ಕರ್ನಾಟಕ

karnataka

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 107 ಗ್ರಾಂ ಚಿನ್ನ ವಶಕ್ಕೆ

By ETV Bharat Karnataka Team

Published : Oct 23, 2023, 7:45 PM IST

ದುಬೈನಿಂದ ಬಂದ ಪ್ರಯಾಣಿಕನನ್ನು ತಪಾಸಣೆ ನಡೆಸಿದಾದ ರಟ್ಟಿನ ಪೆಟ್ಟಿಗೆಗಳ ಪದರಗಳಲ್ಲಿ ಚಿನ್ನ ಮುಚ್ಚಿಟ್ಟು ಸಾಗಿಸುತ್ತಿದ್ದುದು ಪತ್ತೆಯಾಗಿದೆ.

Mangaluru Airport
ಮಂಗಳೂರು ವಿಮಾನ ನಿಲ್ದಾಣ

ಮಂಗಳೂರು:ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 107 ಗ್ರಾಂ ಚಿನ್ನವನ್ನು ಕಸ್ಟಮ್ಸ್‌​ ಅಧಿಕಾರಿಗಳು ವಶಕ್ಕೆ ಪಡೆದರು. ಅ. 21ರಂದು ದುಬೈನಿಂದ ಮಂಗಳೂರಿಗೆ ಇಂಡಿಗೋ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ ಅಕ್ರಮ ಬೆಳಕಿಗೆ ಬಂದಿದೆ.

ದುಬೈನಿಂದ ಬಂದಿಳಿದ ಪ್ರಯಾಣಿಕನನ್ನು ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ತಡೆದು ವಿಚಾರಣೆ ಮಾಡಿದ್ದಾರೆ. ಪ್ರಯಾಣಿಕನ ಬಳಿಯಿದ್ದ ಡಬಲ್ ಲೇಯರ್ ಬಿಸ್ಕತ್ ಮತ್ತು ಚಾಕೊಲೆಟ್ ಹೊಂದಿರುವ ಎರಡು ರಟ್ಟಿನ ಪೆಟ್ಟಿಗೆಗಳ ಪದರಗಳಲ್ಲಿ ಚಿನ್ನ ಮುಚ್ಚಿಡಲಾಗಿತ್ತು. ಪರಿಶೀಲನೆಯಲ್ಲಿ ಒಟ್ಟು 107 ಗ್ರಾಂ ತೂಕದ ಚಿನ್ನ ಪತ್ತೆಯಾಗಿದೆ. ಇದರ ಮೌಲ್ಯ ರೂ. 6,47,350 ಎಂದು ಅಂದಾಜಿಸಲಾಗಿದೆ. ಪ್ರಯಾಣಿಕ ಮತ್ತು ಚಿನ್ನ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗಿದೆ.

ಇದನ್ನೂ ಓದಿ:ಅಕ್ರಮ ಚಿನ್ನ ಸಾಗಾಟ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಬ್ಬರು ವಶಕ್ಕೆ

ABOUT THE AUTHOR

...view details