ಕರ್ನಾಟಕ

karnataka

ಪುತ್ತೂರಿನಲ್ಲಿ ಕೃಷಿ ಹೊಂಡಕ್ಕೆ ಬಿದ್ದ ಕಾರು: ಒಂದೇ ಕುಟುಂಬದ ನಾಲ್ವರ ದುರ್ಮರಣ

By

Published : Sep 2, 2019, 10:30 AM IST

Updated : Sep 2, 2019, 12:39 PM IST

ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾವು ಎಂಬಲ್ಲಿ ನಡೆದಿದೆ.

ಕಾರು

ಮಂಗಳೂರು:ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾವು ಎಂಬಲ್ಲಿ ನಡೆದಿದೆ.

ಪುತ್ತೂರಿನಲ್ಲಿ ಕೃಷಿ ಹೊಂಡಕ್ಕೆ ಬಿದ್ದ ಕಾರು

ಘಟನೆಯಲ್ಲಿ ಮೃತಪಟ್ಟವರನ್ನು ಸ್ಥಳದಲ್ಲಿ ಸಿಕ್ಕ ಗುರುತಿನ ಚೀಟಿ ಆಧಾರದ ಮೇಲೆ ಮಡಿಕೇರಿ ಅಂಚೆ ಕಚೇರಿ ಉದ್ಯೋಗಿ ಅಶೋಕ್, ಅವರ ಪತ್ನಿ ಹೇಮಲತಾ ಹಾಗೂ ಅವರ ಮಕ್ಕಳಾದ ವತ್ಸ, ಯಶಸ್ ಎಂದು ಗುರುತಿಸಲಾಗಿದೆ. ಮಂಗಳೂರಿಗೆ ಬಂದು ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಪತಿ - ಪತ್ನಿ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.

ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಕೃಷಿ ಹೊಂಡದಲ್ಲಿ ಇದ್ದ ಕಾರನ್ನು ಮೇಲಕ್ಕೆತ್ತಲಾಗಿದೆ. ಕೃಷಿ ಹೊಂಡದಲ್ಲಿ ಇದ್ದ ನೀರಿದ್ದರಿಂದಾಗಿ ಕಾರಿನಲ್ಲಿ ಇದ್ದ ನಾಲ್ವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮಂಗಳೂರು: ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾವು ಎಂಬಲ್ಲಿ ನಡೆದಿದೆ.
Body:ಸ್ಥಳದಲ್ಲಿ ಸಿಕ್ಕ ಗುರುತಿನ ಚೀಟಿ ಯಂತೆ ಮಡಿಕೇರಿ ಅಂಚೆ ಕಚೇರಿ ಉದ್ಯೋಗಿ ಅಶೋಕ್, ಅವರ ಪತ್ನಿ ಹೇಮಲತ, ಹಾಗೂ ಅವರ ಮಕ್ಕಳಾದ ವತ್ಸ , ಯಶಸ್ ಸಾವನ್ನಪ್ಪಿದವರು ಎಂದು ಗುರುತಿಸಲಾಗಿದೆ. ಮಂಗಳೂರಿಗೆ ಬಂದು ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಪತಿ ಪತ್ನಿ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.
ಬೆಳಿಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಕೃಷಿಹೊಂಡದಲ್ಲಿ ಇದ್ದ ಕಾರು ಮೇಲಕ್ಕೆತ್ತಲಾಗಿದೆ. ಕೃಷಿ ಹೊಂಡದಲ್ಲಿ ಪೂರ್ತಿ ನೀರಿದ್ದರಿಂದ ಕಾರಿನಲ್ಲಿ ಇದ್ದ ನಾಲ್ವರು ಸಾವನ್ನಪ್ಪಿದ್ದಾರೆ.

ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Repoter - VinodpuduConclusion:
Last Updated : Sep 2, 2019, 12:39 PM IST

ABOUT THE AUTHOR

...view details