ಕರ್ನಾಟಕ

karnataka

ಮಂಗಳೂರು: ವೆಲ್ಡಿಂಗ್ ವೇಳೆ ಬೆಂಕಿ, ಟ್ಯಾಂಕ್ ಮೇಲಿಂದ ಬಿದ್ದು ವ್ಯಕ್ತಿ ಸಾವು

By ETV Bharat Karnataka Team

Published : Jan 15, 2024, 8:14 AM IST

ವೆಲ್ಡಿಂಗ್ ಮಾಡುವಾಗ ಬೆಂಕಿ ಕಾಣಿಸಿಕೊಂಡ ಪರಿಣಾಮ ಟ್ಯಾಂಕ್ ಮೇಲಿಂದ ಕೆಳಗೆ ಬಿದ್ದು ವ್ಯಕ್ತಿ ಮೃತಪಟ್ಟಿದ್ದಾರೆ.

Etv Bharat
Etv Bharat

ಮಂಗಳೂರು: ಬೈಕಂಪಾಡಿ ಕೈಗಾರಿಕಾ ಪ್ರದೇಶದ ಕಂಪನಿಯೊಂದರಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಬೆಂಕಿ ಕಾಣಿಸಿಕೊಂಡು ಟ್ಯಾಂಕ್ ಮೇಲ್ಭಾಗದಿಂದ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ರೊನಾಲ್ಡ್ ಪೌಲ್ (64) ಮೃತಪಟ್ಟವರು.

ಜ.13ರಂದು ಜೋನ್ಸ್ ಪೆಟ್ರೋಕೆಮಿಕಲ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ರೊನಾಲ್ಡ್ ಪೌಲ್ ಇತರ 6 ಮಂದಿ ಕಾರ್ಮಿಕರೊಂದಿಗೆ ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು. ಸಂಜೆ 4 ಗಂಟೆಯ ಸುಮಾರಿಗೆ ರೊನಾಲ್ಡ್ ಪೌಲ್ ಟ್ಯಾಂಕ್ ಮೇಲೆ ನಿಂತು ವೆಲ್ಡಿಂಗ್ ಮಾಡುತ್ತಿದ್ದಾಗ ಇತರೆ ಕಾರ್ಮಿಕರು ಮಹಡಿ ಮಟ್ಟದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಪೌಲ್​ಗೆ ಸುಟ್ಟ ಗಾಯಗಳಾಗಿವೆ. ಇದರಿಂದಾಗಿ ಸುಮಾರು 20 ಅಡಿಯ ಟ್ಯಾಂಕ್ ಮೇಲ್ಭಾಗದಿಂದ ಕೆಳಗೆ ಬಿದ್ದಿದ್ದು, ಹೊಟ್ಟೆ ಮತ್ತು ತಲೆಗೆ ತೀವ್ರ ಗಾಯಗಳಾಗಿತ್ತು. ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ.

ಅವಘಡದಲ್ಲಿ ಇತರ ಕೆಲಸಗಾರರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬಳ್ಳಾರಿ: ಬಿಸ್ಕೆಟ್‌ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ, ಕಾರ್ಮಿಕ ಸಾವು

ABOUT THE AUTHOR

...view details