ಕರ್ನಾಟಕ

karnataka

ಪ್ರತಿಭಾ ಕುಳಾಯಿ ವಿರುದ್ಧ ಅವಹೇಳನಾಕಾರಿ ಕಮೆಂಟ್​.. ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

By

Published : Oct 22, 2022, 3:53 PM IST

ಟೋಲ್ ಗೇಟ್ ವಿರೋಧಿ ಹೋರಾಟಗಾರ್ತಿ ಪ್ರತಿಭಾ ಕುಳಾಯಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್​ ಮಾಡಿದವರ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

file-a-complaint-against-obscene-comment-in-mangaluru
ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಮಂಗಳೂರು(ದಕ್ಷಿಣ ಕನ್ನಡ): ಕಾಂಗ್ರೆಸ್ ಮುಖಂಡೆ, ಟೋಲ್ ಗೇಟ್ ವಿರೋಧಿ ಹೋರಾಟಗಾರ್ತಿ ಪ್ರತಿಭಾ ಕುಳಾಯಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ವಿಚಾರದಲ್ಲಿ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಅವರು ಟೋಲ್ ಗೇಟ್ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ಪ್ರತಿಭಟನೆ ನಡೆಸುತ್ತಿರುವ ಫೋಟೋವನ್ನು ಹಾಕಿ ಅದಕ್ಕೆ ಅಶ್ಲೀಲ ಕಮೆಂಟ್ ಮಾಡಿರುವ ಬಗ್ಗೆ ದೂರು ಬಂದಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಆರೋಪಿಗಳನ್ನು ಶೀಘ್ರವಾಗಿ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಸಮಾನ ಮನಸ್ಕ ಸಂಘಟನೆಗಳ ಮನವಿ :ಪ್ರತಿಭಾ ಕುಳಾಯಿ ಅವರನ್ನು ಲೈಂಗಿಕ ದೌರ್ಜನ್ಯ ಭಾಷೆಯಲ್ಲಿ ತೇಜೋವಧೆ ಮಾಡಿರುವ ಶ್ಯಾಮ ಸುದರ್ಶನ್ ಭಟ್​ನನ್ನು ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಡಿ ಬಂಧಿಸಲು ಒತ್ತಾಯಿಸಿ ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಇಂದು ಪೊಲೀಸ್ ಉಪ ಆಯುಕ್ತರಿಗೆ ಮನವಿಯನ್ನು ಸಲ್ಲಿಸಲಾಯಿತು.

ನಿಯೋಗದಲ್ಲಿ ಸಾಮಾಜಿಕ ಮುಖಂಡರಾದ ಮಂಜುಳಾ ನಾಯಕ್, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಭಾರತೀ ಬೋಳಾರ, ಪ್ರಮೀಳಾ ಶಕ್ತಿನಗರ, ಅಸುಂತ ಡಿಸೋಜಾ ಪ್ರಮೀಳಾ ದೇವಾಡಿಗ, ಡಿವೈಎಫ್ಐ ಯುವತಿಯರ ಉಪ ಸಮಿತಿ ಮುಖಂಡರಾದ ಆಶಾ ಬೋಳೂರು, ದೀಕ್ಷಿತಾ ಜಲ್ಲಿಗುಡ್ಡೆ, ಸೌಮ್ಯ ಪಂಜಿಮೊಗರು ಮುಂತಾದವರು ಉಪಸ್ಥಿತರಿದ್ದರು.

ಪ್ರತಿಭಾ ಕುಳಾಯಿ ವಿರುದ್ಧ ಅವಹೇಳನಾಕಾರಿ ಕಮೆಂಟ್​ ಮಾಡಿದವರ ಮೇಲೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅವಹೇಳನಕಾರಿ ಪೋಸ್ಟ್ ವಿರುದ್ಧ ಕ್ರಮಕ್ಕೆ ಶಕುಂತಲಾ ಶೆಟ್ಟಿ ಒತ್ತಾಯ;ಕಾಂಗ್ರೆಸ್ ಮುಖಂಡೆ ಪ್ರತಿಭಾ ಕುಳಾಯಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ :ಟ್ರೋಲ್​ಗೆ ಹೆದರಲ್ಲ, ಅಶ್ಲೀಲ ಕಮೆಂಟ್ ಮಾಡಿದವರ ವಿರುದ್ಧ ಪೊಲೀಸರಿಗೆ ದೂರು: ಪ್ರತಿಭಾ ಕುಳಾಯಿ

ABOUT THE AUTHOR

...view details