ಕರ್ನಾಟಕ

karnataka

ದಕ್ಷಿಣ ಕನ್ನಡ: ಪತ್ನಿ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ ಆರೋಪಿ ಪೊಲೀಸರ ವಶ

By

Published : Sep 24, 2020, 5:01 PM IST

ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿ ಬಿಜು ಎಂಬವನನ್ನು ಉಪ್ಪಿನಂಗಡಿ ಹಾಗೂ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

Dakshina Kannada: accused who attacked wife with acid is arrested
ದಕ್ಷಿಣ ಕನ್ನಡ: ಪತ್ನಿ ಮೇಲೆ ಆಸಿಡ್ ದಾಳಿ ನಡೆಸಿದ್ದ ಆರೋಪಿ ಪೊಲೀಸರ ವಶ

ನೆಲ್ಯಾಡಿ(ದಕ್ಷಿಣ ಕನ್ನಡ): ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿ ಬಿಜು ಎಂಬವನನ್ನು ಉಪ್ಪಿನಂಗಡಿ ಹಾಗೂ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ನೆಲ್ಯಾಡಿಯ ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿ ಇಂದು ಮುಂಜಾನೆ ಘಟನೆ ನಡೆದಿತ್ತು. ನೆಲ್ಯಾಡಿ ನಿವಾಸಿ ಬಿಜು ಎಂಬಾತ ತನ್ನ ಪತ್ನಿ ಶೈನಿ ಹಾಗೂ ಪತ್ನಿಯ ಚಿಕ್ಕಮ್ಮ ಝಾನ್ಸಿ ಎಂಬವರ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ. ಆ್ಯಸಿಡ್ ದಾಳಿಯಿಂದಾಗಿ ಇಬ್ಬರ ಮುಖ, ಕಣ್ಣಿನ ಭಾಗ ಸುಟ್ಟುಹೋಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿದೆ.

ಅಷ್ಟೇಅಲ್ಲ ಆರೋಪಿ ಬಿಜು ಪತ್ನಿ ಹಾಗೂ ಚಿಕ್ಕಮ್ಮನನ್ನು ಕೊಲೆ ಮಾಡುವ ಸಲುವಾಗಿ ಮಚ್ಚಿನೊಂದಿಗೆ ಅವರ ಮನೆಗೆ ಬಂದಿದ್ದ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದೆ.

ABOUT THE AUTHOR

...view details