ಕರ್ನಾಟಕ

karnataka

ಬಂಟ್ವಾಳ: ಅನಾರೋಗ್ಯದಿಂದ ಬೇಸತ್ತು ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

By

Published : Jan 30, 2021, 10:38 PM IST

ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ.

sdsd
ಅನಾರೋಗ್ಯದಿಂದ ಬೇಸತ್ತು ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ: ಬಿ.ಕಸ್ಬಾ ಗ್ರಾಮದ ಅಗ್ರಬೈಲ್ ಮನೆಯ ವಸಂತ (55) ಎಂಬಾತ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಕೆಲವು ತಿಂಗಳಿನಿಂದ ಡಿಸ್ಕ್ ಸಮಸ್ಯೆಯಿದ್ದ ಈತ ಬಳಲುತ್ತಿದ್ದ. ಮಗಳು ಕೆಲಸ ಮುಗಿಸಿ ಮನೆಗೆ ಬಂದ ಸಂದರ್ಭ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಈ ಕುರಿತು ವಸಂತನ ಮಗಳು ನೀಡಿರುವ ದೂರಿನನ್ವಯ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details