ಕರ್ನಾಟಕ

karnataka

ಪತಿಯಿಂದ ಪತ್ನಿ, ಪತ್ನಿಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ಪ್ರಕರಣ: ಚಿಕಿತ್ಸೆ ಫಲಿಸದೇ ಪತ್ನಿ ಸಾವು

By

Published : Oct 10, 2020, 7:33 PM IST

ಕೌಟುಂಬಿಕ ಕಲಹದ ಹಿನ್ನೆಲೆ ಪತಿ ತನ್ನ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿ ಸೆ. 24 ರ ಮುಂಜಾನೆ ನಡೆದಿತ್ತು. ಅವರಲ್ಲಿ ಒಬ್ಬರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ.

Dakshina Kannada: Acid attack on wife by husband....wife died
ಪತಿಯಿಂದ ಪತ್ನಿ, ಪತ್ನಿಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ಪ್ರಕರಣ: ಚಿಕಿತ್ಸೆ ಫಲಿಸದೇ ಪತ್ನಿ ಸಾವು

ನೆಲ್ಯಾಡಿ (ದಕ್ಷಿಣ ಕನ್ನಡ): ಕೌಟುಂಬಿಕ ಕಲಹದ ಹಿನ್ನೆಲೆ ಪತಿ ತನ್ನ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿ ಸೆ. 24 ರ ಮುಂಜಾನೆ ನಡೆದಿತ್ತು. ಅವರಲ್ಲಿ ಒಬ್ಬರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ.

ಶೈನಿ (33) ಸಾವನ್ನಪ್ಪಿದ ದುರ್ದೈವಿ. ಆಕೆಯ ಪತಿ ಬಿಜು (38) ಎಂಬಾತ ಪತ್ನಿ ಹಾಗೂ ಪತ್ನಿಯ ಚಿಕ್ಕಮ್ಮ ಝಾನ್ಸಿ (36) ಎಂಬುವರ ಮೇಲೆ ಆಸಿಡ್ ದಾಳಿ ನಡೆಸಿದ್ದ. ಆಸಿಡ್ ದಾಳಿಯಿಂದಾಗಿ ಇಬ್ಬರ ಮುಖ, ಕಣ್ಣಿನ ಭಾಗ ಸುಟ್ಟುಹೋಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಅವರಲ್ಲಿ ಝಾನ್ಸಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು, ಗಂಭೀರ ಗಾಯಗೊಂಡಿದ್ದ ಶೈನಿ ಇಂದು ಆಸ್ಪತ್ರೆಯಲ್ಲೇ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಘಟನೆಯ ವಿವರ:

ಬಿಜು ಹಾಗೂ ಆತನ ಪತ್ನಿ ಶೈನಿ ನಡುವೆ ಕೌಟುಂಬಿಕ ಕಲಹವಾಗಿದ್ದು, ಶೈನಿ ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿರುವ ತನ್ನ ತಂದೆಯ ತಮ್ಮನ ಮನೆಯಲ್ಲಿ ಮಗಳ ಜೊತೆಗೆ ವಾಸವಾಗಿದ್ದರು. ಅಲ್ಲಿಂದ ಶೈನಿಯವರು ತನ್ನ ಚಿಕ್ಕಮ್ಮ ಝಾನ್ಸಿಯವರ ಜೊತೆಗೆ ನೆಲ್ಯಾಡಿಯ ಆಶ್ರಮವೊಂದಕ್ಕೆ ಕೆಲಸಕ್ಕೆ ಹೋಗುತ್ತಿದ್ದರು. ಸೆ.24 ರಂದು ಬೆಳಿಗ್ಗೆ 6 ಗಂಟೆಯ ವೇಳೆಗೆ ಶೈನಿ ಹಾಗೂ ಝಾನ್ಸಿಯವರು ಮನೆಯಿಂದ ಕೆಲಸಕ್ಕೆ ಹೋಗಲೆಂದು ಕಾಲುದಾರಿಯಲ್ಲಿ ನಡೆದುಕೊಂಡು ಬರುತ್ತಿದ್ದರು. ಆಗ ಅವರಿಗಾಗಿ ಕಾದು ಕುಳಿತಿದ್ದ ಆರೋಪಿ ಬಿಜು ಇಬ್ಬರ ಮೇಲೂ ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ.

ನಂತರ ಪೋಲೀಸರು ಈತನನ್ನು ಬಂಧಿಸಿದ್ದರು. ಆಸಿಡ್ ದಾಳಿಯಿಂದಾಗಿ ಇಬ್ಬರ ಮುಖ ಹಾಗೂ ದೇಹದಲ್ಲಿ ತೀವ್ರ ಗಾಯವಾಗಿತ್ತು.

ABOUT THE AUTHOR

...view details