗೆ ಧಕ್ಕೆಯಾಗದಂತೆ ನೋಡಬೇಕು ಎಂದು ಮನವಿ ಮಾಡಿದರು. ವಿಚಾರಣೆಯನ್ನು ಪೊಲೀಸರು ಮಾಡುತ್ತಾರೆ ಬಿಟ್ಟುಬಿಡಿ. ಅವರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿದ್ದಾರೆ ಎಂದು ಭರವಸೆ ನೀಡಿದರು.

ಅಶಾಂತಿ ಸಮಾಜದಲ್ಲಿ ಇರಬಾರದು: ಮುಖ್ಯಮಂತ್ರಿಗಳು ಕ್ರಿಯೆಗೆ ಪ್ರತಿಕ್ರಿಯೆ ಎಂಬ ಹೇಳಿಕೆ ನೀಡಿದ ಬಳಿಕ ಈ ರೀತಿ ಆಗುತ್ತಿದೆ ಎಂಬ ವಿಪಕ್ಷಗಳು ಆರೋಪಿಸುತ್ತಿರುವ ಬಗ್ಗೆ ಸಿಎಂ ಪ್ರತಿಕ್ರಿಯಿಸಿದರು. ಅದು ಲವ್ ಜಿಹಾದ್ ಸಂದರ್ಭದಲ್ಲಿ ಹೇಳಿದ್ದು. ಸಮಾಜದಲ್ಲಿ ಅಶಾಂತಿ ಇರಬಾರದು. ಅಶಾಂತಿಯನ್ನು ಹತ್ತಿಕ್ಕುವಂತಹದು ಸಮಾಜ ಮತ್ತು ಸರ್ಕಾರದ ಕರ್ತವ್ಯವಾಗಿದೆ.

ಯಾರೆ ತಪ್ಪು ಮಾಡಿದರೂ ಆ್ಯಕ್ಷನ್ ರಿಯಾಕ್ಷನ್ ಪ್ರಶ್ನೆಯೆ ಇಲ್ಲ. ಇದೊಂದು ಘಟನೆಗೆ ಬೇರೆ ಒಂದು ಮಾಡಲು ಹೋದರೆ ಘಟನೆಯ ನಿಜವಾದ ಕಾರಣ ತಪ್ಪಿ ಹೋಗುತ್ತದೆ. ಇದರ ತನಿಖೆಯನ್ನು ಪೊಲೀಸರಿಗೆ ಬಿಡಿ. ಅವರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿದ್ದಾರೆ. ‌ಇನ್ನೂ ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಏನಾದರೂ ಅವಘಡಗಳು ನಡೆಯುತ್ತಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಮರುತ್ತರಿಸದೆ ತೆರಳಿದರು.

ಇದನ್ನೂ ಓದಿ:ಜಲೀಲ್ ಹತ್ಯೆ ಪ್ರಕರಣ: ಆರೋಪಿಗಳ ಪತ್ತೆಗೆ 8 ಅಧಿಕಾರಿಗಳ ತಂಡ ರಚನೆ -ಪೊಲೀಸ್ ಕಮಿಷನರ್

ಈ ಘಟನೆ ನಡೆಯಬಾರದಿತ್ತು. ಇದು ತುಂಬಾ ದುರಾದೃಷ್ಟಕರ ಘಟನೆಯಾಗಿದೆ. ಆದಷ್ಟು ಬೇಗ ಆರೋಪಿಗಳನ್ನು ಬಂದಿಸುತ್ತೇವೆ. ಶಾಂತಿಯನ್ನು ಕಪಾಡಿ ಪರಸ್ಪರ ವಿಶ್ವಾಸದಿಂದ ಎಲ್ಲಾರು ಇರಬೇಕು. ಯಾರೇ ತಪ್ಪು ಮಾಡಿದ್ರೂ, ಅವರಿಗೆ ಶಿಕ್ಷೆಯಾಗುತ್ತದೆ. ಮುಕ್ತ ತನಿಖೆಯನ್ನು ಪೊಲೀಸರು ಮಾಡುತ್ತಾರೆ ಮತ್ತು ಸತ್ಯ ಹೊರಬರುತ್ತದೆ ಎಂದು ಸಿಎಂ ಭರವಸೆ ನೀಡಿದರು.

ಇದನ್ನೂ ಓದಿ:ಜಲೀಲ್ ಮೃತದೇಹದ ಅಂತಿಮ ದರ್ಶನಕ್ಕೆ ಜನಸ್ತೋಮ, ಸ್ಥಳಕ್ಕೆ ಡಿಸಿ ಬರಬೇಕೆಂದು ಪಟ್ಟು

ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್‌ ಮಾತನಾಡಿದ್ದಾರೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು. ಜಲೀಲ್ ಹತ್ಯೆಗೆ ಸಂಬಂಧಿಸಿದಂತೆ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ. ಹತ್ಯೆ ಮಾಡಿರುವ ನೈಜ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಮದ್ಯ ಮರಾಟ ನಿಷೇಧ:ಮುಂಜಾಗ್ರತಾ ಕ್ರಮವಾಗಿ ಈಗಾಗಲೇ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಯಲ್ಲಿದೆ. ಕ್ರಿಸ್ ಮಸ್ ಇರುವುದರಿಂದ ಪೂರ್ವನಿಯೋಜಿತ ಕಾರ್ಯಕ್ರಮಗಳಿಗೆ ವಿನಾಯತಿ ನೀಡಲಾಗಿದೆ. ಆದರೆ 2 ದಿನಗಳ ಕಾಲ ಸುರತ್ಕಲ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ನಗರದ ಸುರತ್ಕಳ್​ ಬಳಿಯ ಕೃಷ್ಣಾಪುರದಲ್ಲಿ ಹತ್ಯೆಯಾದ ಜಲೀಲ್ ಎಂಬುವರ ಮೃತದೇಹದ ಅಂತಿಮ ದರ್ಶನಕ್ಕೆ ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದೆರು. ಕೃಷ್ಣಾಪುರದ 4ನೇ ಬ್ಲಾಕ್​ನಲ್ಲಿರುವ ದಿನಸಿ ಅಂಗಡಿಯಲ್ಲೇ ಜಲೀಲ್ ಕಳೆದ ರಾತ್ರಿ ಕೊಲೆಯಾಗಿದ್ದರು. ಚಾಕು ಇರಿತಕ್ಕೊಳಗಾದ ಜಲೀಲ್ ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟರು. ಪೋಸ್ಟ್ ಮಾರ್ಟಂ ವ್ಯವಸ್ಥೆಗಾಗಿ ಮೃತದೇಹವನ್ನು ಎ.ಜೆ.ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿತ್ತು. ಅಂತಿಮ ದರ್ಶನದ ಬಳಿಕ ಪಂಜಿಮೊಗರಿನ ಮಸೀದಿಯಲ್ಲಿ ಅಂತ್ಯಕ್ರಿಯೆ ನಡೆದಿದೆ.

ಇದನ್ನೂ ಓದಿ:ಜಲೀಲ್ ಹತ್ಯೆ ಪ್ರಕರಣ.. ಕೂಳೂರು ಮಸೀದಿಯಲ್ಲಿ ಧಪನ್​

ABOUT THE AUTHOR

...view details